ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಸಚಿವ ಮಧು ಬಂಗಾರಪ್ಪ | Karnataka 15000 Teachers Recruitment Minister Madhu Bangarappa Gvd

ಆಯವ್ಯಯದಲ್ಲಿ ಘೋಷಿಸಿದಂತೆ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಧಾನ ಪರಿಷತ್‌ (ಮಾ.10): ಆಯವ್ಯಯದಲ್ಲಿ ಘೋಷಿಸಿದಂತೆ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಬಿಜೆಪಿಯ ಎಚ್‌.ಎಸ್‌. ಗೋಪಿನಾಥ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲೆಗಳಲ್ಲಿ ಇಂಗ್ಲಿಷ್‌ ಶಿಕ್ಷಕರ ಕೊರತೆ ಇರುವ ಕಾರಣ ನೇಮಕಾತಿ ವೇಳೆ ಇಂಗ್ಲಿಷ್‌ ಶಿಕ್ಷಕರನ್ನು ಸಹ ನೇಮಕ ಮಾಡಲಾಗುವುದು ಎಂದರು.ಪ್ರಸ್ತುತ ಖಾಲಿ ಇರುವ ಹಾಗೂ ಮುಂಬರುವ ಆರು ತಿಂಗಳಲ್ಲಿ ಖಾಲಿಯಾಗಲಿರುವ ಪ್ರಾಂಶುಪಾಲರ ಹುದ್ದೆಗಳಿಗೆ ಮುಂಬಡ್ತಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಕಾಂಗ್ರೆಸ್ಸಿನ ಡಿ.ಟಿ. ಶ್ರೀನಿವಾಸ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಣ ಇಲಾಖೆಯ ಉಪನ್ಯಾಸಕರ ವೃಂದದ ಕರಡು ಜ್ಯೇಷ್ಠತಾ ಪಟ್ಟಿ ಪ್ರಕಟಿಸಿದ್ದು, ಈ ಸಂಬಂಧ ಬಂದಿರುವ ಆಕ್ಷೇಪಣೆ ಪರಿಶೀಲಿಸಿ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಈ ಪಟ್ಟಿ ಪ್ರಕಟವಾದ ನಂತರ ಇಲಾಖೆಯ ನಿರ್ದೇಶಕರು, ಮುಂಬಡ್ತಿ ನೀಡಲು ಪ್ರಸ್ತಾವನೆ ಸಲ್ಲಿಸಿದ ನಂತರ ಸರ್ಕಾರ ಕ್ರಮವಹಿಸಲಿದೆ ಎಂದರು.

ಕಡಿಮೆ ಕೆಲಸಕ್ಕೆ ಕನಿಷ್ಠ ವೇತನವಿಲ್ಲ

ಸಾರ್ವಜನಿಕ ಗ್ರಂಥಾಲಯಗಳಲ್ಲಿ ಶುಚಿಗಾರರಾಗಿ ಕೆಲಸ ಮಾಡುವವರು ಶುಚಿತ್ವದ ಜೊತೆಗೆ ಸಣ್ಣ ಪುಟ್ಟ ಕೆಲಸ ನಿರ್ವಹಿಸುತ್ತಿದ್ದು, ಎಂಟು ಗಂಟೆಗಿಂತ ಕಡಿಮೆ ಅವಧಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ಕನಿಷ್ಠ ವೇತನ ನೀಡುವ ಪ್ರಮೇಯ ಬರುವುದಿಲ್ಲ.

Source link

Leave a Reply

Your email address will not be published. Required fields are marked *