Headlines

ರಣಜಿ ಟ್ರೋಫಿ: ಮುಂಬೈ ತಂಡವನ್ನು ಅವರದ್ದೇ ನೆಲದಲ್ಲಿ ಬಗ್ಗುಬಡಿದು ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಕರ್ನಾಟಕ! | Ranji Trophy Karnataka Stun Mumbai At Home Kl Rahul Century Seals Semifinal Spot Kvn

ರಣಜಿ ಟ್ರೋಫಿ: ಮುಂಬೈ ತಂಡವನ್ನು ಅವರದ್ದೇ ನೆಲದಲ್ಲಿ ಬಗ್ಗುಬಡಿದು ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಕರ್ನಾಟಕ! | Ranji Trophy Karnataka Stun Mumbai At Home Kl Rahul Century Seals Semifinal Spot Kvn



ರಣಜಿ ಟ್ರೋಫಿ: ಮುಂಬೈ ತಂಡವನ್ನು ಅವರದ್ದೇ ನೆಲದಲ್ಲಿ ಬಗ್ಗುಬಡಿದು ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಕರ್ನಾಟಕ! | Ranji Trophy Karnataka Stun Mumbai At Home Kl Rahul Century Seals Semifinal Spot Kvn

2025-26ರ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್‌ನಲ್ಲಿ ಕರ್ನಾಟಕ ತಂಡವು ಮುಂಬೈಯನ್ನು ಅವರದ್ದೇ ತವರಿನಲ್ಲಿ ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಕೆ ಎಲ್ ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ 325 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ರಾಜ್ಯ ತಂಡ, 4 ವಿಕೆಟ್‌ಗಳ ಜಯ ಸಾಧಿಸಿತು.

ಮುಂಬೈ: 2025-26ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ 42 ಬಾರಿ ಚಾಂಪಿಯನ್ ಮುಂಬೈ ತಂಡವನ್ನು ಅವರದ್ದೇ ತವರಿನಲ್ಲಿ ಬಗ್ಗುಬಡಿದ ಕರ್ನಾಟಕ ಭರ್ಜರಿಯಾಗಿ ಸೆಮಿಫೈನಲ್ ಪ್ರವೇಶಿಸಿದೆ. ಕೆ ಎಲ್ ರಾಹುಲ್ ಬಾರಿಸಿದ ಆಕರ್ಷಕ ಶತಕದ ನೆರವಿನಿಂದ ಕರ್ನಾಟಕ ತಂಡವು 325 ರನ್‌ಗಳ ಕಠಿಣ ಗುರಿಯನ್ನು ಇನ್ನೂ 4 ವಿಕೆಟ್ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಮುಂಬೈ ತಂಡದ ರಣಜಿ ಟ್ರೋಫಿ ಸೆಮೀಸ್‌ಗೇರುವ ಕನಸು ಭಗ್ನವಾಗಿದೆ.

ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಪಂಜಾಬ್ ವಿರುದ್ದ ರೋಚಕ ಜಯ ಸಾಧಿಸುವ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದ ದೇವದತ್ ಪಡಿಕ್ಕಲ್ ನೇತೃತ್ವದ ಕರ್ನಾಟಕ ತಂಡವು, ಇದೀಗ ರಣಜಿ ಟ್ರೋಫಿ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡ ಎಂದು ಗುರುತಿಸಿಕೊಂಡಿರುವ ಮುಂಬೈಗೆ ಅವರದ್ದೇ ನೆಲದಲ್ಲಿ ಸೋಲುಣಿಸುವಲ್ಲಿ ರಾಜ್ಯ ತಂಡ ಯಶಸ್ವಿಯಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮಂಕಾಗಿದ್ದ ಮುಂಬೈ ತಂಡವು, ಎರಡನೇ ಇನ್ನಿಂಗ್ಸ್‌ನಲ್ಲಿ 377 ರನ್ ಕಲೆಹಾಕುವ ಮೂಲಕ ಕರ್ನಾಟಕ ತಂಡಕ್ಕೆ ಗೆಲ್ಲಲು 325 ರನ್‌ಗಳ ಕಠಿಣ ಗುರಿ ನೀಡಿತ್ತು. ಇನ್ನು ಗುರಿ ಬೆನ್ನತ್ತಿದ ರಾಜ್ಯ ತಂಡವು ಮೂರನೇ ದಿನದಾಟದಂತ್ಯಕ್ಕೆ ಎರಡು ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿತ್ತು. ಕೊನೆಯ ದಿನ ಗೆಲ್ಲಲು ಕರ್ನಾಟಕ್ಕೆ ಇನ್ನೂ 212 ರನ್‌ಗಳ ಅಗತ್ಯವಿತ್ತು.

