Headlines

ಗ್ರಾಮ ಪಂಚಾಯಿತಿ ನೀರುಗಂಟಿಯ ಡೆತ್‌ನೋಟ್‌ನಲ್ಲಿತ್ತು 11 ತಿಂಗಳ ಸಂಬಳದ ನೋವಿನ ಕಥೆ! | Chikkamagalur The Death Note Of A Gram Panchayat Employee Contained A Painful Story Of 11 Months Salary Mrq

ಗ್ರಾಮ ಪಂಚಾಯಿತಿ ನೀರುಗಂಟಿಯ ಡೆತ್‌ನೋಟ್‌ನಲ್ಲಿತ್ತು 11 ತಿಂಗಳ ಸಂಬಳದ ನೋವಿನ ಕಥೆ! | Chikkamagalur The Death Note Of A Gram Panchayat Employee Contained A Painful Story Of 11 Months Salary Mrq



ಗ್ರಾಮ ಪಂಚಾಯಿತಿ ನೀರುಗಂಟಿಯ ಡೆತ್‌ನೋಟ್‌ನಲ್ಲಿತ್ತು 11 ತಿಂಗಳ ಸಂಬಳದ ನೋವಿನ ಕಥೆ! | Chikkamagalur The Death Note Of A Gram Panchayat Employee Contained A Painful Story Of 11 Months Salary Mrq

ಚಿಕ್ಕಮಗಳೂರು ತಾಲೂಕಿನಲ್ಲಿ 11 ತಿಂಗಳಿಂದ ಸಂಬಳ ನೀಡದ ಕಾರಣ ನೀರುಗಂಟಿಯೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ, ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬ್ಯಾಟ್‌ನಿಂದ ಹೊಡೆದು ಕೊಲೆ ಮಾಡಲಾಗಿದೆ.

ಚಿಕ್ಕಮಗಳೂರು: ಡೆತ್‌ನೋಟ್ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮ*ಹತ್ಯೆ ಮಾಡಿಕೊಂಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ನಡೆದಿದೆ. ಆಣೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್(47) ನೇಣಿಗೆ ಶರಣಾದ ವ್ಯಕ್ತಿ. 11 ತಿಂಗಳಿಂದ ಸಂಬಳ ನೀಡಿಲ್ಲ, ಸಾಲಗಾರರ ಕಾಟ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಆಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೆತ್‌ನೋಟ್‌ನಲ್ಲಿ ಏನಿದೆ?

ನಾನು ತುಂಬಾ ವರ್ಷದಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನನಗೆ 11 ತಿಂಗಳ ವೇತನ ಕೊಟ್ಟಿಲ್ಲ ಹಾಗೂ ಸಂಘದವರು ಮನೆಗೆ ಬಂದು ಹಣ ಕಟ್ಟುವಂತೆ ನನಗೆ ಮತ್ತು ನಮ್ಮ ಮನೆಯವರಿಗೆ ತೊಂದರೆ ಕೊಡುತ್ತಿದ್ದಾರೆ. ಹಾಗಾಗಿ ನನಗೆ ತುಂಬಾ ಮನಸ್ಸಿಗೆ ಬೇಜಾರಾಗಿದೆ.

ಫೈನಾನ್ಸ್‌ನಲ್ಲಿ ಸಾಲ ಮಾಡಿರುವೆ, ಸಂಬಳ ನೀಡದಿದ್ದಕ್ಕೆ ಸಾಲಕಟ್ಟಲು ಆಗುತ್ತಿಲ್ಲ. RBL, SKS, ಗ್ರಾಮಿಣಕೂಟ, ಮುತ್ತೂಟ್ ಫೈನಾನ್ಸ್‌ ಸಿಬ್ಬಂದಿ ಮನೆಗೆ ಬಂದು ಮನೆಯವರಿಗೂ ಕಿರುಕುಳ ನೀಡುತ್ತಿದ್ದಾರೆ. ಇನ್ನು ಗ್ರಾಮ ಪಂಚಾಯಿತಿ ಕಚೇರಿಯಲ್ಲೂ ಕೆಲವರು ಕೆಲಸ ಮಾಡಲು ಬಿಡುತ್ತಿಲ್ಲವೆಂದು ಅವರ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಬ್ಯಾಟ್‌ನಿಂದ ಹೊಡೆದು ವ್ಯಕ್ತಿಯ ಕೊಂದು ಪರಾರಿ

ಕ್ಷುಲ್ಲಕ್ಕ ಕಾರಣಕ್ಕೆ ಬ್ಯಾಟ್‌ನಿಂದ ಹಲ್ಲೆ ಮಾಡಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಷಿದ್‌ ಪಾಷ (45) ಮೃತ ವ್ಯಕ್ತಿ. ಭಾನುವಾರ ರಾತ್ರಿ ವಿಲ್ಸನ್‌ ಗಾರ್ಡನ್‌ನಿನ ಬಡಾ ಮಖಾನ್‌ ಬಳಿ ಈ ಘಟನೆ ನಡೆದಿದ್ದು, ಈ ಸಂಬಂಧ ದೂರು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. 

ಇದನ್ನೂ ಓದಿ: ಕಲಬುರಗಿ: 8 ದಿನದ ಕರುವನ್ನು ತೊಟ್ಟಿಲಲ್ಲಿ ಮಲಗಿಸಿ ಅದ್ದೂರಿ ನಾಮಕರಣ: ಗೋ ಸೇವಕರಿಗೆ ಸನ್ಮಾನ

ಭಾನುವಾರ ರಾತ್ರಿ 9 ಗಂಟೆಯ ಸುಮಾರಿಗೆ ಯಾವುದೋ ವಿಚಾರಕ್ಕೆ ಗಲಾಟೆಯಾಗಿದ್ದು, ಈ ವೇಳೆ ಮೂವರು ಬ್ಯಾಟನಿಂದ ಹೊಡೆದು ರಷಿದ್‌ ಪಾಷನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ವಿಲ್ಸನ್‌ ಗಾರ್ಡ್‌ನ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ ತಾಲೂಕಿನ ಇರಕಲ್ ಗಡ ಸಮೀಪ ಆಹಾರ ಅರಸಿ ಬಂದ ಕರಡಿ ವಿದ್ಯುತ್ ತಂತಿ ಸ್ಪರ್ಶಿಸಿ ದಾರುಣ ಸಾವು; ರಣ್ಯ ಇಲಾಖೆ ವಿರುದ್ಧಆಕ್ರೋಶ



Source link

Leave a Reply

Your email address will not be published. Required fields are marked *