Kodagu Shocking Incident: ಕೊಡಗಿನಲ್ಲಿ ಚಿಕ್ಕ ಬಾಲಕ ನೇಣು ಬಿಗಿದು ದುರಂತ ಸಾವು! | A Minor Boy Tragically Died By Hanging Himself In Kodagu Rav

Kodagu Shocking Incident: ಕೊಡಗಿನಲ್ಲಿ ಚಿಕ್ಕ ಬಾಲಕ ನೇಣು ಬಿಗಿದು ದುರಂತ ಸಾವು! | A Minor Boy Tragically Died By Hanging Himself In Kodagu Rav



ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ 14 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು  ಮಾಡಿಕೊಂಡಿದ್ದಾನೆ. ಮೃತ ಬಾಲಕನನ್ನು ಮಿಥುನ್ ಎಂದು ಗುರುತಿಸಲಾಗಿದ್ದು,  ನಿಖರ ಕಾರಣ ತಿಳಿದುಬಂದಿಲ್ಲ.

ಕೊಡಗು (ಜು.3):  ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ ನಡೆದಿದೆ.

ಪಾಲಿಬೆಟ್ಟ ನಿವಾಸಿ ಪ್ರದೀಪ್ ಕುಮಾರ್ ಹಾಗೂ ಕವಿರತ್ನ ದಂಪತಿಗಳ ಪುತ್ರ ಮಿಥುನ್ (14) ಎಂಬತಾನೇ ಮೃತ ಬಾಲಕ. ಮೃತ ಮಿಥುನ್ ಅಮ್ಮತ್ತಿ ನೇತಾಜಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ. ತೀವ್ರ ಮಳೆ ಇದ್ದ ಹಿನ್ನೆಲೆಯಲ್ಲಿ ಇಂದು ಶಾಲೆಗೆ ರಜೆ ಇತ್ತು. ಹೀಗಾಗಿ ವಿದ್ಯಾರ್ಥಿ ಮಿಥುನ್ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿರಾಜಪೇಟೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಬಾಲಕನ ಆತ್ಮಹತ್ಯೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ.



Source link

Leave a Reply

Your email address will not be published. Required fields are marked *