Mysuru Dasara 2025: ಬಾನಂಗಳದಲ್ಲಿ ಡ್ರೋನ್‌ಗಳ ಚಿತ್ತಾರ, ಹುಲಿ ಕಲಾಕೃತಿಯಿಂದ ವಿಶ್ವದಾಖಲೆ | Mysuru Dasara 2025 Drone Show World Record Gvd

Mysuru Dasara 2025: ಬಾನಂಗಳದಲ್ಲಿ ಡ್ರೋನ್‌ಗಳ ಚಿತ್ತಾರ, ಹುಲಿ ಕಲಾಕೃತಿಯಿಂದ ವಿಶ್ವದಾಖಲೆ | Mysuru Dasara 2025 Drone Show World Record Gvd



Mysuru Dasara 2025: ಬಾನಂಗಳದಲ್ಲಿ ಡ್ರೋನ್‌ಗಳ ಚಿತ್ತಾರ, ಹುಲಿ ಕಲಾಕೃತಿಯಿಂದ ವಿಶ್ವದಾಖಲೆ | Mysuru Dasara 2025 Drone Show World Record Gvd

ಮೈಸೂರು ದಸರಾ ಮಹೋತ್ಸವಕ್ಕೆ ಹೊಸ ಮೆರಗು ನೀಡಿದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನ ಪ್ರೇಕ್ಷಕರ ಮನಸೂರೆ ಮಾಡಿತು. ಬಾನಂಗಳದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸಿದ 3,000 ಡ್ರೋನ್‌ಗಳು ಹೊಸ ಲೋಕವನ್ನು ಸೃಷ್ಟಿಸಿತು.

ಮೈಸೂರು (ಸೆ.28): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೊಸ ಮೆರಗು ನೀಡಿದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನ ಪ್ರೇಕ್ಷಕರ ಮನಸೂರೆ ಮಾಡಿತು. ಬಾನಂಗಳದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸಿದ 3,000 ಡ್ರೋನ್‌ಗಳು ಹೊಸ ಲೋಕವನ್ನು ಸೃಷ್ಟಿಸಿತು. ಇದರೊಂದಿಗೆ 2,983 ಡ್ರೋನ್ ಗಳನ್ನು ಬಳಸಿ ರಾಷ್ಟ್ರೀಯ ಪ್ರಾಣಿ ಹುಲಿಯ ಕಲಾಕೃತಿ ರಚಿಸಿ ವಿಶ್ವದಾಖಲೆ‌ ನಿರ್ಮಿಸುವ ಮೂಲಕ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಹಿರಿಮೆಯನ್ನು ಹೆಚ್ಚಿಸಿದೆ.

ಇಂತಹ ರೋಮಾಂಚಕಾರಿ ಡ್ರೋನ್ ಪ್ರದರ್ಶನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನೆರೆದಿದ್ದ ಸಾವಿರಾರು ಜನರ ಕಣ್ಮನ ಸೆಳೆಯಿತು. ನೋಡುಗರನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ ಡ್ರೋನ್ ಪ್ರದರ್ಶನ ದಸರಾ ಮಹೋತ್ಸವದ ಸಂಭ್ರಮಕ್ಕೆ ರಂಗು ನೀಡಿತು. ಏಕಕಾಲದಲ್ಲಿ ಬಾನೆತ್ತರಕ್ಕೆ ಹಾರಿದ ಡ್ರೋನ್ ಗಳು ಬಣ್ಣಬಣ್ಣದ ದೀಪಗಳಿಂದ ಮಿನುಗುತ್ತಾ ಆಕರ್ಷಕ ಕಲಾಕೃತಿಗಳನ್ನು ಸೃಷ್ಟಿಸಿದವು.

ಸೌರಮಂಡಲ, ವಿಶ್ವಭೂಪಟ, ದೇಶದ ಹೆಮ್ಮೆಯ ಸೈನಿಕ, ನವಿಲು, ರಾಷ್ಟ್ರೀಯ ಪ್ರಾಣಿ ಹುಲಿ, ಡಾಲ್ಫಿನ್, ಈಗಲ್, ಸರ್ಪದ ಮೇಲೆ ಶ್ರೀಕೃಷ್ಣ ನೃತ್ಯ ಮಾಡುವುದು, ಕಾವೇರಿ ಮಾತೆ, ಕರ್ನಾಟಕ ಭೂಪಟದೊಂದಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್, ಪಂಚ ಗ್ಯಾರಂಟಿ ಯೋಜನೆಗಳಿಂದ ಕೂಡಿದ್ದ ಕರ್ನಾಟಕ ಭೂಪಟ‌, ಅಂಬಾರಿ ಆನೆ, ನಾಡದೇವತೆ ಚಾಮುಂಡೇಶ್ವರಿ ಕಲಾಕೃತಿಗಳು ನೋಡುಗರಿಗೆ ಅದ್ಭುತ ಮನರಂಜನೆ ನೀಡಿದವು. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಸಂಗೀತ ಕಾರ್ಯಕ್ರಮ

ದಸರಾ ಅಂಗವಾಗಿ ಪಂಜಿನ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಡ್ರೋನ್‌ ಷೋ ವೇಳೆ ಖ್ಯಾತ ಹಿನ್ನೆಲೆ ಗಾಯಕ ಕುನಾಲ್ ಗಾಂಜಾವಾಲ ಹಾಡಿನ ಮೋಡಿ ಮಾಡಿದರು. ಡ್ರೋನ್ ಪ್ರದರ್ಶನ ಆರಂಭಕ್ಕೂ ಮುನ್ನ ಗಾಯಕ ಕುನಾಲ್ ಗಾಂಜಾವಾಲ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ವೇದಿಕೆಗೆ ಬರುತ್ತಿದ್ದಂತೆ ಮೊದಲಿಗೆ ಪುನೀತ್ ರಾಜ್‍ಕುಮಾರ್ ಅಭಿನಯದ ನೀನೆ ನೀನೆ ಗೀತೆಯನ್ನು ಹಾಡಿ ರಂಜಿಸಿದ ಕುನಾಲ್ ಗಾಂಜಾವಾಲ, ಆ ನಂತರದಲ್ಲಿ ಕನ್ನಡದ ಖುಷಿಯಾಗಿದೆ ಏಕೋ ನಿನ್ನಿಂದಲೆ…, ಒಂದೇ ಒಂದು ಸಾರಿ ಕಣ್ಮುಂದೆ ಬಾರೆ…, ನಿನ್ನ ಕಂಡ ಕ್ಷಣದಿಂದ…, ಹುಡುಗಿ ಹುಡುಗಿ ನಿನ್ನ ಕಂಡಾಗ, ಕಿವಿ ಮಾತೊಂದು ಹೇಳಲೆ ನಾನಿಂದು ಸೇರಿದಂತೆ ಹಿಂದಿಯ ಹಲವು ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷಕರು ಹುಚ್ಚೆದ್ದು ಕುಣಿಯುವಂತೆ ಮಾಡಿದರು.



Source link

Leave a Reply

Your email address will not be published. Required fields are marked *