ಗ್ಯಾರಂಟಿ ಯೋಜನೆಯಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ: ಸಚಿವ ಬೈರತಿ ಸುರೇಶ್ | Byrati Suresh Bagalkot Bypoll Congress Umesh Meti Campaign Gvd

ಗ್ಯಾರಂಟಿ ಯೋಜನೆಯಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ: ಸಚಿವ ಬೈರತಿ ಸುರೇಶ್ | Byrati Suresh Bagalkot Bypoll Congress Umesh Meti Campaign Gvd



ಗ್ಯಾರಂಟಿ ಯೋಜನೆಯಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ: ಸಚಿವ ಬೈರತಿ ಸುರೇಶ್ | Byrati Suresh Bagalkot Bypoll Congress Umesh Meti Campaign Gvd

ಸಿದ್ದರಾಮಯ್ಯ ಅವರು ರಾಜ್ಯರ ಜನತೆಗೆ ಹಲವು ಭಾಗ್ಯಗಳ ಮೂಲಕ ಕಳೆದ ಮೂರು ವರ್ಷಗಳಿಂದ ಪಂಚ ಗ್ಯಾರಂಟಿ ಯೋಜನೆಗಳಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದ್ದಾರೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ಬಾಗಲಕೋಟೆ (ಏ.02): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯರ ಜನತೆಗೆ ಹಲವು ಭಾಗ್ಯಗಳ ಮೂಲಕ ಕಳೆದ ಮೂರು ವರ್ಷಗಳಿಂದ ಪಂಚ ಗ್ಯಾರಂಟಿ ಯೋಜನೆಗಳಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ನಗರದಲ್ಲಿ ವಿದ್ಯಾಗಿರಿ ಸೇರಿ ಹಲವೆಡೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಮನೆ ಮನೆಗೆ ತೆರಳಿ ಮತ ಯಾಚಿಸಿ ಮಾತನಾಡಿದರು.

ಬಾಗಲಕೋಟೆ ಮತ್ತು ಸುತ್ತಮುತ್ತಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ವೈದ್ಯಕೀಯ ಕಾಲೇಜು ಕನಸು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನನಸಾಗಿದೆ. ಹಿಂದಿನ ಬಿಜೆಪಿ ಸರಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಆದರೆ ಎಚ್.ವೈ.ಮೇಟಿ ಶಾಸಕರಾದ ಬಳಿಕ ಬಾಗಲಕೋಟೆಗೆ ವೈದ್ಯಕೀಯ ಕಾಲೇಜು ಮಂಜೂರಾತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಎಚ್.ವೈ.ಮೇಟಿ ತಮ್ಮ ಅಧಿಕಾರ ಅವಧಿಯಲ್ಲಿ ಬಾಗಲಕೋಟೆ ಜಿಲ್ಲೆಯ ಪ್ರಗತಿಗೆ ಶ್ರಮಿಸಿದ್ದಾರೆ. ಉಮೇಶ ಮೇಟಿ ಅವರು ಜನಪರ ಕಾಳಜಿವುಳ್ಳವರು. ಉಮೇಶ ಅವರಿಗೆ ಅಮೂಲ್ಯವಾದ ಮತ ಚಲಾಯಿಸಿ ಗೆಲುವು ತಂದುಕೊಡಬೇಕು. ಬಿಜೆಪಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಸುಳ್ಳು ಹೇಳಿಕೆ ನೀಡಿ ಜನರಿಗೆ ಮೋಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೆಲುವಿಗೆ ಶ್ರಮಿಸಿ

ಈ ನಡುವೆ ಸಚಿವ ಬೈರತಿ ಸುರೇಶ್ ಅವರು ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಜೊತೆ ಸಭೆ ನಡೆಸಿ, ರಾಜ್ಯ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಮತದಾರರಿಗೆ ಮನವರಿಕೆ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರ ಗೆಲುವಿಗೆ ಶ್ರಮಿಸುವಂತೆ ಕಿವಿಮಾತು ಹೇಳಿದರು. ಶಾಸಕ ರಾಘವೇಂದ್ರ ಹಿಟ್ನಾಳ, ಮಲ್ಲಿಕಾರ್ಜುನ ಮೇಟಿ, ರಕ್ಷಿತಾ ಭರತಕುಮಾರ ಈಟಿ, ಶ್ರೀಶೈಲ ದಳವಾಯಿ ಇತರರು ಇದ್ದರು.



Source link

Leave a Reply

Your email address will not be published. Required fields are marked *