India dominate West Indies ಜಡೇಜಾ ದಾಳಿಗೆ ವೆಸ್ಟ್ ಇಂಡೀಸ್ ಕಂಗಾಲು; ಎರಡನೇ ಟೆಸ್ಟ್‌ನಲ್ಲೂ ಭಾರತ ಮೇಲುಗೈ | Ravindra Jadeja Fiery Spell Put India On Top Against West Indies Kvn

India dominate West Indies ಜಡೇಜಾ ದಾಳಿಗೆ ವೆಸ್ಟ್ ಇಂಡೀಸ್ ಕಂಗಾಲು; ಎರಡನೇ ಟೆಸ್ಟ್‌ನಲ್ಲೂ ಭಾರತ ಮೇಲುಗೈ | Ravindra Jadeja Fiery Spell Put India On Top Against West Indies Kvn



India dominate West Indies ಜಡೇಜಾ ದಾಳಿಗೆ ವೆಸ್ಟ್ ಇಂಡೀಸ್ ಕಂಗಾಲು; ಎರಡನೇ ಟೆಸ್ಟ್‌ನಲ್ಲೂ ಭಾರತ ಮೇಲುಗೈ | Ravindra Jadeja Fiery Spell Put India On Top Against West Indies Kvn

ಯಶಸ್ವಿ ಜೈಸ್ವಾಲ್ ಮತ್ತು ಶುಭ್‌ಮನ್ ಗಿಲ್ ಅವರ ಶತಕಗಳ ನೆರವಿನಿಂದ ಭಾರತ, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ 518 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಇದಕ್ಕೆ ಉತ್ತರವಾಗಿ, ರವೀಂದ್ರ ಜಡೇಜಾ ಅವರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿದೆ.  

ನವದೆಹಲಿ: ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್ ಅವರ ಆಕರ್ಷಕ ಶತಕ ಹಾಗೂ ರವೀಂದ್ರ ಜಡೇಜಾ ಅವರ ಮಿಂಚಿನ ದಾಳಿಯ ನೆರವಿನಿಂದ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಎದುರಿನ ಎರಡನೇ ಟೆಸ್ಟ್‌ನಲ್ಲಿ ಮೇಲುಗೈ ಸಾಧಿಸುವತ್ತ ದಿಟ್ಟ ಹೆಜ್ಜೆಯಿಟ್ಟಿದೆ. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಳೆದುಕೊಂಡು 518 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇನ್ನು ಮೊದಲ ಇನ್ನಿಂಗ್ಸ್ ಆರಂಭಿಸಿರುವ ವೆಸ್ಟ್ ಇಂಡೀಸ್ ತಂಡವು ಎರಡನೇ ದಿನದಾಟದಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿದ್ದು, ಇನ್ನೂ 378 ರನ್‌ಗಳ ಹಿನ್ನಡೆಯಲ್ಲಿದೆ. ಫಾಲೋ ಆನ್ ತಪ್ಪಿಸಿಕೊಳ್ಳಬೇಕಿದ್ದರೇ ವಿಂಡೀಸ್ ಪಡೆ ಇನ್ನೂ 178 ರನ್ ಬಾರಿಸಬೇಕಿದೆ.

ರವೀಂದ್ರ ಜಡೇಜಾ ಮಾರಕ ದಾಳಿಗೆ ವೆಸ್ಟ್ ಇಂಡೀಸ್ ಕಂಗಾಲು

ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ವೆಸ್ಟ್ ಇಂಡೀಸ್ ತಂಡವು ಮತ್ತೊಮ್ಮೆ ರವೀಂದ್ರ ಜಡೇಜಾ ಮಾರಕ ದಾಳಿಗೆ ಕಂಗಾಲಾಗಿ ಹೋಗಿದೆ. ತಂಡ 21 ರನ್ ಗಳಿಸುವಷ್ಟರಲ್ಲಿ ಆರಂಭಿಕ ಬ್ಯಾಟರ್ ಜಾನ್ ಕ್ಯಾಂಪ್ಬೆಲ್‌(10) ಅವರಿಗೆ ಜಡೇಜಾ ಪೆವಿಲಿಯನ್ ಹಾದಿ ತೋರಿಸಿದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ತೇಜ್‌ನರೈನ್ ಚಂದ್ರಪಾಲ್ ಹಾಗೂ ಅಲಿಕ್ ಅಥನಾಜೆ 66 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಮತ್ತೆ ಜಡೇಜಾ ಯಶಸ್ವಿಯಾದರು. 34 ರನ್ ಗಳಿಸಿದ ತೇಜ್‌ನರೈನ್, ರಾಹುಲ್ ಹಿಡಿದ ಅದ್ಭುತ ಕ್ಯಾಚ್‌ಗೆ ಪೆವಿಲಿಯನ್ ಹಾದಿ ಹಿಡಿದರು. ಇನ್ನು ಇದರ ಬೆನ್ನಲ್ಲೇ ಅಥನಾಜೆ(41)ಗೆ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ವಿಂಡೀಸ್‌ ನಾಯಕ ರೋಸ್ಟನ್ ಚೇಸ್(0) ಖಾತೆ ತೆರೆಯುವ ಮುನ್ನವೇ ಜಡ್ಡು ಪೆವಿಲಿಯನ್ ಹಾದಿ ತೋರಿಸಿದರು.

