
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ (ಜು.02) ರಾಜ್ಯದ 2 ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರು (ಜು.02) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೆಲವು ಜಿಲ್ಲೆಗಳಲ್ಲಿ ಅಲರ್ಟ್ ನೀಡಲಾಗಿದೆ. ತಗ್ಗು ಪ್ರದೇಶದ ಜನರಿಗೆ ಅತೀವ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹೊರತುಪಡಿಸಿ ಇನ್ನುಳಿದ ಬಹುತೇಕ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ. ಇದೀಗ ಭಾರಿ ಮಳೆಯಾಗುತ್ತಿರುವ ಕಾರಣ ಕರ್ನಾಟಕ ಎರಡು ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಕೊಡುಗಿನ ಶಾಲಾ ಕಾಲೇಜಿಗೆ ನಾಳೆ (ಜು.03) ರಜೆ ಘೋಷಿಸಿದ್ದರೆ,ಚಿಕ್ಕಮಗಳೂರಿನ ಕೆಲ ತಾಲೂಕುಗಳ ಶಾಲೆಗಳಿಗೆ ನಾಳೆ (ಜು.03) ರಜೆ ನೀಡಲಾಗಿದೆ.
ಕೊಡುಗು ಶಾಲಾ ಕಾಲೇಜಿಗೆ ರಜೆ
ಕೊಡುಗು ಜಿಲ್ಲೆಯಲ್ಲಿ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಮಳೆ ತೀವ್ರಗೊಂಡ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಹತ್ವದ ಆದೇಶ ನೀಡಿದ್ದಾರೆ. ಮನ್ನಚ್ಚರಿಕಾ ಕ್ರಮವಾಗಿ ನಾಳೆ (ಜು.03) ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಗಳಿಗೆ ರಜೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಮಳೆಯ ಅಬ್ಬರ ತಗ್ಗಿದ ಪರಿಣಾಮ ಶಾಲಾ ಕಾಲೇಜಗಳು ಆರಂಭಗೊಂಡಿತ್ತು. ಆದರೆ ಇದೀಗ ಮತ್ತೆ ಮಳೆ ಆರಂಭಗೊಂಡಿದೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ರಜೆ ಘೋಷಣೆ
ಚಿಕ್ಕಮಗಳೂರಿನ ಕೆಲ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಎನ್ಆರ್ ಪುರ, ಕೊಪ್ಪ, ಶೃಂಗೇರಿ, ಕಳಸ, ಮೂಡಿಗೆರೆ ತಾಲೂಕಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನು ತಾಲುಕಿನ ಕೆಲ ಹೊಬಳಿಗಳಾದ ಆಲ್ದೂರು, ವಸ್ತಾರೆ, ಜಾಗರ, ಖಾಂಡ್ಯ ಹೊಬಳಿಗೂ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಆದೇಶ ನೀಡಿದ್ದಾರೆ.