Scroll to load tweet…

ಭರ್ಜರಿ ಶತಕ ಸಿಡಿಸಿದ ಕೆ ಎಲ್ ರಾಹುಲ್:

60 ರನ್‌ಗಳೊಂದಿಗೆ ನಾಲ್ಕನೇ ದಿನದಾಟದ ಆರಂಭಿಸಿದ ಅನುಭವಿ ಬ್ಯಾಟರ್ ಕೆ ಎಲ್ ರಾಹುಲ್ ಅತ್ಯಂತ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಮತ್ತೊಂದು ತುದಿಯಲ್ಲಿ 9 ರನ್ ಗಳಿಸಿದ್ದ ಕರುಣ್ ನಾಯರ್ ತನ್ನ ಖಾತೆಗೆ ಕೇವಲ 4 ರನ್ ಸೇರಿಸಿ ಶಾರ್ದೂಲ್ ಠಾಕೂರ್‌ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಕೆ ಎಲ್ ರಾಹುಲ್ ಹಾಗೂ ಸ್ಮರಣ್ ರವಿಚಂದ್ರನ್ ನಾಲ್ಕನೇ ವಿಕೆಟ್‌ಗೆ 147 ರನ್‌ಗಳ ಅಮೂಲ್ಯ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಮುಂಬೈನ ಬೌಲರ್‌ಗಳನ್ನು ಅತ್ಯಂತ ಎಚ್ಚರಿಕೆಯಿಂದ ಎದುರಿಸಿದ ರಾಹುಲ್ 182 ಎಸೆತಗಳನ್ನು ಎದುರಿಸಿ 14 ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿ 130 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಶ್ರೇಯಸ್ ಗೋಪಾಲ್(1) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಕೃತಿಕ್ ಕೃಷ್ಣ(2) ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದಾಗ ಕರ್ನಾಟಕದ ಪಾಳಯದಲ್ಲಿ ಆತಂಕ ಮನೆ ಮಾಡಿತ್ತು.

ಅಮೂಲ್ಯ ಜತೆಯಾಟವಾಡಿದ ಸ್ಮರಣ್-ವಿದ್ಯಾಧರ್ ಪಾಟೀಲ್

ಆದರೆ ಏಳನೇ ವಿಕೆಟ್‌ಗೆ ಸ್ಮರಣ್ ರವಿಚಂದ್ರನ್ ಹಾಗೂ ವಿದ್ಯಾಧರ್ ಪಾಟೀಲ್ ಕೇವಲ 47 ಎಸೆತಗಳಲ್ಲಿ ಮುರಿಯದ 40 ರನ್ ಬಾರಿಸುವ ಮೂಲಕ ಯಾವುದೇ ಅಪಾಯವಿಲ್ಲದೇ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು. ಅತ್ಯಂತ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಸ್ಮರಣ್ ರವಿಚಂದ್ರನ್ ಕೇವಲ 123 ಎಸೆತಗಳಲ್ಲಿ 11 ಬೌಂಡರಿ ಸಹಿತ ಅಜೇಯ 83 ರನ್ ಬಾರಿಸಿದರೆ, ಸ್ಪೋಟಕ ಬ್ಯಾಟಿಂಗ್ ನಡೆಸಿದ ವಿದ್ಯಾಧರ್ ಪಾಟೀಲ್ ಕೇವಲ 30 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 31 ರನ್ ಸಿಡಿಸಿದರು.



Source link

Leave a Reply

Your email address will not be published. Required fields are marked *