Headlines

Lockdown Rumours: ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದ ಕೇಂದ್ರ ಸರ್ಕಾರ | No New Lockdown In India Centre Dismisses Rumours As Baseless Rav

Lockdown Rumours: ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದ ಕೇಂದ್ರ ಸರ್ಕಾರ | No New Lockdown In India Centre Dismisses Rumours As Baseless Rav



Lockdown Rumours: ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದ ಕೇಂದ್ರ ಸರ್ಕಾರ | No New Lockdown In India Centre Dismisses Rumours As Baseless Rav

ದೇಶದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಪಶ್ಚಿಮ ಏಷ್ಯಾ ಯುದ್ಧದ ಕುರಿತ ಪ್ರಧಾನಿ ಮೋದಿಯವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ಯಾವುದೇ ‘ಎನರ್ಜಿ ಲಾಕ್‌ಡೌನ್’ ಇರುವುದಿಲ್ಲ, ಅಗತ್ಯ ವಸ್ತುಗಳ ಪೂರೈಕೆ ಸುಗಮವಾಗಿದೆ ಎಂದು ಸ್ಪಷ್ಟಪಡಿಸಿದೆ.

ನವದೆಹಲಿ (ಮಾ.27): ದೇಶದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುತ್ತೆ ಅನ್ನೋ ಸುದ್ದಿ ಹಬ್ಬಿದೆ. ಆದರೆ, ಕೇಂದ್ರ ಸರ್ಕಾರ ಈ ವದಂತಿಗಳನ್ನು ತಳ್ಳಿಹಾಕಿದೆ. ದೇಶದಲ್ಲಿ ಯಾವುದೇ ಕಾರಣಕ್ಕೂ ಲಾಕ್‌ಡೌನ್ ಇರುವುದಿಲ್ಲ, ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದೆ. ಸದ್ಯಕ್ಕೆ ಲಾಕ್‌ಡೌನ್ ಮಾಡುವಂತಹ ಯಾವುದೇ ಪರಿಸ್ಥಿತಿ ದೇಶದಲ್ಲಿ ಇಲ್ಲ, ಹರಿದಾಡುತ್ತಿರುವ ಸುದ್ದಿಗಳು ಆಧಾರರಹಿತ ಎಂದು ಸರ್ಕಾರ ತಿಳಿಸಿದೆ.

ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಆಗಲಿದೆ ಎಂಬ ಸುದ್ದಿ ಜನರಲ್ಲಿ ಹೆಚ್ಚು ಗೊಂದಲ ಸೃಷ್ಟಿಸಿತ್ತು. ಪಶ್ಚಿಮ ಏಷ್ಯಾ ಯುದ್ಧದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನ ಎರಡೂ ಸದನಗಳಲ್ಲಿ ಇತ್ತೀಚೆಗೆ ಮಾತನಾಡಿದ್ದರು. ‘ಒಂದು ವೇಳೆ ಯುದ್ಧ ದೀರ್ಘಕಾಲ ಮುಂದುವರಿದರೆ, ದೇಶದ ಮೇಲೆ ದೊಡ್ಡ ಪರಿಣಾಮ ಬೀರಬಹುದು. ಆಗ ಲಾಕ್‌ಡೌನ್ ಸಮಯದಲ್ಲಿ ಇದ್ದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಈ ಸಂಕಷ್ಟವನ್ನು ಎದುರಿಸಬೇಕು’ ಎಂದು ಅವರು ಹೇಳಿದ್ದರು.

ಪ್ರಧಾನಿಯವರ ಈ ಹೇಳಿಕೆಯನ್ನೇ ಕೆಲವರು ತಪ್ಪಾಗಿ ಅರ್ಥೈಸಿಕೊಂಡು, ದೇಶದಲ್ಲಿ ಮತ್ತೊಂದು ಲಾಕ್‌ಡೌನ್‌ಗೆ ಸಿದ್ಧತೆ ನಡೆಯುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿಸಿದ್ದರು. ಆದರೆ, ಕೇಂದ್ರ ಪೆಟ್ರೋಲಿಯಂ ಸಚಿವರು ಈ ಎಲ್ಲಾ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ‘ದೇಶದಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಜಾರಿ ಮಾಡುವ ಯೋಚನೆ ಸದ್ಯಕ್ಕೆ ಸರ್ಕಾರಕ್ಕಿಲ್ಲ. ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯನ್ನು ಸರ್ಕಾರ ಖಚಿತಪಡಿಸುತ್ತಿದೆ. ಜನರು ಗಾಬರಿಯಾಗಿ ವಸ್ತುಗಳನ್ನು ಖರೀದಿಸುವುದು ಅಥವಾ ಸುಳ್ಳು ಸುದ್ದಿಗಳನ್ನು ನಂಬುವುದು ಬೇಡ. ಸದ್ಯಕ್ಕೆ ಅಂತಹ ಯಾವುದೇ ಆತಂಕಕಾರಿ ಪರಿಸ್ಥಿತಿ ಇಲ್ಲ’ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.



Source link

Leave a Reply

Your email address will not be published. Required fields are marked *