Scroll to load tweet…

 

ಇನ್ನು ಇದಕ್ಕೂ ಮೊದಲು 318 ರನ್‌ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾ, ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು. ಜೈಸ್ವಾಲ್ ಎರಡನೇ ದಿನದಾಟದಲ್ಲಿ ತನ್ನ ಖಾತೆಗೆ ಎರಡು ರನ್ ಸೇರಿಸಿ 175 ರನ್‌ ಗಳಿಸಿದ್ದಾಗ ಇಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು. ಇದಾದ ಬಳಿಕ ನಿತೀಶ್ ಕುಮಾರ್ ರೆಡ್ಡಿ ಹಾಗೂ ಶುಭ್‌ಮನ್ ಗಿಲ್ ಜೋಡಿ ನಾಲ್ಕನೇ ವಿಕೆಟ್‌ಗೆ 91 ರನ್‌ಗಳ ಜತೆಯಾಟವಾಡಿದರು. ನಿತೀಶ್ ಕುಮಾರ್ ರೆಡ್ಡಿ 43 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು.

10ನೇ ಟೆಸ್ಟ್ ಶತಕ ಸಿಡಿಸಿದ ನಾಯಕ ಗಿಲ್:

ಮೊದಲ ದಿನದಾಟದಂತ್ಯಕ್ಕೆ ಅಜೇಯ 20 ರನ್ ಬಾರಿಸಿದ್ದ ಶುಭ್‌ಮನ್ ಗಿಲ್, ಎರಡನೇ ದಿನ ಚುರುಕಿನ ಬ್ಯಾಟಿಂಗ್ ನಡೆಸುವ ಮೂಲಕ ಗಮನ ಸೆಳೆದರು. ಒಟ್ಟು 176 ಎಸೆತಗಳನ್ನು ಎದುರಿಸಿದ ಶುಭ್‌ಮನ್ ಗಿಲ್ 14 ಬೌಂಡರಿ ಹಾಗೂ ಒಂದು ಮುಗಿಲೆತ್ತರದ ಸಿಕ್ಸರ್ ಸಹಿತ ಆಕರ್ಷಕ ಶತಕ ಪೂರೈಸಿದರು. ಇದರೊಂದಿಗೆ ಶುಭ್‌ಮನ್ ಗಿಲ್ ನಾಯಕನಾಗಿ ಕೇವಲ 12 ಇನ್ನಿಂಗ್ಸ್‌ಗಳನ್ನಾಡಿ 5ನೇ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದರು. ಈ ಮೂಲಕ ಅತಿ ಕಡಿಮೆ ಇನ್ನಿಂಗ್ಸ್‌ಗಳನ್ನಾಡಿ ಅತಿವೇಗವಾಗಿ 5+ ಶತಕ ಸಿಡಿಸಿ ಮೂರನೇ ಬ್ಯಾಟರ್ ಎನ್ನುವ ಹಿರಿಮೆಗೂ ಗಿಲ್ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಇಂಗ್ಲೆಂಡ್‌ನ ಅಲಿಸ್ಟರ್ ಕುಕ್ 9 ಇನ್ನಿಂಗ್ಸ್‌ಗಳನ್ನಾಡಿ ಹಾಗೂ ಭಾರತದ ಸುನಿಲ್ ಗವಾಸ್ಕರ್ ನಾಯಕನಾಗಿ ಮೊದಲ 10 ಇನ್ನಿಂಗ್ಸ್‌ಗಳಲ್ಲಿ 5 ಶತಕ ಸಿಡಿಸಿ ಮೊದಲೆರಡು ಸ್ಥಾನದಲ್ಲಿದ್ದಾರೆ. ಶುಭ್‌ಮನ್ ಗಿಲ್ 196 ಎಸೆತಗಳನ್ನು ಎದುರಿಸಿ 16 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 129 ರನ್ ಸಿಡಿಸಿದರು.

ಇನ್ನು ಐದನೇ ವಿಕೆಟ್‌ಗೆ ಶುಭ್‌ಮನ್ ಗಿಲ್ ಹಾಗೂ ಧ್ರುವ್ ಜುರೆಲ್ 155 ಎಸೆತಗಳನ್ನು ಎದುರಿಸಿ 102 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ಐನೂರರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಜುರೆಲ್ 44 ರನ್ ಗಳಿಸಿ ರೋಸ್ಟನ್ ಚೇಸ್‌ಗೆ ವಿಕೆಟ್ ಒಪ್ಪಿಸುತ್ತಿದ್ದಂತೆಯೇ ನಾಯಕ ಗಿಲ್ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡರು.

 



Source link

Leave a Reply

Your email address will not be published. Required fields are marked *