ಹವ್ಯಕ ಭಾಷಾ ಅಕಾಡೆಮಿ ಘೋಷಣೆ ಸ್ವಾಗತಿಸಿದ ರಾಮಚಂದ್ರಾಪುರ ಮಠ | Havyaka Bhasha Academy | Karnataka Budget 2026 Highlights Ramachandrapura Matha Welcomes State Govt Dicision To Havyaka Academy

ಹವ್ಯಕ ಭಾಷಾ ಅಕಾಡೆಮಿ ಘೋಷಣೆ ಸ್ವಾಗತಿಸಿದ ರಾಮಚಂದ್ರಾಪುರ ಮಠ | Havyaka Bhasha Academy | Karnataka Budget 2026 Highlights Ramachandrapura Matha Welcomes State Govt Dicision To Havyaka Academy



ಹವ್ಯಕ ಭಾಷಾ ಅಕಾಡೆಮಿ ಘೋಷಣೆ ಸ್ವಾಗತಿಸಿದ ರಾಮಚಂದ್ರಾಪುರ ಮಠ | Havyaka Bhasha Academy | Karnataka Budget 2026 Highlights Ramachandrapura Matha Welcomes State Govt Dicision To Havyaka Academy

ಹವಿಗನ್ನಡದ ಸಂರಕ್ಷಣೆ ಮತ್ತು ಸಂವರ್ಧನೆಗಾಗಿ ‘ಹವ್ಯಕ ಭಾಷಾ ಅಕಾಡೆಮಿ’ ಸ್ಥಾಪಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ಐತಿಹಾಸಿಕ ತೀರ್ಮಾನವನ್ನು ರಾಮಚಂದ್ರಾಪುರ ಮಠ ಮತ್ತು ಹವ್ಯಕ ಮಹಾಸಭೆ ಸ್ವಾಗತಿಸಿದ್ದು, ಇದು ಭಾಷೆಯ ಉಳಿವು ಹಾಗೂ ಅಧ್ಯಯನಕ್ಕೆ ಉತ್ತೇಜನ ನೀಡಲಿದೆ ಎಂದು ಆಶಯ ವ್ಯಕ್ತಪಡಿಸಿವೆ

ಮಂಗಳೂರು(ಮಾ.7): ಹವಿಗನ್ನಡದ ಸಂವರ್ಧನೆಗಾಗಿ ‘ಹವ್ಯಕ ಭಾಷಾ ಅಕಾಡೆಮಿ’ ಸ್ಥಾಪಿಸುವ ಸರ್ಕಾರದ ನಿರ್ಧಾರವನ್ನು ರಾಮಚಂದ್ರಾಪುರ ಮಠ ಸ್ವಾಗತಿಸಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಕೃತಜ್ಞತೆ ಸಲ್ಲಿಸಿದೆ. 

ಮಾತೃಭಾಷೆಯ ಉಳಿವು ಹಾಗೂ ಜಾಗೃತಿಗಾಗಿ ಕಳೆದ ವರ್ಷದ ತಮ್ಮ ಚಾತುರ್ಮಾಸ್ಯವನ್ನು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ‘ಸ್ವಾಭಾಷಾ ಚಾತುರ್ಮಾಸ್ಯ’ವಾಗಿ ಆಚರಿಸಿದ್ದರು. ಭಾಷೆಯ ಕುರಿತಾಗಿ ನಾಡಿನಾದ್ಯಂತ ಜಾಗೃತಿ ಮೂಡಿಸಿದ್ದರು. ಇದೀಗ ಕನ್ನಡದ ಉಪಭಾಷೆ ಹವಿಗನ್ನಡದ ಸಂರಕ್ಷಣೆಗೆ ಸರ್ಕಾರವೇ ಮುಂದಾಗಿರುವುದು ಅಭಿನಂದನೀಯ ಎಂದು ಮಠ ಹೇಳಿದೆ.

 ಸರ್ಕಾರದ ಈ ನಿರ್ಧಾರ ಹವ್ಯಕ ಭಾಷೆಯ ಉಳಿವು, ಬೆಳವಣಿಗೆ ಹಾಗೂ ಅದರ ಅಧ್ಯಯನ ಮತ್ತು ಸಂಶೋಧನೆಗೆ ಹೊಸ ಉತ್ತೇಜನ ನೀಡಲಿದೆ. ಅಲ್ಲದೆ, ಅಕಾಡೆಮಿಯ ಮೂಲಕ ಭಾಷೆಯ ಪ್ರಚಾರ ಹಾಗೂ ಯುವಪೀಳಿಗೆಗೆ ಅದರ ಮಹತ್ವ ಪರಿಚಯಿಸುವ ಕಾರ್ಯಗಳು ಇನ್ನಷ್ಟು ವೇಗ ಪಡೆಯಲಿವೆ ಎಂದು ಅದು ಆಶಿಸಿದೆ.

