Headlines

ಬೀದರ್: ಬಸವಕಲ್ಯಾಣದಲ್ಲಿ ಭೀಕರ ದುರಂತ, ಲಾರಿ ಡಿಕ್ಕಿಯಾಗಿ ಕ್ಷಣಾರ್ಧದಲ್ಲಿ ದಂಪತಿ ಸ್ಥಳದಲ್ಲೇ ಸಾವು! | Fatal Road Accident In Bidar Couple Killed After Tipper Lorry Hits Bike In Basavakalyan Gdp

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೀದರ್: ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಬಸವಕಲ್ಯಾಣ ಬಸ್ ನಿಲ್ದಾಣದ ಸಮೀಪದ ಮುಚಳಂಬ ಕ್ರಾಸ್ ಬಳಿ ಈ ಭೀಕರ ಘಟನೆ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಸಯ್ಯದ್ ದಸ್ತಗೀರ್ (35) ಹಾಗೂ ಅವರ ಪತ್ನಿ ಯಾಸ್ಮೀನ್ ದಸ್ತಗೀರ್ (33) ಎಂದು ಗುರುತಿಸಲಾಗಿದೆ. ಇವರು ಬಸವಕಲ್ಯಾಣ ನಗರದ ಖಾದಿಜಂಡಾ ಕಾಲೋನಿಯಲ್ಲಿ ವಾಸವಿದ್ದು, ದಂಪತಿಗಳು ಬೈಕ್‌ನಲ್ಲಿ ತಮ್ಮ ಮನೆ ಕಡೆಗೆ ತೆರಳುತ್ತಿದ್ದರು.

ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ

ಈ ವೇಳೆ ಮುಚಳಂಬ ಕ್ರಾಸ್ ಬಳಿ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ದಂಪತಿಗಳು ರಸ್ತೆಯ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ತೀವ್ರತೆ ಎಷ್ಟಿತ್ತು ಎಂದರೆ, ಸುತ್ತಮುತ್ತಲಿನ ಜನರು ಬೆಚ್ಚಿಬಿದ್ದಿದ್ದಾರೆ.

ಅಪಘಾತದ ನಿಖರ ಕಾರಣದ ತನಿಖೆ

ಘಟನೆಯ ಮಾಹಿತಿ ತಿಳಿದು ತಕ್ಷಣವೇ ಸಿಪಿಐ ಅಲಿಸಾಬ್ ಹಾಗೂ ಪಿಎಸ್ಐಗಳಾದ ಸಿದ್ದೇಶ್ವರ್ ಮತ್ತು ಚಂದ್ರಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತದೇಹಗಳನ್ನು ಬಸವಕಲ್ಯಾಣ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ದುರ್ಘಟನೆ ಹಿನ್ನೆಲೆಯಲ್ಲಿ ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ವಿಶೇಷವಾಗಿ ಅತಿವೇಗದಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸಬೇಕು.

Source link

Leave a Reply

Your email address will not be published. Required fields are marked *