Shivamogga: ಒಂದೇ ಕುಟುಂಬದ ನಾಲ್ವರು ನೀರುಪಾಲು: ಮಕ್ಕಳೊಂದಿಗೆ ತವರಿಗೆ ಬಂದಿದ್ದ ಮಗಳು | Four Members Of The Same Family Drowned In Bhadra Canal River Shivamogga Mrq

Shivamogga: ಒಂದೇ ಕುಟುಂಬದ ನಾಲ್ವರು ನೀರುಪಾಲು: ಮಕ್ಕಳೊಂದಿಗೆ ತವರಿಗೆ ಬಂದಿದ್ದ ಮಗಳು | Four Members Of The Same Family Drowned In Bhadra Canal River Shivamogga Mrq



Shivamogga: ಒಂದೇ ಕುಟುಂಬದ ನಾಲ್ವರು ನೀರುಪಾಲು: ಮಕ್ಕಳೊಂದಿಗೆ ತವರಿಗೆ ಬಂದಿದ್ದ ಮಗಳು | Four Members Of The Same Family Drowned In Bhadra Canal River Shivamogga Mrq

ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ, ಬಟ್ಟೆ ತೊಳೆಯಲು ಭದ್ರಾ ನಾಲೆಗೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಕಾಲು ಜಾರಿ ನೀರುಪಾಲಾಗಿದ್ದಾರೆ. ತಾಯಿ-ಮಗಳು ಮೊದಲು ನಾಲೆಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ಮಗ ಮತ್ತು ಅಳಿಯ ಕೂಡ ನೀರಿನಲ್ಲಿ ಮುಳುಗಿದ್ದಾರೆ. 

ಹೊಳೆಹೊನ್ನೂರು: ಸಮೀಪದ ಕೂಡ್ಲಿಗೆರೆ ಬಳಿಯ ಅರಬಿಳಚಿ ಗ್ರಾಮದ ಒಂದೇ ಕುಟುಂಬದ ನಾಲ್ವರು ಬಟ್ಟೆ ಒಗೆಯುವ ಸಂದರ್ಭದಲ್ಲಿ ಕಾಲು ಜಾರಿ ಭದ್ರಾ ನಾಲೆಗೆ ಉರುಳಿ ಬಿದ್ದು ಮೃತಪಟ್ಟ ದುರ್ಘಟನೆ ಭಾನುವಾರ ನಡೆದಿದೆ. ಈವರೆಗೂ ನಾಲ್ವರ ಶವ ಪತ್ತೆಯಾಗಿಲ್ಲ. ಸದ್ಯ ನಾಪತ್ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರ ಪತ್ತೆಗೆ ತೀವ್ರ ಕ್ರಮ ಕೈಗೊಂಡಿದ್ದಾರೆ.

ಅರೆಬಳಚಿ ಗ್ರಾಮದ ನೀಲಾಬಾಯಿ (50), ಮಗ ರವಿಕುಮಾರ್ (23), ಮಗಳು ಶ್ವೇತಾ (24) ಮತ್ತು ಅಳಿಯ ಪರಶುರಾಮ (28) ನೀರು ಪಾಲಾದ ದುರ್ದೈವಿಗಳು.

ಘಟನೆ ವಿವರ ಏನು?

ಕುಟುಂಬದ ನಾಲ್ವರು ಕೂಡ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಎರಡು ಬೈಕ್‌ಗಳಲ್ಲಿ ಬಟ್ಟೆ ತೊಳೆಯಲು ಭದ್ರಾ ನಾಲೆಯತ್ತ ಹೊಗಿದ್ದಾರೆ. ತಾಯಿ ನೀಲಾಬಾಯಿ ಮತ್ತು ಮಗಳು ಶ್ವೇತಾ ಬಟ್ಟೆ ಒಗೆಯಲು ಮುಂದಾಗಿದ್ದಾರೆ. ಈ ವೇಳೆಯಲ್ಲಿ ತಾಯಿ, ಮಗಳು ಕಾಲು ಜಾರಿ ನಾಲೆಗೆ ಬಿದ್ದಿದ್ದಾರೆ. ತಕ್ಷಣವೇ ಇವರನ್ನು ರಕ್ಷಿಸಲು ಮಗ ರವಿಕುಮಾರ್‌ ಮತ್ತು ಅಳಿಯ ಪರಶುರಾಮ್‌ ನಾಲೆಗೆ ಧುಮುಕಿದ್ದಾರೆ. ಆದರೆ ನಾಲ್ವರು ಕೂಡ ನೀರಿನಿಂದ ಮೇಲೆ ಬರಲು ಸಾಧ್ಯವಾಗಲಿಲ್ಲ. ಈ ಸಂದರ್ಭದಲ್ಲಿ ಆ ಸ್ಥಳದಲ್ಲಿ ಯಾರೂ ಇರಲಿಲ್ಲ ಎನ್ನಲಾಗುತ್ತಿದೆ.

