Koppal: ವಸತಿ ಶಾಲೆ ಶೌಚಾಲಯದಲ್ಲಿಯೇ ವಿದ್ಯಾರ್ಥಿನಿ ಹೆರಿಗೆ ಪ್ರಕರಣ: ಸೋದರಮಾವನ ಬಂಧನ | Minor Student Gives Birth In Residential School Toilet One Arrested Kanakagiri Koppal Mrq

ಕೊಪ್ಪಳದ ಕನಕಗಿರಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಿದ್ಯಾರ್ಥಿನಿಯ ಸೋದರಮಾವ ಅಲ್ತಾಫ್‌ನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ಕೊಪ್ಪಳ: ಕನಕಗಿರಿ ತಾಲೂಕಿನ ವಸತಿ ನಿಲಯವೊಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯ ಹಾಸ್ಟೆಲ್ ನಲ್ಲಿಯೇ ಹೆರಿಗೆಯಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನ ಮೇಲೆ ಸ್ಥಳೀಯ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದೆ. ವಿಜಯನಗರ ಜಿಲ್ಲೆಯ ಅಲ್ತಾಫ್ ಎನ್ನುವಾತ ವಿದ್ಯಾರ್ಥಿನಿಯನ್ನು ಎರಡ್ಮೂರು ಭಾರಿ ಲೈಂಗಿಕವಾಗಿ ಬಳಸಿಕೊಂಡಿರುವುದಿಂದ ಬಾಲಕಿ ಗರ್ಭವತಿಯಾಗಿದ್ದಾಳೆ. ವಿದ್ಯಾರ್ಥಿನಿ ಹಾಗೂ ಆರೋಪಿ ಅಲ್ತಾಫ್ (21) ನಡುವೆ ವಿವಾಹ ನಿಗದಿಯಾಗಿತ್ತು ಎನ್ನಲಾಗಿದ್ದು, ಆರೋಪಿಯು ಮದುವೆಗೂ ಮುನ್ನ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವುದು ವಿಚಾರಣೆ ಬಳಿಕ ಪೊಲೀಸರಿಗೆ ಗೊತ್ತಾಗಿದೆ. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾರಿಗೂ ಹೇಳದಂತೆ ಬೆದರಿಕೆ

ಮದುವೆ ಆಮೀಷವೊಡ್ಡಿದ್ದ ಸೋದರಮಾವ ಅಲ್ತಾಫ್ ಅಕ್ಟೋಬರ್‌ನಲ್ಲಿಯೇ ಬಾಲಕಿ ಮೇಲೆ ಅತ್ಯಾ*ಚಾರ ಎಸಗಿದ್ದನು. ಅಲ್ತಾಫ್ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಮದುವೆಯಾಗೋದಾಗಿ ದೈಹಿಕ ಸಂಪರ್ಕ ಬೆಳಸಿದ್ದನೆಂದು ಉಲ್ಲೇಖವಾಗಿದೆ. ಈ ವಿಚಾರ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪೋಕ್ಸೋ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದ ಗಾಯಕ ಮ್ಯೂಸಿಕ್ ಮೈಲಾರಿಗೆ ಷರತ್ತುಬದ್ಧ ಜಾಮೀನು

ಕನಕಗಿರಿ ತಾಲೂಕಿನ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಗೆ ಹೆರಿಗೆಯಾಗಿದೆ ಎಂಬ ವಿಚಾರ ನನ್ನ ಗಮನಕ್ಕೂ ಬಂದಿದೆ. ವಾಸ್ತವ ಪರಿಶೀಲನೆ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ಪ್ರಕರಣ: ಕೆರೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಶವ ಪತ್ತೆ; ಅಪಘಾತದಲ್ಲಿ ಬೈಕ್ ಸವಾರ ಸಾವು

Source link

Leave a Reply

Your email address will not be published. Required fields are marked *