ಪ್ರಮಾಣ ವಚನ ಸ್ವೀಕರಿಸಿದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್, ಪ್ರತಿಜ್ಞಾವಿಧಿ ಬೋಧಿಸಿದ ಮುರ್ಮು | Cp Radhakrishnan Takes Oath As 15th Vice President Of India

Vice precedent oath ceremony  ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಗೆಲುವು ದಾಖಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. 

ನವದೆಹಲಿ (ಸೆ.12) ನೂತನ ಉಪ ರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 67 ವರ್ಷದ ಸಿಪಿ ರಾಧಾಕೃಷ್ಣನ್ ಇತ್ತೀಚೆಗೆ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವರು ಗಣ್ಯರು ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಚುನಾವಣೆಯಲ್ಲಿ ಬಿ ಸುದರ್ಶನ್ ರೆಡ್ಡಿ ಸೋಲಿಸಿದ ರಾಧಾಕೃಷ್ಣನ್

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲಾರಾಗಿದ್ದ ಸಿಪಿ ರಾಧಾ ಕೃಷ್ಣನ್ ವಿರುದ್ಧ ಇಂಡಿಯಾ ಮೈತ್ರಿ ಒಕ್ಕೂಟದ ಅಭ್ಯರ್ಥಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ ಸುದರ್ಶನ ರೆಡ್ಡಿ ಸ್ಪರ್ಧಿಸಿದ್ದರು. ಎನ್‌ಡಿಎ ಮೈತ್ರಿ ಪಕ್ಷಗಳ ಸದಸ್ಯರು ರಾಧಾಕೃಷ್ಣನ್‌ಗೆ ಮತ ಹಾಕಿದ್ದರೆ, ಇಂಡಿಯಾ ಒಕ್ಕೂಟದ ಸದಸ್ಯರು ಅಡ್ಡ ಮತದಾನ ಮಾಡಿದ್ದರು. ಈ ಮೂಲಕ 752 ಒಟ್ಟು ಮತಗಳ ಪೈಕಿ 452 ಮತ ಪಡೆದು ಗೆಲುವು ಸಾಧಿಸಿದ್ದರು. 152 ಮತಗಳ ಅಂತರದಲ್ಲಿ ಸಿಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದರು.

Source link

Leave a Reply

Your email address will not be published. Required fields are marked *