ಹವ್ಯಕ ಮಹಾಸಭೆ ಅಭಿನಂದನೆ

ಗೋಕರ್ಣ: ಹವಿಗನ್ನಡದ ಸಂರಕ್ಷಣೆ ಹಾಗೂ ಸಂವರ್ಧನೆಗಾಗಿ ಭಾಷಾ ಅಕಾಡೆಮಿಯನ್ನು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕರ್ನಾಟಕ ಸರ್ಕಾರದ ನಿಲುವನ್ನು ಹವ್ಯಕ ಮಹಾಸಭೆ ಸ್ವಾಗತಿಸಿದೆ.

ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯದಂತೆ ಹಳೆಗನ್ನಡಕ್ಕೆ ಸಮೀಪವಾದ, ವಿಶಿಷ್ಟ ಲಕ್ಷಣಗಳನ್ನು ಒಳಗೊಂಡ, ಭಾಷಾ ಶ್ರೀಮಂತಿಕೆಯಿಂದ ಕೂಡಿದ ಹವ್ಯಕ ಭಾಷೆಯ ಸಂರಕ್ಷಣೆ ಹಾಗೂ ಸಂವರ್ಧನೆಗಾಗಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸುವಂತೆ ಅಖಿಲ ಹವ್ಯಕ ಮಹಾಸಭೆಯು ಮಾಡಿದ ಮನವಿಯನ್ನು ಪರಿಗಣಿಸಿ ಮುಖ್ಯಮಂತ್ರಿಗಳು ಹವ್ಯಕ ಭಾಷಾ ಅಕಾಡೆಮಿಯನ್ನು ಈ ವರ್ಷದ ಆಯವ್ಯಯ ಪತ್ರದಲ್ಲಿ ಘೋಷಿಸಿರುವುದು ಸಂತಸದ ತಂದಿದೆ ಎಂದು ಮಹಾಸಭೆಯ ಪ್ರಕಟಣೆ ತಿಳಿಸಿದೆ.

ಹವಿಗನ್ನಡ, ಹವ್ಯಕ ಕನ್ನಡ, ಹೈವಗನ್ನಡ, ಹೈಗಭಾಷೆ ಎಂಬ ಹೆಸರುಗಳಿಂದ ಗುರುತಿಸಲ್ಪಡುವ ಹವ್ಯಕ ಭಾಷೆಯು ಕನ್ನಡದ ಸಾಮಾಜಿಕ ಉಪಭಾಷೆಯಾಗಿದ್ದು, ಭಾಷಾ ವೈವಿಧ್ಯ ಹಾಗೂ ಭಾಷಾ ಶ್ರೀಮಂತಿಕೆ ಕಾರಣದಿಂದಾಗಿ ಭಾಷಾ ಜಗತ್ತಿನಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿದೆ. ಪ್ರಾಂತ್ಯವಾರು ಭಾಷಾ ವೈವಿಧ್ಯ ಹವಿಗನ್ನಡದ ಶ್ರೀಮಂತಿಕೆಯ ಪ್ರತೀಕವಾಗಿದ್ದು, ಉತ್ತರಕನ್ನಡ, ದಕ್ಷಿಣಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಕಾಸರಗೋಡು ಮುಂತಾದ ಪ್ರದೇಶಗಳಲ್ಲಿ ವಾಸವಾಗಿರುವ ೬ ಲಕ್ಷಕ್ಕೂ ಅಧಿಕ ಹವ್ಯಕರ ಮನೆ ಮಾತಾಗಿದೆ ಎಂದಿದೆ.

ಕನ್ನಡ ಭಾಷೆಯ ಇತಿಹಾಸ ಅರ್ಥಮಾಡಿಕೊಳ್ಳಲು ಹವಿಗನ್ನಡದ ಅಧ್ಯಯನ ಬಹಳ ಮುಖ್ಯವಾಗಿದ್ದು, ಇದುವರೆಗೆ ಲಭ್ಯವಿರುವ ಅತ್ಯಂತ ಹಳೆಯ ಕನ್ನಡ ಸಾಹಿತ್ಯ ಮತ್ತು ಶಾಸನಗಳಲ್ಲಿಯೂ ಕಂಡುಬರುವ ಕೆಲವು ಆದಿ-ದ್ರಾವಿಡ ಲಕ್ಷಣಗಳನ್ನು ಹವಿಗನ್ನಡವು ಇಂದಿಗೂ ಉಳಿಸಿಕೊಂಡಿದೆ. ಆದ್ದರಿಂದ ಹವಿಗನ್ನಡದ ಅಮೂಲಾಗ್ರ ಅಧ್ಯಯನ ಹಾಗ ಸಂರಕ್ಷಣೆಗಾಗಿ ಹವ್ಯಕ ಭಾಷಾ ಅಕಾಡೆಮಿಯ ಸ್ಥಾಪನೆ ಅತ್ಯಗತ್ಯವಾಗಿತ್ತು. ಈ ಹಿನ್ನೆಲೆ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವ ನಿರ್ಧಾರ ಅಭಿನಂದನಾರ್ಹ ಎಂದು ಮಹಾಸಭೆ ಅಧ್ಯಕ್ಷ ಡಾ. ಗಿರಿಧರ ಕಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *