ಕಡಬ: ತಂದೆಗೆ ಚಾಕುವಿನಿಂದ ಇರಿದು ಬಳಿಕ ಗುಂಡಿಕ್ಕಿಕೊಂಡ ಬಾಲಕ: ಮಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ | Kadaba News Son Attacks Father Then Shoots Himself To Death

ಕಡಬ: ತಂದೆಗೆ ಚಾಕುವಿನಿಂದ ಇರಿದು ಬಳಿಕ ಗುಂಡಿಕ್ಕಿಕೊಂಡ ಬಾಲಕ: ಮಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ | Kadaba News Son Attacks Father Then Shoots Himself To Death



ಕಡಬ: ತಂದೆಗೆ ಚಾಕುವಿನಿಂದ ಇರಿದು ಬಳಿಕ ಗುಂಡಿಕ್ಕಿಕೊಂಡ ಬಾಲಕ: ಮಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ | Kadaba News Son Attacks Father Then Shoots Himself To Death

ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ, ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ತನ್ನ ತಂದೆಗೆ ಚಾಕುವಿನಿಂದ ಇರಿದು, ಬಳಿಕ ಮನೆಯಲ್ಲಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ತಂದೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡಬ: ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ವಿದ್ಯಾರ್ಥಿಯೋರ್ವ ತನ್ನ ತಂದೆಗೆ ಚಾಕುವಿನಿಂದ ಹಿಗ್ಗಾಮುಗ್ಗಾ ಇರಿದು ಬಳಿಕ ಮನೆಯಲ್ಲಿದ್ದ ಬಂದೂಕುವಿನಿಂದ ಗುಂಡು ಹಾರಿಸಿಕೊಂಡು ತಾನು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಘಟನೆಯಿಂದ ಗಂಭೀರ ಗಾಯಗೊಂಡಿರುವ ತಂದೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಡಬದ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ.

ರಾಮಕುಂಜದ ಪಾದೆಯಲ್ಲಿ ನೆಲೆಸಿರುವ ವಸಂತ್ ಅಮೀನ್ ಎಂಬುವವರ ಪುತ್ರನೇ ಈ ರೀತಿಗೆ ತಂದೆಯ ಮೇಲೆ ಹಲ್ಲೆ ಮಾಡಿ ಬಳಿಕ ತಾನು ಸಾವಿಗೆ ಶರಣಾದ ಬಾಲಕ. ಮೃತ ಹದಿಹರೆಯದ ಬಾಲಕನನ್ನು ಮೋಕ್ಷ್ ಎಂದು ಗುರುತಿಸಲಾಗಿದೆ. ಮೋಕ್ಷ್ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದ. ಘಟನೆಯಿಂದ ವಸಂತ್ ಅಮೀನ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಇನ್ಸ್ಟಾಗ್ರಾಮ್‌ನಲ್ಲಿ ಸಿಂಗಲ್ ಪೆಂಗ್ವಿನ್‌ಗಾಗಿ ಮರುಗಿದ ನೆಟ್ಟಿಗರು: ವೈರಲ್ ಸ್ಟೋರಿಯ ಅಸಲಿಯತ್ತು?

ಕೇರಳದವರಾದ ವಸಂತ್ ಅಮೀನ್ ಅವರು ಕೆಲ ವರ್ಷಗಳ ಹಿಂದೆ ರಾಮಕುಂಜದ ಪಾದೆ ಎಂಬಲ್ಲಿಗೆ ಬಂದು ಅಲ್ಲಿಯೇ ಭೂಮಿ ಖರೀದಿಸಿ ಮನೆ ನಿರ್ಮಿಸಿಕೊಂಡು ಅಲ್ಲಿ ವಾಸ ಮಾಡುತ್ತಿದ್ದರು. ಜನವರಿ 24ರಂದು ಅಂದರೆ ನಿನ್ನೆ ಯಾವುದೋ ಸಣ್ಣ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ಪ ಮಗನ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ತಂದೆಯ ಬಗ್ಗೆ ತೀವ್ರ ಆಕ್ರೋಶಗೊಂಡ ಮೋಕ್ಷ್, ಮನೆಯಲ್ಲಿದ್ದ ಚಾಕುವಿನಿಂದ ತಂದೆಗೆ ಇರಿದಿದ್ದಾನೆ. ಬಳಿಕ ಮನೆಯಲ್ಲಿದ್ದ ಕೋವಿಯಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ.

ಇದನ್ನೂ ಓದಿ: ಪ್ರೇಮಿಗಳ ದಿನ ಪ್ರೇಮಿಗಳಿಗೆ ಶಾಕ್ ನೀಡೋದಕ್ಕೆ ಮುಂದಾದ ಸಿಂಗಲ್ಸ್‌

ವಿಚಾರ ತಿಳಿದು ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಮಗ ಮೋಕ್ಷ್ ಈ ರೀತಿ ಒಮ್ಮಿಂದೊಮ್ಮೆಲೇ ಕೃತ್ಯವೆಸಗಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ, ಈ ಬಗ್ಗೆ ಪೊಲೀಸರು ತನಿಖೆ ಮಾಡ್ತಿದ್ದಾರೆ.

ವಿಶೇಷ ಮನವಿ:

ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ… ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ‘ಆತ್ಮ8ತ್ಯೆ’ ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:

Sahai Helpline – 080 2549 7777



Source link

Leave a Reply

Your email address will not be published. Required fields are marked *