Irrigation Projects: ಕೇಂದ್ರ ಸರ್ಕಾರ ಹಣ ನೀಡದಿದ್ದರೂ ಭದ್ರಾ ಮೇಲ್ದಂಡೆ ಕಾಮಗಾರಿ: ಸಿಎಂ ಸಿದ್ದರಾಮಯ್ಯ | Siddaramaiah Budget Irrigation Projects Krishna Kaveri Gvd

Irrigation Projects: ಕೇಂದ್ರ ಸರ್ಕಾರ ಹಣ ನೀಡದಿದ್ದರೂ ಭದ್ರಾ ಮೇಲ್ದಂಡೆ ಕಾಮಗಾರಿ: ಸಿಎಂ ಸಿದ್ದರಾಮಯ್ಯ | Siddaramaiah Budget Irrigation Projects Krishna Kaveri Gvd



Irrigation Projects: ಕೇಂದ್ರ ಸರ್ಕಾರ ಹಣ ನೀಡದಿದ್ದರೂ ಭದ್ರಾ ಮೇಲ್ದಂಡೆ ಕಾಮಗಾರಿ: ಸಿಎಂ ಸಿದ್ದರಾಮಯ್ಯ | Siddaramaiah Budget Irrigation Projects Krishna Kaveri Gvd

ಕೃಷ್ಣಾ, ಕಾವೇರಿ, ಗೋದಾವರಿ ಸೇರಿದಂತೆ ರಾಜ್ಯದ ನೀರಾವರಿ ಕ್ಷೇತ್ರದಲ್ಲಿನ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದರ ಜತೆಗೆ ಹೊಸ ಕಾಮಗಾರಿಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಒತ್ತು ನೀಡಿದ್ದಾರೆ.

ಬೆಂಗಳೂರು (ಮಾ.07): ಕೃಷ್ಣಾ, ಕಾವೇರಿ, ಗೋದಾವರಿ ಸೇರಿದಂತೆ ಇತರ ನದಿ ಕಣಿವೆಗಳಲ್ಲಿ ₹8,045 ಕೋಟಿ ಮೊತ್ತದ 75 ನೀರಾವರಿ ಕಾಮಗಾರಿ ಅನುಷ್ಠಾನ ಸೇರಿದಂತೆ 2026-27ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯದ ನೀರಾವರಿ ಕ್ಷೇತ್ರಕ್ಕೆ ₹22,436 ಕೋಟಿ ಅನುದಾನ ಘೋಷಿಸಲಾಗಿದೆ. ರಾಜ್ಯದ ನೀರಾವರಿ ಕ್ಷೇತ್ರದಲ್ಲಿನ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದರ ಜತೆಗೆ ಹೊಸ ಕಾಮಗಾರಿಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಒತ್ತು ನೀಡಿದ್ದಾರೆ.

ಪ್ರಮುಖವಾಗಿ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ನಾಲ್ಕೂ ನಿಗಮಗಳಲ್ಲಿ ಈಗಾಗಲೇ ಕೈಗೊಳ್ಳಲಾಗಿರುವ 12 ನೀರಾವರಿ ಯೋಜನೆಗಳು, 22 ಕೆರೆ ತುಂಬುವ ಯೋಜನೆಗಳು ಮತ್ತು ಮೂರು ಆಧುನೀಕರಣ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ 1.16 ಲಕ್ಷ ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

ಕೃಷ್ಣಾ, ಕಾವೇರಿ, ಗೋದಾವರಿ ಸೇರಿದಂತೆ ಇತರ ನದಿ ಕಣಿವೆಗಳಲ್ಲಿ ₹8,045 ಕೋಟಿ ಮೊತ್ತದ 75 ನೀರಾವರಿ ಕಾಮಗಾರಿ ಅನುಷ್ಠಾನ, ರಾಜ್ಯದ ಕಾಡಾ ಪ್ರಾಧಿಕಾರದಡಿ ಹತ್ತಿಕುಣಿ, ತುಂಗಭದ್ರಾ ಎಡದಂಡೆ ಶಾಖಾ ಕಾಲುವೆ ಅಡಿಯಲ್ಲಿನ 4,745 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿನ ಬಳಕೆ ದಕ್ಷತೆ ಹೆಚ್ಚಿಸಲು ಪ್ರೆಷರೈಸ್ಡ್‌ ಪೈಪ್ಡ್‌ ನೆಟ್ವರ್ಕ್‌ ಪದ್ಧತಿ ಅಳವಡಿಸಿ ನೀರಾವರಿ ವ್ಯವಸ್ಥೆ ಆಧುನೀಕರಿಸಲಾಗುವುದು ಎಂದು ಹೇಳಲಾಗಿದೆ.

