Headlines

Gulf War Crisis ಇದನ್ನು ನಾವು ತಾಳ್ಮೆ, ಒಗ್ಗಟ್ಟಿನಿಂದ ಎದುರಿಸಬೇಕು, ರಾಜಕೀಯಕ್ಕಾಗಿ ಟೀಕೆ ಬೇಡ: ವಿಪಕ್ಷಕ್ಕೆ ಮೋದಿ ಮನವಿ | Gulf War Crisis Pm Modi Appeals For National Unity Slams Opposition For Politicizing Conflict Rav

ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗುವ ಸವಾಲುಗಳನ್ನು ಭಾರತ ಎದುರಿಸುತ್ತಿದೆ. ಇಂಥ ಸಮಯದಲ್ಲಿ ದೇಶದ ಜನರು ತಾಳ್ಮೆ ವಹಿಸಬೇಕು, ರಾಜಕೀಯ ಪಕ್ಷಗಳು ಬೇಜವಾಬ್ದಾರಿ ಹೇಳಿಕೆ ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ಪಿಟಿಐ ನೋಯ್ಡಾ (ಮಾ.29): ‘ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉದ್ಭವಿಸುವ ಸವಾಲುಗಳನ್ನು ಭಾರತ ಪೂರ್ಣ ಬಲದಿಂದ ಎದುರಿಸುತ್ತಿದೆ. ಇಂಥ ಸಂದರ್ಭದಲ್ಲಿ ದೇಶದ ಜನರು ತಾಳ್ಮೆ ವಹಿಸಬೇಕು. ರಾಜಕೀಯ ಪಕ್ಷಗಳು ಬೇಜವಾಬ್ದಾರಿ ಹೇಳಿಕೆಗಳನ್ನು ನಿಲ್ಲಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದ ಜೇವಾರ್‌ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ನಂತರ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, ‘ಪಶ್ಚಿಮ ಏಷ್ಯಾದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಸಂಘರ್ಷ ಮುಂದುವರೆದಿದೆ. ಭಾರತ ಈ ಸವಾಲನ್ನು ಪೂರ್ಣ ಶಕ್ತಿಯಿಂದ ಎದುರಿಸುತ್ತಿದೆ. ದೇಶವು ತನ್ನ ನಾಗರಿಕರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ’ ಎಂದು ಪ್ರತಿಪಾದಿಸಿದರು.

‘ಭಾರತವು ಸಂಘರ್ಷ ಪೀಡಿತ ಪ್ರದೇಶಗಳಿಂದ ಕಚ್ಚಾ ತೈಲ ಮತ್ತು ಅನಿಲವನ್ನು ಅವಲಂಬಿಸಿದೆ ಎಂದು ಒತ್ತಿ ಹೇಳಿದ ಮೋದಿ, ‘ಸಾಮಾನ್ಯ ನಾಗರಿಕರು ಮತ್ತು ರೈತರ ಮೇಲೆ ಹೊರೆ ಬೀಳದಂತೆ ನೋಡಿಕೊಳ್ಳಲು ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ಹೇಳಿದರು.

ಅಲ್ಲದೆ, ‘ವಿಕಸಿತ ಭಾರತ’ ನಿರ್ಮಿಸಲು ಹಾಗೂ ಜಾಗತಿಕ ಸವಾಲುಗಳನ್ನು ಎದುರಿಸಲು 140 ಕೋಟಿ ನಾಗರಿಕರಲ್ಲಿ ಸಾಮೂಹಿಕ ಪ್ರಯತ್ನ ಮತ್ತು ಏಕತೆಯ ಅಗತ್ಯವಿರುತ್ತದೆ ಎಂದು ಹೇಳಿದರು.

ತಾಳ್ಮೆ ಇರಲಿ, ಬೇಜವಾಬ್ದಾರಿ ಹೇಳಿಕೆ ಬೇಡ:

‘ಯುದ್ಧದ ಬಿಕ್ಕಟ್ಟನ್ನು ನಾವು ಶಾಂತವಾಗಿ, ತಾಳ್ಮೆ ಮತ್ತು ಒಗ್ಗಟ್ಟಿನಿಂದ ಎದುರಿಸಬೇಕು. ಇದು ಜಾಗತಿಕ ಬಿಕ್ಕಟ್ಟು, ಆದರೆ ನಾವು ಭಾರತದ ಹಿತಾಸಕ್ತಿಗಳಿಗೆ ಆದ್ಯತೆ ನೀಡಬೇಕು. ಅದು ನಮ್ಮ ದೊಡ್ಡ ಶಕ್ತಿ’ ಎಂದು ಅವರು ಹೇಳಿದರು.‘ಸಂಸತ್ತಿನಲ್ಲಿ ಪರಿಸ್ಥಿತಿಯ ಬಗ್ಗೆ ವಿವರವಾಗಿ ಚರ್ಚಿಸಿದ್ದೇನೆ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವ್ಯಾಪಕ ಮತ್ತು ತುಂಬಾ ಸಕಾರಾತ್ಮಕ ಚರ್ಚೆ ನಡೆಸಿದ್ದೇನೆ’ ಎಂದರು.

‘ಇಂತಹ ಸಮಯದಲ್ಲಿ ರಾಜಕೀಯ ಪಕ್ಷಗಳು ಬೇಜವಾಬ್ದಾರಿಯುತ ಹೇಳಿಕೆ ನೀಡಬಾರದು. ದೇಶಕ್ಕೆ ಹಾನಿ ಮಾಡುವ ಹೇಳಿಕೆಗಳನ್ನು ನೀಡುವವರು ರಾಜಕೀಯ ಚರ್ಚೆಗಳಲ್ಲಿ ಕೆಲವು ‘ಅಂಕ’ಗಳನ್ನು ಗಳಿಸಬಹುದು, ಆದರೆ ಅಂತಹ ಕ್ರಮಗಳನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ. ಕೋವಿಡ್‌-19 ಸಾಂಕ್ರಾಮಿಕ ಸಮಯದಲ್ಲಿ ಮತದಾರರು ತಪ್ಪು ಮಾಹಿತಿ ಅಭಿಯಾನಗಳನ್ನು ತಿರಸ್ಕರಿಸಿದ್ದರು’ ಎಂದು ನೆನಪಿಸಿಕೊಂಡರು.

Source link

Leave a Reply

Your email address will not be published. Required fields are marked *