DK Shivakumar clarifies that he has not met Amit Shah ಅಮಿತ್‌ ಶಾರನ್ನು ಭೇಟಿ ಆಗಿಲ್ಲ: ಡಿಕೆ ಶಿವಕುಮಾರ ಸ್ಪಷ್ಟನೆ | Dk Shivakumar Clarifies That He Has Not Met Amit Shah Intl

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ತಾವು ಅಮಿತ್ ಶಾ ಅವರನ್ನು ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಮೇಕೆದಾಟು ಮತ್ತು ಆಲಮಟ್ಟಿ ಯೋಜನೆಗಳ ಕುರಿತು ಮಾತನಾಡಿದರು.

ನವದೆಹಲಿ  (ಸೆ.23): ರಾಷ್ಟ್ರ ರಾಜಧಾನಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ\B \Bಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಇಂದಿರಾ ಭವನದಲ್ಲಿ ಭೇಟಿಯಾಗಿ ಅರ್ಧಗಂಟೆಗೂ ಹೆಚ್ಚು ಕಾಲ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ದೆಹಲಿಯಲ್ಲಿ ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿಲ್ಲ. ಕೆಲವರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ ಎಂದು ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಸಾಮಾಜಿಕ, ಶೈಕ್ಷಣಿಕ ಸಹಾಯಕ್ಕೆ ಸಮೀಕ್ಷೆ, ಆನ್‌ಲೈನ್ ಅವಕಾಶವೂ ಲಭ್ಯ: ಡಿಕೆಶಿ

ಮೇಕೆದಾಟು ಕೇಸ್ ನಾಳೆ (ಮಂಗಳವಾರ) ಇತ್ತು. ಆದರೆ, ಸಾಂವಿಧಾನಿಕ ಪೀಠ ವಿಚಾರಣೆ ಕೂರುವ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದೆ ಎಂದರು.

ಆಲಮಟ್ಟಿ ಎತ್ತರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ದೇವೆಂದ್ರ ಫಡ್ನವಿಸ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಆ ಕುರಿತು ಕೇಂದ್ರ ಸಚಿವರು, ಬಿಜೆಪಿ ಸಂಸದರು ಉತ್ತರ ಕೊಡಬೇಕು. ಬಸವರಾಜ ಬೊಮ್ಮಾಯಿ, ಜಗದೀಶ್‌ ಶೆಟ್ಟರ್, ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಶೋಭಾ ಕರಂದ್ಲಾಜೆ ಅವರು ಆಲಮಟ್ಟಿ ಬಗ್ಗೆ ಮಾತನಾಡಬೇಕು ಎಂದರು.

Source link

Leave a Reply

Your email address will not be published. Required fields are marked *