ಚಾಮರಾಜನಗರದ ಹನೂರು ತಾಲೂಕಿನ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು ಮತ್ತು 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ₹490 ಕೋಟಿ ವೆಚ್ಚದಲ್ಲಿ ಉಡುತೊರೆಹಳ್ಳ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಹಾಗೂ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಅಡಿ ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿಎಂಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

ಬೃಹತ್‌ ಯೋಜನೆಗಳಿಗೆ ವೇಗ

ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು ಶೀಘ್ರದಲ್ಲಿಯೇ ಸಿದ್ಧಪಡಿಸಿ ಕೇಂದ್ರ ಸರ್ಕಾರದ ಅನುಮೋದನೆಗೆ ಕಳುಹಿಸಲಾಗುವುದು ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಲಾಗಿದೆ. ಜತೆಗೆ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಏತ ನೀರಾವರಿ ಯೋಜನೆಯ 2ನೇ ಹಂತದ ಬಾಕಿ ಇರುವ 18.73 ಕಿಮೀ ಉದ್ದದ ಕಾಲುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲಾಗುವುದು ಹಾಗೂ ಹೆಚ್ಚುವರಿ ನೀರು ಸಂಗ್ರಹಿಸಿ ಬಳಸಿಕೊಳ್ಳಲು ಕೊರಟಗೆರೆ ತಾಲೂಕಿನ ವಡೇರಹಳ್ಳಿ ಬಳಿ 1.2 ಟಿಎಂಸಿ ಸಾಮರ್ಥ್ಯದ ಸಮತೋಲನಾ ಜಲಾಶಯ ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ.

ಕೇಂದ್ರದಿಂದ ₹5,300 ಕೋಟಿ ಅನುದಾನ ಬರದಿದ್ದರೂ ಭದ್ರಾ ಮೇಲ್ದಂಡೆ ಯೋಜನೆ ಅಡಿಯಲ್ಲಿನ ಕಾಮಗಾರಿ ಕೈಗೊಳ್ಳಲಾಗುವುದು ಎಂದು ರಾಜ್ಯ ಬಜೆಟ್‌ನಲ್ಲಿ ತಿಳಿಸಲಾಗಿದೆ. ಅದರ ಭಾಗವಾಗಿ 135 ಕಿ,ಮೀ. ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಅದರ ಅಡಿಯಲ್ಲಿನ ಫೀಡರ್‌ ಕಾಮಗಾರಿಗಳನ್ನು ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲಾಗುವುದು ಎಂದು ಹೇಳಲಾಗಿದೆ. ಹಾಗೆಯೇ, ತುಂಗಭದ್ರಾ ಜಲಾಶಯದಲ್ಲಿ ಶೇಖರಣೆಯಾಗಿರುವ ಹೂಳು ತೆಗೆಯಲು ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಿಸಲು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಿ ತುಂಗಭದ್ರಾ ಮಂಡಳಿಯ ಅನುಮತಿಯೊಂದಿಗೆ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು.

3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಅಡಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸುವುದಾಗಿ ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ, ಆ ಪ್ರಕ್ರಿಯೆಗೆ ಎಷ್ಟು ಅನುದಾನ ಮೀಸಲಿಡಲಾಗಿದೆ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿಲ್ಲ. ಕಳಸಾ-ಬಂಡೂರಾ ನಾಲಾ ಯೋಜನೆಗೆ ಕೇಂದ್ರ ಪರಿಸರ ಸಚಿವಾಲಯ ಮತ್ತು ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಅರಣ್ಯ ತೀರುವಳಿ ನೀಡುವಲ್ಲಾಗುತ್ತಿರುವ ವಿಳಂಬದ ಬಗ್ಗೆ ಬಜೆಟ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಈ ವಿಳಂಬದಿಂದಾಗಿ ರಾಜ್ಯದ ಸರ್ಕಾರದ ಹೊರೆ ಹೆಚ್ಚುತ್ತಿದೆ. ಪ್ರಸಕ್ತ ವರ್ಷದಲ್ಲಿ ಅರಣ್ಯ ತೀರುವಳಿ ಸೇರಿದಂತೆ ಮತ್ತಿತರ ಅನುಮತಿ ಪಡೆಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಲಾಗಿದೆ.



Source link

Leave a Reply

Your email address will not be published. Required fields are marked *