ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದ ಉಸ್ತುವಾರಿಯನ್ನು ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಪೊನ್ನೇರಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ಬೆಂಗಳೂರು (ಏ.17): ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದ ಉಸ್ತುವಾರಿಯನ್ನು ಬಮುಲ್ ಅಧ್ಯಕ್ಷ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ವಹಿಸಲಾಗಿದೆ.

ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಏ. 18ರಂದು ತಮಿಳುನಾಡಿನ ಪೊನ್ನೇರಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಸಿದ್ಧತೆಯನ್ನು ಡಿ.ಕೆ. ಸುರೇಶ್ ಅವರಿಗೆ ವಹಿಸಲಾಗಿದೆ.

ಆ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್ ಅವರು ಗುರುವಾರ ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಜತೆಗೆ ಕೇಂದ್ರ ವೀಕ್ಷಕರ ಸಭೆ ನಡೆಸಿ ಸಮಾವೇಶ ಆಯೋಜನೆ ಕುರಿತಂತೆ ಚರ್ಚೆ ನಡೆಸಿದರು.
