Headlines

Supreme Court landmark Darshan bail cancellation judgment ದರ್ಶನ್ ಜಾಮೀನು ರದ್ದು ತೀರ್ಪು ಲ್ಯಾಂಡ್‌ಮಾರ್ಕ್ ಎಂದು ಘೋಷಿಸಿದ ಸುಪ್ರೀಂ, ಹೈಕೋರ್ಟ್‌ಗೆ ರವಾನೆಗೆ ಸೂಚನೆ | Renukaswamy Murder Case Supreme Court Landmark Judgment Darshan Bail Cancel Gow

Supreme Court landmark Darshan bail cancellation judgment ದರ್ಶನ್ ಜಾಮೀನು ರದ್ದು ತೀರ್ಪು ಲ್ಯಾಂಡ್‌ಮಾರ್ಕ್ ಎಂದು ಘೋಷಿಸಿದ ಸುಪ್ರೀಂ, ಹೈಕೋರ್ಟ್‌ಗೆ ರವಾನೆಗೆ ಸೂಚನೆ | Renukaswamy Murder Case Supreme Court Landmark Judgment Darshan Bail Cancel Gow



Supreme Court landmark Darshan bail cancellation judgment ದರ್ಶನ್ ಜಾಮೀನು ರದ್ದು ತೀರ್ಪು ಲ್ಯಾಂಡ್‌ಮಾರ್ಕ್ ಎಂದು ಘೋಷಿಸಿದ ಸುಪ್ರೀಂ, ಹೈಕೋರ್ಟ್‌ಗೆ ರವಾನೆಗೆ ಸೂಚನೆ | Renukaswamy Murder Case Supreme Court Landmark Judgment Darshan Bail Cancel Gow

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಆಘಾತ ನೀಡಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದೆ. ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್‌, ಸಾಕ್ಷ್ಯ ನಾಶದ ಪ್ರಯತ್ನ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಈ ತೀರ್ಪು ನೀಡಲಾಗಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ನ್ಯಾ. ಜೆ.ಬಿ. ಪರ್ದಿವಾಲಾ ಮತ್ತು ನ್ಯಾ. ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ. ಈ ತೀರ್ಪು ದರ್ಶನ್‌ ವೃತ್ತಿ ಜೀವನಕ್ಕೆ ದೊಡ್ಡ ಹೊಡೆತವಾಗಿದೆ.

ಹೈಕೋರ್ಟ್ ಆದೇಶದ ವಿರುದ್ಧ ಅಸಮಾಧಾನ

“ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಆರೋಪಿ ಎಷ್ಟೇ ದೊಡ್ಡವರಾಗಿದ್ದರೂ ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತವನ್ನು ಎತ್ತಿ ಹಿಡಿಯಬೇಕು. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ” ಎಂದು ಪೀಠ ಸ್ಪಷ್ಟಪಡಿಸಿದೆ.

ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್‌ಗೆ ತೀವ್ರ ಟೀಕೆ

ಜೈಲಿನಲ್ಲಿ ಆರೋಪಿಗಳಿಗೆ 5 ಸ್ಟಾರ್ ಅತಿಥ್ಯ ನೀಡಿರುವ ಬಗ್ಗೆ ನ್ಯಾಯಪೀಠ ತೀವ್ರ ಆಕ್ರೋಶ ವ್ಯಕ್ತಪಡಿಸಿತು. “ಜೈಲು ಸೂಪರಿಂಟೆಂಡೆಂಟ್‌ರನ್ನು ಸಸ್ಪೆಂಡ್ ಮಾಡಬೇಕಿತ್ತು” ಎಂದು ಅಭಿಪ್ರಾಯಪಟ್ಟಿದೆ. “ಯಾರಿಗಾದರೂ ವಿಐಪಿ ಅತಿಥ್ಯ ನೀಡುತ್ತಿರುವ ಫೋಟೋ ಅಥವಾ ವೀಡಿಯೋ ಕಂಡುಬಂದರೆ, ಮೊದಲು ನಿಮ್ಮನ್ನು ಸಮನ್ಸ್ ಮಾಡಲಾಗುತ್ತದೆ” ಎಂದು ನ್ಯಾ. ಪರ್ದಿವಾಲಾ ಎಚ್ಚರಿಸಿದರು.

ತೀರ್ಪು ಲ್ಯಾಂಡ್‌ಮಾರ್ಕ್ ಎಂದು ಘೋಷಣೆ

ಈ ತೀರ್ಪು ಲ್ಯಾಂಡ್‌ಮಾರ್ಕ್ ತೀರ್ಪು ಎಂದು ಸುಪ್ರೀಂ ಕೋರ್ಟ್ ಘೋಷಿಸಿದ್ದು, ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್‌ಗಳು ಹಾಗೂ ರಾಜ್ಯ ಸರ್ಕಾರಗಳಿಗೆ ನೀಡುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದೆ.

