ವಿಜಯಪುರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಗ್ರಾಮ ಪಂಚಾಯತ್ ಸದಸ್ಯನ ಭೀಕರ ಹತ್ಯೆ | Gunfire Again In Vijayapura Gram Panchayat Member Brutally Murdered

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಗುಂಡು ಹಾರಿಸಿ ಗ್ರಾಮ ಪಂಚಾಯತ್ ಸದಸ್ಯನ ಕೊಲೆ ಮಾಡಲಾಗಿದೆ. ವಿಜಯಪುರ ನಗರದ ಹೊರವಲಯದ ಅಲಿಯಾಬಾದ್ ಬಳಿ ಘಟನೆ ನಡೆದಿದೆ.

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು

ವಿಜಯಪುರ: ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಗುಂಡು ಹಾರಿಸಿ ಗ್ರಾಮ ಪಂಚಾಯತ್ ಸದಸ್ಯನ ಕೊಲೆ ಮಾಡಲಾಗಿದೆ. ವಿಜಯಪುರ ನಗರದ ಹೊರವಲಯದ ಅಲಿಯಾಬಾದ್ ಬಳಿ ಘಟನೆ ನಡೆದಿದೆ.

ಗುಂಡು ಹಾರಿಸಿ ಗ್ರಾ.ಪಂ. ಸದಸ್ಯನ ಹತ್ಯೆ

ಗ್ರಾ.ಪಂ ಸದಸ್ಯ ರಾಜು ಕುರಿ ಅವರ ಮೇಲೆ ದುಷ್ಕರ್ಮಿಗಳು ಆರು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದು, ಬಳಿಕ ಶವದ ಮೇಲೆ ಕಲ್ಲು ಎತ್ತಿ ಹಾಕಿ ಎಸ್ಕೇಪ್ ಆಗಿದ್ದಾರೆ. ಹತ್ಯೆಯಾದ ರಾಜು ಕುರಿ ಅವರು ತಾಂಗರುನ ದೊಡ್ಡಿ ನಿವಾಸಿಯಾಗಿದ್ದಾರೆ. ಘಟನೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: 2 ಸಾವಿರ ನೀಡಿ ಮ್ಯೂಸಿಕ್ ಫೆಸ್ಟ್‌ಗೆ ಹೋಗಿದ್ದ ಇಬ್ಬರು ಎಂಬಿಎ ವಿದ್ಯಾರ್ಥಿಗಳು ಡ್ರಗ್ಸ್ ಓವರ್‌ಡೋಸ್ ಆಗಿ ಸಾವು

Source link

Leave a Reply

Your email address will not be published. Required fields are marked *