Headlines

Bike taxi ಕರ್ನಾಟಕ ಸರ್ಕಾರಕ್ಕೆ ಹಿನ್ನಡೆ, ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದ ಹೈಕೋರ್ಟ್ | Karnataka Hc Revokes Bike Taxi Ban Directs To Register As Transport Vehicles

ಕರ್ನಾಟಕ ಸರ್ಕಾರಕ್ಕೆ ಹಿನ್ನಡೆ, ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದ ಹೈಕೋರ್ಟ್ , ಬೈಕ್ ಟ್ಯಾಕ್ಸಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಮಾಡಿತ್ತು. ಆದರೆ ಈ ಆದೇಶ ರದ್ದುಗೊಳಿಸಿದ ಹೈಕೋರ್ಟ್, ಇದೀಗ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ 

ಬೆಂಗಳೂರು (ಜ.23) ಬೆಂಗಳೂರು ಪ್ರಯಾಣಿಕರಿಗೆ ಹೈಕೋರ್ಟ್ ಗುಡ್ ನ್ಯೂಸ್ ನೀಡಿದೆ. ಬೈಕ್ ಟ್ಯಾಕ್ಸಿ ಕುರಿತು ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಬೈಕ್ ಟ್ಯಾಕ್ಸಿಗೆ ಕಾನೂನಿನಡಿ ಸರ್ಕಾರ ಅನುಮತಿ ನೀಡಬೇಕು ಎಂದು ಹೈಕೋರ್ಟ್ ಹೇಳಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಎತ್ತಿಹಿಡಿದಿತ್ತು. ಆದರೆ ಇದೀಗ ವಿಭಾಗೀಯ ವೀಠ ಆದೇಶ ರದ್ದುಗೊಳಿಸಿ, ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.

ಓಲಾ ಉಬರ್ ಅಗ್ರೇಟರ್ ಅರ್ಜಿ ಮಾನ್ಯ

ಒಲಾ, ಊಬರ್ ಮತ್ತಿತರ ಅಗ್ರಿಗೇಟರ್ ಗಳು ಸಲ್ಲಿಸಿದ ಮೇಲ್ಮನವಿಗಳನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ಮಾನ್ಯ ಮಾಡಿದೆ. ಬೈಕ್ ಮಾಲಕರು ಅಥವಾ ಅಗ್ರಿಗೇಟರ್ ಗಳು ಸಾರಿಗೆ ವಾಹನಗಳನ್ನಾಗಿ ಬಳಸಲು ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು. ಅರ್ಹ ಮನವಿಗಳನ್ನು ಸರ್ಕಾರ ಪುರಸ್ಕರಿಸಿ ಅನುಮತಿ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ. ಇದರಿಂದ ಬೆಂಗಳೂರಿನ ಪ್ರಯಾಣಿಕರು ಇದೀಗ ಬೈಕ್ ಟ್ಯಾಕ್ಸಿ ಮೂಲಕ ಪ್ರಯಾಣಕ್ಕೆ ಅವಕಾಶ ನೀಡಿದೆ. ಇಷ್ಟೇ ಅಲ್ಲ ಒಂದೆಡೆ ಮೆಟ್ರೋ ದರ ಏರಿಕೆ, ಪ್ರಯಾಣ ಏರಿಕೆಯಿಂದ ಬೆಂಗಳೂರು ಪ್ರಯಾಣಿಕರಿಗೆ ಬೈಕ್ ಟ್ಯಾಕ್ಸಿ ವರವಾಗಲಿದೆ. 

Source link

Leave a Reply

Your email address will not be published. Required fields are marked *