ಯಾವೆಲ್ಲ ಆರೋಪಿಗಳ ಜಾಮೀನು ರದ್ದು

ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ ಮತ್ತು ಎ12 ಲಕ್ಷ್ಮಣ್‌ ಅವರ ಜಾಮೀನು ಕೂಡ ರದ್ದುಪಡಿಸಲಾಗಿದೆ. ಇವರು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಹಿಂತಿರುಗಬೇಕಾಗಿದೆ.

ಜಾಮೀನು ರದ್ದತಿಗೆ ಪರಿಗಣಿಸಿದ ಅಂಶಗಳಿವು

  • ಸಿಸಿಟವಿ, ಕಾಲ್ ರೆಕಾರ್ಡ್, ಕೃತ್ಯಕ್ಕೆ ಬಳಸಿದ ವಸ್ತುಗಳ ಸೇರಿ ಪ್ರಮುಖ ಸಾಕ್ಷ್ಯಧಾರಗಳ ನಾಶಕ್ಕೆ ಆರೋಪ ಪ್ರಯತ್ನ ಪಟ್ಟಿದ್ದಾರೆ
  • ಪವಿತ್ರಾಗೌಡ ದರ್ಶನ ನಿರಂತರ ಸಂಪರ್ಕದಲ್ಲಿದ್ದರು, ಕೊಲೆ ನಡೆದಾಗ ಘಟನಾ ಸ್ಥಳದಲ್ಲಿ ಹಾಜರಿದ್ದರು
  • ದರ್ಶನ ಘಟನಾ ಸ್ಥಳದಲ್ಲಿ ಇರಲಿಲ್ಲ ಎಂದು ವಾದಿಸಿದ್ದರು, ಆದರೆ ಕೊಲೆಗೂ ಮುನ್ನ ಇತರೆ ಆರೋಪಿಗಳ ಜೊತೆಗೆ ಸಂಪರ್ಕದಲ್ಲಿರುವುದು ಸಾಬೀತಾಗಿದೆ, ಹೀಗಾಗೀ ಕೊಲೆಗೆ ಇವರ ಪ್ರೇರಣೆ ಇದ್ದಂತಿದೆ
  • ಸೆಲಬ್ರಿಟಿ ಆದ ಮಾತ್ರಕ್ಕೆ ಕಾನೂನಿಗಿಂತ ದೊಡ್ಡವರಲ್ಲ
  • ಸಮಾಜದಲ್ಲಿರುವ ಉನ್ನತ ವ್ಯಕ್ತಿ ಅಥಾವ ಖ್ಯಾತ ವ್ಯಕ್ತಿ ಮತ್ತು ಪ್ರಭಾವಶಾಲಿ ವ್ಯಕ್ತಿಯಾದರೂ ಅವರು ಕಾನೂನು ವ್ಯಾಪ್ತಿಯಿಂದ ಹೊರಗಿಲ್ಲ
  • ಬಂಧನದಲ್ಲಿ ಇದ್ದಾಗಲೂ ಜೈಲಿನ ವ್ಯವಸ್ಥೆ ಮೀರಿ ರಾಜ್ಯಥಿಥ್ಯ ಪಡೆದ ವ್ಯಕ್ತಿ ಸಾಕ್ಷ್ಯಗಳನ್ನು ನಾಶ ಮಾಡುವ, ಅಥಾವ ಅವರ ಮೇಲೆ ಬೆದರಿಕೆ ಹಾಕುವ ಸಾಧ್ಯತೆಗಳಿದೆ
  • ನಟ ದರ್ಶನ ಸಾಮಾನ್ಯ ವ್ಯಕ್ತಿಯಲ್ಲ, ಅಪಾರ ಜನಪ್ರೀಯತೆ ಮತ್ತು ಬೆಂಬಲಿಗರನ್ನು ಹೊಂದಿರುವ ಅವರು ಆರ್ಥಿಕ, ರಾಜಕೀಯವಾಗಿ ಸಧೃಡವಾಗಿದ್ದಾರೆ
  • ದರ್ಶನ್ ಜೈಲಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿದ್ದು ಗಮನಕ್ಕೆ ಬಂದರೂ ಹೈಕೋರ್ಟ್ ಜಾಮೀನು ನೀಡಿದೆ, ಈ ವಿಚಾರಗಳು ಹೈಕೋರ್ಟ್ ತನ್ನ ವಿಚೇಚನೆ ಬಳಸಿಲ್ಲ ಎನ್ನುವುದಕ್ಕೆ ಪೂರಕವಾಗಿದೆ
