Headlines

ಒಡಿಶಾ ಕಾಂಗ್ರೆಸ್ ಶಾಸಕರಿಗೆ 5 ಕೋಟಿ ಆಮಿಷ: ಬಿಡದಿಯಲ್ಲಿ ನಾಲ್ವರ ವಿರುದ್ಧ ಪ್ರಕರಣ | Operation Lotus 5 Crore Cheque Odisha Congress Mlas Case Against Four In Bidadi Mrq

ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ತಂಗಿದ್ದ ಒಡಿಶಾ ಕಾಂಗ್ರೆಸ್ ಶಾಸಕರಿಗೆ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ₹5 ಕೋಟಿ ಆಮಿಷವೊಡ್ಡಿ, ಕೊಲೆ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಶಾಸಕ ಅಶೋಕ್ ಕುಮಾರ್ ದಾಸ್ ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರ: ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ಒಡಿಶಾದ ಕಾಂಗ್ರೆಸ್ ಶಾಸಕರಿಗೆ ₹5 ಕೋಟಿ ಆಮಿಷವೊಡ್ಡುವುದರ ಜೊತೆಗೆ ಕೊಲೆ ಬೆದರಿಕೆ ಹಾಕಿದ್ದ ನಾಲ್ವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಡಿಶಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕ ಅಶೋಕ್ ಕುಮಾರ್ ದಾಸ್ ನೀಡಿದ ದೂರಿನ ಮೇರೆಗೆ ಬೀರೇಂದ್ರ ಪ್ರಸಾದ್, ಸುರೇಶ್, ಅಜಿತ್ ಕುಮಾರ್ ಸಾಹು ಹಾಗೂ ಸಿಮಾಚಲ ಮೊಹಕುದ್ ಎಂಬುವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೂರಿನಲ್ಲಿ ಏನಿದೆ?:

ಮಾರ್ಚ್ 16ರಂದು ಒಡಿಶಾದಲ್ಲಿ ರಾಜ್ಯಸಭಾ ಚುನಾವಣೆ ನಡೆಯುತ್ತಿದೆ. ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಿಜೆಪಿ ಸರ್ಕಾರ, ಕಾಂಗ್ರೆಸ್ ಶಾಸಕರನ್ನು ಅಪಹರಿಸಲು ಪ್ರಯತ್ನಿಸುತ್ತಿದೆ. ಆದ್ದರಿಂದ 8 ಮಂದಿ ಕಾಂಗ್ರೆಸ್ ಶಾಸಕರು ಸುರಕ್ಷತೆಗಾಗಿ ಮಾರ್ಚ್ 12 ರಂದು ಬೆಂಗಳೂರಿಗೆ ಬಂದು ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದೇವೆ.

ಇದನ್ನೂ ಓದಿ: Hassan: ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಅದಲು ಬದಲು: 6 ವಿದ್ಯಾರ್ಥಿಗಳಿಗೆ ಅನ್ಯಾಯ

ಕೊಲ್ಲುವುದಾಗಿ ಬೆದರಿಕೆ

 ಮಾರ್ಚ್ 15ರ ಬೆಳಗ್ಗೆ ನಾಲ್ವರು ಅಪರಿಚಿತ ವ್ಯಕ್ತಿಗಳು ಕಾಂಗ್ರೆಸ್‌ನ ಕೆಲವು ಶಾಸಕರನ್ನು ಸಂಪರ್ಕಿಸಿ, ಬಿಜೆಪಿ ಪರವಾಗಿ ಮತ ಚಲಾಯಿಸಲು ತಲಾ ₹5 ಕೋಟಿ ಲಂಚ ನೀಡಲು ಪ್ರಯತ್ನಿಸಿದರು. ಆದರೆ, ನಮ್ಮ ಶಾಸಕರು ಅವರ ಪ್ರಸ್ತಾಪವನ್ನು ತಿರಸ್ಕರಿಸಿದಾಗ ಒಡಿಶಾಗೆ ಬಂದರೆ ನಿಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅಶೋಕ್ ಕುಮಾರ್ ದಾಸ್ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Belagavi Banner war: ಖಮೇನಿಯ ಚಿತ್ರ ಹಾಕಿದ್ದಕ್ಕೆ ನೆತನ್ಯಾಹು ಭಾವಚಿತ್ರ ಹಾಕಿದ ಶ್ರೀರಾಮಸೇನೆ!

Source link

Leave a Reply

Your email address will not be published. Required fields are marked *