Belagavi Ainapur beef vehicle fire incident: ಬೆಳಗಾವಿ: ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿಯಿಟ್ಟ ಗ್ರಾಮಸ್ಥರು! | Belagavi Mob Sets Beef Vehicle On Fire In Ainapur Police Deployed Intl

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ, ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿದ ಗ್ರಾಮಸ್ಥರು ಅದನ್ನು ಅಗ್ನಿಗಾಹುತಿ ಮಾಡಿದ್ದಾರೆ. ಕುಡಚಿಯಿಂದ ಹೈದರಾಬಾದ್‌ಗೆ ಸಾಗಿಸುತ್ತಿದ್ದ ಸುಮಾರು ಏಳು ಕ್ವಿಂಟಲ್ ಗೋಮಾಂಸ ವಾಹನದಲ್ಲಿತ್ತು ಎನ್ನಲಾಗಿದೆ.

ಬೆಳಗಾವಿ (ಸೆ.23): ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಗ್ರಾಮಸ್ಥರು ಬೆಂಕಿ ಇಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.

ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಿಂದ ಹೈದ್ರಾಬಾದ್‌ಗೆ ಸಾಗಿಸುತ್ತಿದ್ದ ಅಂದಾಜು ಏಳು ಕ್ವಿಂಟಲ್ ಗೋಮಾಂಸ ಸಮೇತ ವಾಹನ ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾಗಿದೆ.

ಘಟನೆ ನಡೆದಿದ್ದು ಹೇಗೆ?

ಗೋಮಾಂಸ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ತಿಳಿದ ಗ್ರಾಮಸ್ಥರು ವಾಹನವನ್ನ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಈ ವೇಳೆ ವಾಹನದಲ್ಲಿ ಗೋಮಾಂಸ ಇರುವುದು ಕಂಡುಬಂದಿದೆ. ಇದರಿಂದ ಕುಪಿತಗೊಂದ ಗ್ರಾಮಸ್ಥರು ಚಾಲಕನನ್ನು ಹೊರಗೆಳೆದು ಥಳಿಸಿ, ಕೂಡಿಹಾಕಿದ್ದಾರೆ ಎನ್ನಲಾಗಿದೆ. ಬಳಿಕ ಗೋಮಂಸ ಸಮೇತ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.

ಘಟನೆಯ ಸ್ಥಳಕ್ಕೆ ಕಾಗವಾಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐನಾಪುರ ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದ್ದು, ಇಬ್ಬರು ಡಿಎಸ್‌ಪಿ, ನಾಲ್ಕು ಸಿಪಿಐ, ಎಂಟು ಪಿಎಸ್‌ಐ ಸೇರಿದಂತೆ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಂಡಿದ್ದಾರೆ.

Source link

Leave a Reply

Your email address will not be published. Required fields are marked *