Indian Railways: ಶಿವರಾತ್ರಿ ಪ್ರಯುಕ್ತ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ | Special Train Runs Between Yeshwantpur Madgaon On Occasion Of Shivaratri Mrq

Shivaratri festival train service: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿವಾರಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಗೋವಾದ ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರವನ್ನು ಘೋಷಿಸಿದೆ. 

ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಗೋವಾ ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಸಂಚರಿಸುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ.

ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ ಪ್ರೆಸ್ ರೈಲು (06507) ಫೆ.13ರಂದು ಮಧ್ಯಾಹ್ನ 12.30ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ಮಡಗಾಂವ್ ತಲುಪಲಿದೆ. ಅಲ್ಲಿಂದ ಹಿಂದಿರುಗುವ ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು (06508) ಫೆ. 16ರ ಬೆಳಗ್ಗೆ 11 ಗಂಟೆಗೆ ಮಡಗಾಂವ್’ನಿಂದ ಹೊರಟು, ಮರುದಿನ ಬೆಳಗ್ಗೆ 4.45ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: ತತ್ಕಾಲ್ ರೈಲು ಟಿಕೆಟ್ ಬುಕಿಂಗ್‌ನಲ್ಲಿ ಮಹತ್ತರ ಬದಲಾವಣೆ, ಪ್ರಯಾಣಿಕನಿಗೆ ನೆರವಾದ ಸ್ಮಾರ್ಟರ್ ಟಿಕೆಟ್‌

ಈ ರೈಲು ಚಿಕ್ಕಬಾಣಾವರ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿವೆ.

ಇದನ್ನೂ ಓದಿ: ಶಿವರಾತ್ರಿ ಪ್ರಯುಕ್ತ, ಬೆಂಗಳೂರಿನಿಂದ ವಿಜಯಪುರಕ್ಕೆ ವಿಶೇಷ ರೈಲು ಯಾವೆಲ್ಲ ಸ್ಟೇಷನ್‌ನಲ್ಲಿ ನಿಲುಗಡೆ ಇರಲಿದೆ

Source link

Leave a Reply

Your email address will not be published. Required fields are marked *