Headlines

ಬೆಂಗಳೂರು: 3ನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ! ಸಿಸಿಟಿವಿ ದೃಶ್ಯ ನೋಡಿದ್ರೆ ಕಣ್ಣೀರು ಬರುತ್ತೆ | Bengaluru Toddler Falls From Third Floor In Nayandahalli Cctv Footage Viral San

ಬೆಂಗಳೂರಿನ ನಾಯಂಡಹಳ್ಳಿಯಲ್ಲಿ, ಒಂದೂವರೆ ವರ್ಷದ ಮಗುವೊಂದು ಆಟವಾಡುತ್ತಿದ್ದಾಗ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿರುವ ಮಗು ಸದ್ಯ ಆಸ್ಪತ್ರೆಯ ಐಸಿಯುನಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು (ಏ.9): ಸಿಲಿಕಾನ್ ಸಿಟಿಯಲ್ಲಿ ಪೋಷಕರ ಎದೆನಡುಗಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮನೆಯೊಳಗೆ ಆಟವಾಡುತ್ತಿದ್ದ ಪುಟ್ಟ ಮಗುವೊಂದು ಆಯತಪ್ಪಿ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದು, ಪ್ರಸ್ತುತ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ನಾಯಂಡಹಳ್ಳಿಯಲ್ಲಿ ವಾಸವಾಗಿರುವ ನವೀನ್ ಮತ್ತು ಜಯಶ್ರೀ ದಂಪತಿಯ ಒಂದೂವರೆ ವರ್ಷದ ಪುತ್ರಿ ಸಹನಾ ಏಪ್ರಿಲ್ 6ರಂದು ಮನೆಯಲ್ಲಿ ಆಟವಾಡುತ್ತಿದ್ದಳು. ಆಟದ ಭರದಲ್ಲಿ ಮನೆಯ ಮುಖ್ಯ ಬಾಗಿಲು ದಾಟಿ ಹೊರಬಂದ ಮಗು, ವರಾಂಡದಲ್ಲಿ ನಿಯಂತ್ರಣ ತಪ್ಪಿ ನೇರವಾಗಿ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದೆ.

ಕಣ್ಣಮುಂದೆಯೇ ಬಿತ್ತು ಮಗು; ಮೂರ್ಛೆ ಹೋದ ತಾಯಿ

ಮಗು ಮೇಲೆಂದ ಕೆಳಕ್ಕೆ ಬೀಳುತ್ತಿದ್ದಂತೆಯೇ ತಲೆಗೆ ಗಂಭೀರ ಗಾಯಗಳಾಗಿವೆ. ಮಗು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡ ತಾಯಿ ಜಯಶ್ರೀ, ಆಘಾತ ತಾಳಲಾರದೆ ರಸ್ತೆಯಲ್ಲೇ ಮೂರ್ಛೆ ಹೋಗಿದ್ದಾರೆ. ಈ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ

ಮಗುವನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಬಸವನಗುಡಿಯ ರಂಗದೊರೈ ಆಸ್ಪತ್ರೆಯ ಐಸಿಯು (ICU) ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ಸ್ಥಿತಿ ಗಂಭೀರವಾಗಿದ್ದು, ಪೋಷಕರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದ ಈ ದಂಪತಿಗೆ ಸಹನಾ ಏಕೈಕ ಪುತ್ರಿ. ಪ್ರಸ್ತುತ ಮಗುವಿನ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ.

Source link

Leave a Reply

Your email address will not be published. Required fields are marked *