ಬಡತನ ಮೆಟ್ಟಿ ನಿಂತ ಪ್ರತಿಭೆಗಳು: ಒಬ್ಬಳು ಅನಾಥೆ, ಮತ್ತೊಬ್ಬ ಸೆಕ್ಯೂರಿಟಿ ಗಾರ್ಡ್ ಮಗ, ಪಿಯುಸಿ ಫಲಿತಾಂಶದಲ್ಲಿ ಟಾಪ್! | 2nd Puc Results 2026 One Is An Orphan Another Is A Security Guard S Son Top Scorers In Puc Results Rav

ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ವಿದ್ಯಾರ್ಥಿನಿ ಲಾವಣ್ಯ, ಮಹಿಳಾ ಸೆಕ್ಯೂರಿಟಿ ಗಾರ್ಡ್ ಪುತ್ರ ಭರತ್ ಮತ್ತು ಕೂಲಿ ಕಾರ್ಮಿಕನ ಮಗಳು ಅಶ್ವಿನಿ, ತಮ್ಮೆಲ್ಲಾ ಕಷ್ಟಗಳ ನಡುವೆಯೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. 

ಚಿಕ್ಕಬಳ್ಳಾಪುರ (ಏ.11): ತಂದೆ-ತಾಯಿಯನ್ನು ಕಳೆದುಕೊಂಡು 12 ವಯಸ್ಸಿನಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲಾ ಮಕ್ಕಳ ರಕ್ಷ ಣಾ ಘಟಕ ಸೇರಿದ್ದ ಅನಾಥ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.90ರಷ್ಟು ಅಂಕ ಪಡೆದು ಸಾಧನೆ ಮಾಡಿದ್ದಾಳೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರಟಹಳ್ಳಿಯ ಲಾವಣ್ಯ ಎಂಬ ಹುಡುಗಿಯ ತಂದೆ ಶ್ರೀನಿವಾಸ್ 2019ರಲ್ಲಿ ಮೃತಪಟ್ಟಿದ್ದು, 2021ರಲ್ಲಿ ತಾಯಿ ಚಂದ್ರಕಲಾ ಕೊರೋನಾ ಸೋಂಕಿಗೆ ಬಲಿಯಾಗಿದ್ದರು. ಈಕೆಯ ತಾಯಿಯ ಅಂತ್ಯಸಂಸ್ಕಾರಕ್ಕೆ ಯಾರು ಬರದಿದ್ದಾಗ ಜೆಸಿಬಿ ಬಕೆಟ್‌ನಲ್ಲಿ ಶವ ಸಾಗಿಸಲಾಗಿತ್ತು. ಪೋಷಕರನ್ನು ಕಳೆದುಕೊಂಡು ಅನಾಥವಾಗಿದ್ದ ಲಾವಣ್ಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸೇರಿದ್ದಳು. ಇಲ್ಲಿಂದಲೇ ಚಿಕ್ಕಬಳ್ಳಾಪುರದ ವಿಶ್ವವಿವೇಕ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಪ್ರಕಟವಾದ ಫಲಿತಾಂಶದಲ್ಲಿ 600ಕ್ಕೆ 541 ಅಂಕ ಪಡೆದು ಸಾಧನೆ ಮಾಡಿದ್ದಾಳೆ.

ಲಾವಣ್ಯಳಿಗೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ನೀಡಿದ ಮಾರ್ಗದರ್ಶನ ಸಹಕಾರಿಯಾಗಿದೆ. ಜೊತೆಗೆ ಬಾಲ್ಯದಲ್ಲೇ ಎದುರಾದ ಕಷ್ಟಗಳು ಆಕೆಯನ್ನು ಮಾನಸಿಕವಾಗಿ ಗಟ್ಟಿಯಾಗಿಸಿದೆ.

ಮಹಿಳಾ ಸೆಕ್ಯೂರಿಟಿ ಗಾರ್ಡ್ ಪುತ್ರನಿಗೆ ಪಿಯುಸಿ ಶೇ.99.5 ಅಂಕ!

ಕೊಟ್ಟೂರು: ಮಹಿಳಾ ಸೆಕ್ಯೂರಿಟಿಯ ಮಗನೊಬ್ಬ ದ್ವಿತೀಯ ಪಿಯುಸಿ ಕಲಾ ವಿಭಾಗದ ಪರೀಕ್ಷೆಯಲ್ಲಿ 597 ಅಂಕ (ಶೇ.99.5) ಪಡೆದು ಗಮನಾರ್ಹ ಸಾಧನೆ ತೋರಿದ್ದಾನೆ.

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ನಿಂಬಳಗೇರಿ ಗ್ರಾಮದ ನಿವಾಸಿ ಭರತ್ ಸಾಧಕ ವಿದ್ಯಾರ್ಥಿ. ಈತ ಕೊಟ್ಟೂರು ಭಾಗೀರಥಿ ಪದವಿಪೂರ್ವ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದು, ತಾಯಿ ಬೆಂಗಳೂರಿನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇದೀಗ ಮಗ ಅತ್ಯುತ್ತಮ ಫಲಿತಾಂಶ ಪಡೆದಿರುವುದಕ್ಕೆ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕನ ಮಗಳಿಗೆ ಶೇ.86.5 ಅಂಕ:

ಇದೇ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಓದುತ್ತಿರುವ ಚೌಡಪುರದ ಕೂಲಿ ಕಾರ್ಮಿಕನ ಮಗಳಾದ ಅಶ್ವಿನಿ 519 ಅಂಕ (ಶೇ.86.5) ಪಡೆದು ಜ್ಞಾನಾರ್ಜನೆಗೆ ಬಡತನ ಅಡ್ಡಿ ಬರಲ್ಲ ಎಂದು ತೋರಿಸಿದ್ದಾಳೆ.

Source link

Leave a Reply

Your email address will not be published. Required fields are marked *