Headlines

BREAKING: ಜನಾರ್ದನ ರೆಡ್ಡಿ-ಶ್ರೀರಾಮುಲು ಅವರ ‘ಮಾಡೆಲ್‌ ಹೌಸ್‌’ಗೆ ಬೆಂಕಿ! ಕಾಂಗ್ರೆಸ್‌ನವರದ್ದೇ ಕೃತ್ಯ, ಗಂಭೀರ ಆರೋಪ | Fire At Janardhan Reddy Sriramulu Model House Ballari Congress Hand Suspected

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಸೇರಿದ ಲೇಔಟ್‌ನ ಮಾಡೆಲ್ ಹೌಸ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇತ್ತೀಚೆಗೆ ನಡೆದ ಬ್ಯಾನರ್ ಗಲಾಟೆಯ ಮುಂದುವರಿದ ಭಾಗ ಇದಾಗಿದ್ದು, ಇದು ಕಾಂಗ್ರೆಸ್ ನವರ ಕೃತ್ಯ ಎಂದು ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಆರೋಪಿಸಿದ್ದಾರೆ.

ಬಳ್ಳಾರಿ (ಜ.23): ಗಣಿ ನಾಡು ಬಳ್ಳಾರಿಯಲ್ಲಿ ಬ್ಯಾನರ್ ಹರಿದ ಪ್ರಕರಣದ ಬಿಸಿ ಆರುವ ಮುನ್ನವೇ ಮತ್ತೊಂದು ಶಾಕಿಂಗ್ ಘಟನೆ ಜರುಗಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಸೇರಿದ ಲೇಔಟ್‌ನ ಮಾಡೆಲ್ ಹೌಸ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ನಗರದಲ್ಲಿ ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಜಿ ಸ್ಕೈರ್ ಲೇಔಟ್‌ನಲ್ಲಿ ಅಗ್ನಿ ಅವಘಡ ‘ಕಿಡಿ’ಗೇಡಿ ಯಾರು?

ಬಳ್ಳಾರಿಯ ಜಿ ಸ್ಕೈರ್ ಲೇಔಟ್‌ನಲ್ಲಿ ಅಂದಾಜು 100 ಎಕರೆ ಪ್ರದೇಶದಲ್ಲಿ ಬೃಹತ್ ವಸತಿ ವಿನ್ಯಾಸ ಮಾಡಲಾಗಿತ್ತು. ಇಲ್ಲಿ ನಿವೇಶನ ಖರೀದಿಸಲು ಬರುವವರಿಗೆ ಮಾದರಿಯಾಗಿ ತೋರಿಸಲು ಸುಸಜ್ಜಿತವಾದ ‘ಮಾಡೆಲ್ ಹೌಸ್’ ನಿರ್ಮಿಸಲಾಗಿತ್ತು. ಇಂದು ಸಂಜೆ ಸುಮಾರು 6:30ರ ಸುಮಾರಿಗೆ ಈ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆ ಮನೆಯ ಬಹುಪಾಲು ಸುಟ್ಟು ಭಸ್ಮವಾಗಿದೆ.

ಕಾಂಗ್ರೆಸ್ ನವರ ಕೃತ್ಯ: ಸೋಮಶೇಖರ್ ರೆಡ್ಡಿ ಗಂಭೀರ ಆರೋಪ

ಈ ಬೆಂಕಿ ಅವಘಡದ ಬೆನ್ನಲ್ಲೇ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ‘ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲ, ಕಾಂಗ್ರೆಸ್ ನವರು ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ’ ಎಂದು ಆರೋಪಿಸಿದ್ದಾರೆ. ಮೊನ್ನೆ ಬ್ಯಾನರ್ ಗಲಾಟೆ ನಡೆದ ಸಮಯದಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದರು, ಅದರ ಮುಂದುವರಿದ ಭಾಗವೇ ಇದು ಎಂದು ಅವರು ಆರೋಪಿಸಿದ್ದಾರೆ.

ಕಿಡಿಗೇಡಿಗಳನ್ನು ಹಿಡಿಯಲು ಯತ್ನ

ಸಂಜೆ ವೇಳೆ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚುತ್ತಿರುವುದನ್ನು ಗಮನಿಸಿದ ಕೆಲವರು ಕಿಡಿಗೇಡಿಗಳನ್ನು ಬೆನ್ನಟ್ಟಿ ಹಿಡಿಯಲು ಪ್ರಯತ್ನ ಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾನರ್ ಕಿತ್ತಾಟದ ನಂತರ ಈ ಘಟನೆ ನಡೆದಿರುವುದು ರೆಡ್ಡಿ ಮತ್ತು ಶ್ರೀರಾಮುಲು ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಬಳ್ಳಾರಿಯಲ್ಲಿ ಮತ್ತೆ ರಾಜಕೀಯ ಕಿಚ್ಚು

ಬ್ಯಾನರ್ ಗಲಾಟೆ ಸಾಕ್ಷಿ ಎನ್ನುವಂತೆ ಈಗ ನಮ್ಮ ಆಸ್ತಿಗೆ ಬೆಂಕಿ ಹಚ್ಚಲಾಗಿದೆ ಎಂದು ಸೋಮಶೇಖರ್ ರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ.

Source link

Leave a Reply

Your email address will not be published. Required fields are marked *