ಅರಬಿಳಚಿ ಗ್ರಾಮದ ನೀಲಾಬಾಯಿ ಮಗಳಾದ ಶ್ವೇತಾ ಅವರನ್ನು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮದ ಪರಶುರಾಮ ಎಂಬುವವರಿಗೆ ಮದುವೆ ಮಾಡಿಕೊಡಲಾಗಿತ್ತು.

ಹಬ್ಬಕ್ಕಾಗಿ ಊರಿಗೆ ಬಂದಿದ್ದ ಮಗಳು

ಅರಬಿಳಚಿ ಗ್ರಾಮದಲ್ಲಿ ಜ.12 ರಿಂದ 16ರವರೆಗೆ ಮಾರಿಕಾಂಬ ಜಾತ್ರಾಮಹೋತ್ಸವ ಅದ್ದೂರಿಯಾಗಿ ಜರುಗಿದ್ದು, ಈ ಹಬ್ಬಕ್ಕಾಗಿ ಮಗಳು ಶ್ವೇತಾ ತಮ್ಮ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ತವರಿಗೆ ಆಗಮಿಸಿದ್ದರು. ಮನೆಗೆ ಹೆಚ್ಚು ಜನ ನೆಂಟರು ಆಗಮಿಸಿದ್ದರಿಂದ ಈ ಕುಟುಂಬ ಬಟ್ಟೆ ತೊಳೆಯಲೆಂದು ನಾಲೆಗೆ ಬಂದಿದ್ದರು.

ಇದನ್ನೂ ಓದಿ: Lakkundi: ನಾಲ್ಕನೇ ದಿನದ ಉತ್ಖನನ ಕಾರ್ಯಕ್ಕೆ ಎದುರಾಯ್ತು ಮತ್ತೊಂದು ವಿಘ್ನ; ಆಯುಧ ಮಾದರಿಯ ಕಲ್ಲು ಪತ್ತೆ

ನಾಲೆಯ ದಡದಲ್ಲಿ ಬಟ್ಟೆ ಹಾಗೂ ಎರಡು ಬೈಕ್ ಗಳನ್ನು ಕಂಡ ಸ್ಥಳೀಯರು ಸ್ಥಳದಲ್ಲಿ ಯಾರೂ ಇಲ್ಲದ್ದರಿಂದ ಅನುಮಾನಗೊಂಡು ಪಟ್ಟಣದ ಠಾಣೆಗೆ ದೂರವಾಣಿ ಮುಖಾಂತರ ಮಾಹಿತಿ ನೀಡಿದ್ದಾರೆ. ಬೈಕ್‌ ಸಂಖ್ಯೆ ಆಧಾರದಲ್ಲಿ ಸಂಪರ್ಕಿಸಿದಾಗ ನಾಲೆಗೆ ಬಂದವರ ಮಾಹಿತಿ ದೊರಕಿದೆ. ಡಿವೈಎಸ್ಪಿ ಕಾರ್ಯಪ್ಪನವರ ನೇತೃತ್ವದಲ್ಲಿ ಪಿಐ ಶಿವಪ್ರಸಾದ್, ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇದನ್ನೂ ಓದಿ: Video: ಮಧ್ಯರಾತ್ರಿ ಕಿರಿಕ್; ಮನೆಯವರೆಗೂ ತಂದು ಗ್ರಾಹಕನ ಆಹಾರ ತಿಂದ ಡೆಲಿವರಿ ಬಾಯ್



Source link

Leave a Reply

Your email address will not be published. Required fields are marked *