  • ನ್ಯಾಯಂಗ ವ್ಯವಸ್ಥೆಯುಳ್ಳ ಪ್ರಜಾಪ್ರಭುತ್ವದಲ್ಲಿ ಹಣವಂತ, ಶಕ್ತಿವಂತ ಅಥಾವ ಖ್ಯಾತ ವ್ಯಕ್ತಿಯೂ ಸಾಮಾನ್ಯ ವ್ಯಕ್ತಿಯೇ ಆಗಿರುತ್ತಾನೆ
  • ನಟ ದರ್ಶನ ಜಾಮೀನು ಪಡೆಯಲು ಅನಾರೋಗ್ಯ ಕಾರಣಗಳನ್ನು ನೀಡಿದ್ದರು
  • ಇದೇ ಆಧಾರದ ಮೇಲೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದಂತಿದೆ
  • 28/11/24 ರಲ್ಲಿ ವೈದ್ಯರು ನೀಡಿದ ವರದಿ ಪ್ರಕಾರ ದರ್ಶನಗೆ ಸಕ್ಕರೆ ಖಾಯಿಲೆ, ಹೃದಯ ಸಂಬಂಧಿ ಸಣ್ಣ ಸಮಸ್ಯೆ ಮಂಬರುವ ದಿನಗಳಲ್ಲಿ ಬೆನ್ನು ನೋವಿಗೆ ಶಸ್ತ್ರ ಚಿಕಿತ್ಸೆ ಅಗತ್ಯ ಇದೆ, ಆದರೆ ಅದು ತುರ್ತಾಗಿ ಅಲ್ಲ ಎಂದು ಉಲ್ಲೇಖಿಸಿದೆ
  • ಜಾಮೀನು ಪಡೆದ ಬಳಿಕ ಸೂಕ್ತ ವೈದ್ಯಕೀಯ ಸೌಲಭ್ಯ ಪಡೆದಿಲ್ಲ
  • ದರ್ಶನ ಪರ ವಕೀಲರು ಜಾಮೀನು ದುರುಪಯೋಗ ಪಡೆಸಿಕೊಂಡಿಲ್ಲ ಅಂತಾ ಹೇಳಿದ್ದರು, ಪ್ರಕರಣ ತನಿಖೆಯ ಹಾದಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ
  • ಪ್ರಕರಣ ಬೆಳಕಿಗೆ ಬಾರದಂತೆ ದರ್ಶನ್ A10 – A 14 ಗೆ ಶರಣಾಗುವಂತೆ ಹೇಳಿದ್ದ, ಇದನ್ನು ಮಾಡಲು ಹಣ ಪಾವತಿಸಿದ್ದರು
  • ಪವಿತ್ರಾಗೌಡ ಮನೆಯ ಸಿಸಿಟಿವಿ ದೃಶ್ಯಗಳನ್ನು ಡಿಲಿಟ್ ಮಾಡಿದೆ
  • ನಟ ದರ್ಶನ ಜಾಮೀನು ಪಡೆದ ಬಳಿಕ ಸಾಕ್ಷ್ಯಗಳ ಜೊತೆಗೆ ಬಹಿರಂಗವಾಗಿ ವೇದಿಕೆ ಹಂಚಿಕೊಂಡಿದ್ದಾರೆ
  • ಪ್ರಕರಣದಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿಲ್ಲ ಎಂದು ಹೇಳಿದರೂ ಸಿಸಿಟಿವಿ ದೃಶ್ಯಗಳ ನಾಶ, ಇನ್ನಿತರ ಆರೋಪಿಗಳನ್ನು ಶರಣಾಗುವಂತೆ ಹೇಳುವ ಮೂಲಕ ತನಿಖಾ ಹಾದಿ ತಪ್ಪಿಸಲು ತಮ್ಮ ಪ್ರಭಾವ ಬಳಸಿದ್ದಾರೆ
  • ಈ‌ ಕೊಲೆ ಹಠಾತ್ ಪ್ರಚೋಧನೆ ಅಥಾವ ಭಾವನೆಗಳು ಸ್ಫೋಟಗೊಂಡು ಮಾಡಿರುವ ಪ್ರಕರಣ ಅಲ್ಲ, ಪುರಾವೆಗಳನ್ನು ನೋಡಿದಾಗ ಇದು ಪೂರ್ವಯೋಜಿತ, ಸಂಘಟಿತ ಅಪರಾಧವನ್ನು ಸೂಚಿಸುತ್ತದೆ



Source link

Leave a Reply

Your email address will not be published. Required fields are marked *