Headlines

ಮಹಾರಾಷ್ಟ್ರದ ಜಲಾಶಯಗಳಿಂದ ಹರಿದ ಕೃಷ್ಣಾ ಮತ್ತು ಭೀಮೆ ಆರ್ಭಟ, ಕಲ್ಬುರ್ಗಿಯಲ್ಲಿ ಪ್ರವಾಹ, ಸರ್ಕಾರದ ಕಟ್ಟೆಚ್ಚರ! | Krishna And Bhima River Flood Situation Karnataka Cm Instructions Gow

ಮಹಾರಾಷ್ಟ್ರದ ಜಲಾಶಯಗಳಿಂದ ಹರಿದ ಕೃಷ್ಣಾ ಮತ್ತು ಭೀಮೆ ಆರ್ಭಟ, ಕಲ್ಬುರ್ಗಿಯಲ್ಲಿ ಪ್ರವಾಹ, ಸರ್ಕಾರದ ಕಟ್ಟೆಚ್ಚರ! | Krishna And Bhima River Flood Situation Karnataka Cm Instructions Gow



ಮಹಾರಾಷ್ಟ್ರದ ಜಲಾಶಯಗಳಿಂದ ಹರಿದ ಕೃಷ್ಣಾ ಮತ್ತು ಭೀಮೆ ಆರ್ಭಟ, ಕಲ್ಬುರ್ಗಿಯಲ್ಲಿ ಪ್ರವಾಹ, ಸರ್ಕಾರದ ಕಟ್ಟೆಚ್ಚರ! | Krishna And Bhima River Flood Situation Karnataka Cm Instructions Gow

ಕಲ್ಬುರ್ಗಿಯಲ್ಲಿ ಸುರಿದ ಮಳೆ ಮತ್ತು ಮಹಾರಾಷ್ಟ್ರದ ಜಲಾಶಯಗಳಿಂದ ಬಿಟ್ಟ ನೀರಿನಿಂದಾಗಿ ಭೀಮಾ ಹಾಗೂ ಬೆಣ್ಣೆತೋರಾ ನದಿಗಳಲ್ಲಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ,  ಸಿಎಂ ತಕ್ಷಣದ ರಕ್ಷಣೆ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. 

ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಕೃಷ್ಣ ನದಿಯ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲ್ಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು…

  • ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸಿಇಒಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ, ಪರಿಸ್ಥಿತಿಯ ನೇರ ಅವಲೋಕನ ಮಾಡಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.
  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕೂಡಲೇ ಜಿಲ್ಲೆಗೆ ಭೇಟಿ ನೀಡಿ ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಮಾರ್ಗದರ್ಶನ ನೀಡಬೇಕು.
  • ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ಹಾಗೂ ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಪ್ರವಾಹದಿಂದ ಹೆಚ್ಚು ತೊಂದರೆ ಉಂಟಾಗಿರುವ ಪ್ರದೇಶಗಳಿಗೆ ತೆರಳಿ ಕಾರ್ಯಾಚರಣೆಯನ್ನು ಪರಿಶೀಲಿಸಬೇಕು.
  • ಮಾನವ ಜೀವಹಾನಿ ಅಥವಾ ಜಾನುವಾರುಗಳ ನಷ್ಟವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು.
  • ಪ್ರವಾಹ ಸಂತ್ರಸ್ತರಿಗೆ ತಕ್ಷಣ ಆಹಾರ ಕೇಂದ್ರಗಳನ್ನು ಸ್ಥಾಪಿಸಿ ಅಗತ್ಯ ಸೇವೆಗಳನ್ನು ಒದಗಿಸಬೇಕು. ಜೊತೆಗೆ, ಜಾನುವಾರುಗಳಿಗೆ ಬೇಕಾದ ಮೇವಿನ ವ್ಯವಸ್ಥೆಯನ್ನು ಕೂಡಲೇ ಕಲ್ಪಿಸಬೇಕು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಆತಂಕ

ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಅದರ ಪರಿಣಾಮವಾಗಿ ಜಲಾಶಯಗಳಿಂದ ನೀರು ಹೊರಬಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಕಲಬುರಗಿ ಜಿಲ್ಲೆಯಲ್ಲಿ ನೀರಿನ ಮಟ್ಟ ಏರಿಕೆಯಿಂದ ನದಿ ತೀರ ಗ್ರಾಮಗಳು ಅತಿದೊಡ್ಡ ಹಾನಿಯ ಅಪಾಯದಲ್ಲಿವೆ.

ಈ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪರಿಸ್ಥಿತಿಯನ್ನು ನಿಕಟವಾಗಿ ಪರಿಶೀಲಿಸಿ, ಜಿಲ್ಲಾಡಳಿತಕ್ಕೆ ತಕ್ಷಣ ಮಾರ್ಗದರ್ಶನ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಸರ್ಕಾರದ ಬದ್ಧತೆ

ಪ್ರವಾಹದಿಂದ ಯಾರಿಗೂ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನೂ, ಸಂತ್ರಸ್ತರಿಗೆ ತಕ್ಷಣ ನೆರವು ತಲುಪಿಸುವುದನ್ನೂ ಸರ್ಕಾರ ಪ್ರಥಮ ಆದ್ಯತೆಯಾಗಿ ಪರಿಗಣಿಸಿದೆ. ಪ್ರಸ್ತುತ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು, ರಾಜ್ಯ ಸರ್ಕಾರವು ರಕ್ಷಣಾ, ಪರಿಹಾರ ಹಾಗೂ ಪುನರ್ವಸತಿ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಜಾರಿಗೆ ತರುವ ನಿರ್ಧಾರ ಕೈಗೊಂಡಿದೆ. ಈ ಮೂಲಕ, ಕಲ್ಯಾಣ ಕರ್ನಾಟಕದ ಜನತೆಗೆ ತೊಂದರೆ ಕಡಿಮೆ ಮಾಡುವತ್ತ ಹಾಗೂ ಪ್ರವಾಹದ ದೋಷಗಳನ್ನು ಹತೋಟಿಗೆ ತರಲು ಸರ್ಕಾರವು ತೀವ್ರ ಚಟುವಟಿಕೆಯನ್ನು ಕೈಗೊಂಡಿದೆ.



Source link

Leave a Reply

Your email address will not be published. Required fields are marked *