ಬಾಗಲಕೋಟೆಯಲ್ಲಿ ಎರಡನೇ ಶಾಂತಿ ಸಭೆಯೂ ವಿಫಲ: ಹಿಂದೂ ಮುಖಂಡರ ಗೈರು; ಮುಸ್ಲಿಂ ಮುಖಂಡರಷ್ಟೇ ಹಾಜರ್! | Bagalkot Stone Pelting Case Second Peace Meeting Fails To Reach Consensus

ಬಾಗಲಕೋಟೆಯಲ್ಲಿ ಎರಡನೇ ಶಾಂತಿ ಸಭೆಯೂ ವಿಫಲ: ಹಿಂದೂ ಮುಖಂಡರ ಗೈರು; ಮುಸ್ಲಿಂ ಮುಖಂಡರಷ್ಟೇ ಹಾಜರ್! | Bagalkot Stone Pelting Case Second Peace Meeting Fails To Reach Consensus


ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ನಂತರ ಬಾಗಲಕೋಟೆಯಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಶಾಂತಿ ಸಭೆಯು ಹಿಂದೂ ಮುಖಂಡರ ಗೈರುಹಾಜರಿಯಿಂದ ವಿಫಲ.. ಸಭೆಗೆ ಹಾಜರಾದ ಮುಸ್ಲಿಂ ಮುಖಂಡರು, ನೈಜ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸಭೆಯಿಂದ ನಿರ್ಗಮಿಸಿದರು.

ಬಾಗಲಕೋಟೆ (ಫೆ.21): ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಬೆನ್ನಲ್ಲೇ ನಗರದಲ್ಲಿ ಶಾಂತಿ ಸ್ಥಾಪಿಸಲು ಜಿಲ್ಲಾಡಳಿತ ನಡೆಸಿದ ಎರಡನೇ ಹಂತದ ಶಾಂತಿ ಸಭೆಯೂ ವಿಫಲವಾಗಿದೆ. ಸಭೆಗೆ ಹಿಂದೂ ಸಮುದಾಯದ ಮುಖಂಡರು ಬಾರದೆ ಗೈರಾದ ಹಿನ್ನೆಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ನವನಗರದ ಜಿಲ್ಲಾಡಳಿತ ಭವನದಲ್ಲಿ ಹೈವೋಲ್ಟೇಜ್ ಸಭೆ

ಬಾಗಲಕೋಟೆಯ ನವನಗರದಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಇಂದು ಮಹತ್ವದ ಸಭೆ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಸಂಗಪ್ಪ, ಎಸ್ಪಿ ಸಿದ್ದಾರ್ಥ ಗೋಯಲ್, ಸಿಇಓ ಶಶಿಧರ್ ಕುರೇರ್ ಮತ್ತು ವಿಶೇಷ ಆಹ್ವಾನಿತರಾಗಿ ಮಾಜಿ ಎಸ್ಪಿ ಅಮರನಾಥ್ ರೆಡ್ಡಿ ಅವರು ಭಾಗವಹಿಸಿದ್ದರು. ಉಭಯ ಸಮುದಾಯಗಳ ಮುಖಂಡರನ್ನು ವಿಶ್ವಾಸಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದರು.

ಹಿಂದೂ ಮುಖಂಡರ ಗೈರು; ಸಭೆಗೆ ಬಾರದ ಪ್ರಮುಖರು

ಸಭೆ ಆರಂಭಕ್ಕೆ ಕ್ಷಣಗಣನೆ ಆರಂಭವಾದರೂ ಹಿಂದೂ ಸಮುದಾಯದ ಮುಖಂಡರು ಸಭಾಂಗಣಕ್ಕೆ ಆಗಮಿಸಲಿಲ್ಲ. ಕೇವಲ ಮುಸ್ಲಿಂ ಸಮುದಾಯದ ಮುಖಂಡರು ಮಾತ್ರ ಡಿಸಿ ಸಭಾಂಗಣದಲ್ಲಿ ಹಾಜರಿದ್ದರು. ಹಿಂದೂ ಮುಖಂಡರ ಅನುಪಸ್ಥಿತಿಯಿಂದಾಗಿ ಸಭೆಯ ಮೂಲ ಉದ್ದೇಶ ಈಡೇರದೆ ಚರ್ಚೆ ಅರ್ಧಕ್ಕೆ ನಿಂತಂತಾಯಿತು.

ಆರೋಪಿಗಳ ಬಂಧನಕ್ಕೆ ಮುಸ್ಲಿಂ ಮುಖಂಡರ ಪಟ್ಟು

ಸಭೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಮುಖಂಡರು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ‘ಕಲ್ಲು ತೂರಾಟ ನಡೆಸಿದವರು ಮತ್ತು ಬೆಂಕಿ ಹಚ್ಚಿದ ನೈಜ ಆರೋಪಿಗಳನ್ನು ಕೂಡಲೇ ಬಂಧಿಸಬೇಕು’ ಎಂದು ಅವರು ಒತ್ತಾಯಿಸಿದರು. ಕಠಿಣ ಕ್ರಮದ ಭರವಸೆಯನ್ನು ಅಧಿಕಾರಿಗಳಿಂದ ಪಡೆದ ನಂತರ ಮುಸ್ಲಿಂ ಮುಖಂಡರು ಸಭೆಯಿಂದ ಹೊರನಡೆದರು.

ಶಾಂತಿ ಮಂತ್ರ ಪಠಿಸಿದ ಮುಖಂಡರು: ಜಿಲ್ಲಾಡಳಿತದ ಭರವಸೆ

ಸಭೆಯ ನಂತರ ಮಾತನಾಡಿದ ಮುಸ್ಲಿಂ ಮುಖಂಡರು, ‘ನಾವು ಯಾವುದೇ ಸಂದರ್ಭದಲ್ಲೂ ಎಲ್ಲಾ ಸಮುದಾಯದ ಜನರೊಂದಿಗೆ ಸೌಹಾರ್ದತೆಯಿಂದ ಇರಲು ಸಿದ್ಧರಿದ್ದೇವೆ. ಶಾಂತಿ ಮತ್ತು ಭಾಂಧವ್ಯಕ್ಕೆ ನಮ್ಮ ಸಹಕಾರ ಸದಾ ಇರುತ್ತದೆ ಎಂದು ತಿಳಿಸಿದರು. ಜಿಲ್ಲಾಡಳಿತವು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದರೂ, ಎರಡೂ ಕಡೆಯವರು ಒಟ್ಟಾಗಿ ಸಭೆಯಲ್ಲಿ ಪಾಲ್ಗೊಳ್ಳದಿರುವುದು ಸದ್ಯದ ಕುತೂಹಲಕ್ಕೆ ಕಾರಣವಾಗಿದೆ.

YouTube video player



Source link

Leave a Reply

Your email address will not be published. Required fields are marked *