Headlines

ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ರಾಜ್ಯದಲ್ಲಿ ಕೋಮುಗಲಭೆ ನಡೆದೇ ಇಲ್ಲ, ಕರ್ನಾಟಕ ಪೊಲೀಸ್ ದೇಶದಲ್ಲೇ ನಂ.1 : ಪರಂ | No Communal Riot In The Karnataka Since The Congress Government Came To Power Says Home Minister Parameshwara Rav

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಕೋಮು ಗಲಭೆಗಳಿಗೆ ಕಡಿವಾಣ, ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮ, ಪೊಲೀಸ್ ಸಿಬ್ಬಂದಿಗೆ ವಸತಿ ಸೌಕರ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದರು

 ಬೆಳಗಾವಿ (ಏ.18): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ನ್ಯಾಯ ವಿತರಣೆಯಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಪೊಲೀಸ್ ಕಟ್ಟಡಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ಕಾಪಾಡುತ್ತಿದೆ. ಇತರೆ ರಾಜ್ಯಗಳಿಂದ ಬಂಡವಾಳ ಹೂಡಿಕೆದಾರರು ಬರುತ್ತಿದ್ದು, ರಾಜ್ಯಕ್ಕೆ ಆದಾಯ ಮತ್ತು ಉದ್ಯೋಗವಕಾಶಗಳು ದೊರೆಯುತ್ತಿವೆ. ನಮ್ಮ ಸರ್ಕಾರ ಬಂದ ನಂತರ ಕೋಮು ಗಲಭೆಗಳಿಗೆ ಕಡಿವಾಣ ಹಾಕಿದ್ದು, ರಾಜ್ಯದಲ್ಲಿ ಕೋಮುಗಲಭೆ ನಡೆದಿಲ್ಲ. ನಡೆಯಲೂ ಬಿಡುವುದಿಲ್ಲ. ಯುವಕರಿಗೆ ಮಾದಕ ವಸ್ತುಗಳ ಹಂಚಿಕೆ ಹಾಗೂ ಮಾದಕ ವಸ್ತುಗಳ ಸೇವನೆ ಪ್ರಕರಣಗಳು ಕಂಡು ಬರುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಮಾದಕ ವಸ್ತುಗಳ ಮಾರಾಟಗಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕಾನೂನು ರಕ್ಷಣೆ ಮಾಡುವ ದೃಷ್ಟಿಯಿಂದ ಪೊಲೀಸ್‌ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದ ಪೊಲೀಸ್ ಇಲಾಖೆಗೆ ಸೌಕರ್ಯ ಒದಗಿಸಲು ಸರ್ಕಾರ ಸ್ಪಂದಿಸಿದ್ದು, ಪೊಲೀಸ್ ಸಿಬ್ಬಂದಿಗೆ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಪೊಲೀಸ್ ಸಿಬ್ಬಂದಿ ಜನಸೇವೆಗೆ ತಕ್ಷಣ ಸ್ಪಂದಿಸಬೇಕು ಎಂದು ಕರೆ ನೀಡಿದರು.

ಕಾಲೇಜುಗಳಲ್ಲಿ ಡ್ರಗ್ಸ್ ಜಾಗೃತಿ

ದುಶ್ಚಟಗಳಿಂದ ಯುವ ಸಮುದಾಯವನ್ನು ರಕ್ಷಿಸಲು ಕಾಲೇಜುಗಳಿಗೆ ಭೇಟಿ ನೀಡಿ ಮಾದಕ ವಸ್ತು ಸೇವನೆ ಕುರಿತು ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಂತ್ರಜ್ಞಾನದಿಂದ ಅಂಥ ಪ್ರಕರಣ ಪತ್ತೆಮಾಡಿ ವಂಚಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದರು.

ಪ್ರತಿಮನೆಗೆ ₹38 ಲಕ್ಷ ವೆಚ್ಚ:

ಶಾಂತಿ-ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸರ ಕುಟುಂಬಗಳಿಗೆ ಸುರಕ್ಷಿತ ಹಾಗೂ ಸುಸಜ್ಜಿತ ವಸತಿ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಬೆಳಗಾವಿ ಜಿಲ್ಲೆಯ ವಿವಿಧೆಡೆ ₹67.79 ಕೋಟಿ ವೆಚ್ಚದಲ್ಲಿ, ಶಹಾಪುರದಲ್ಲಿ ₹3.92 ಕೋಟಿ ವೆಚ್ಚದಲ್ಲಿ ವಸತಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಪ್ರತಿಮನೆಗೆ ₹38 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಕಳೆದ ವರ್ಷ ₹2000 ಕೋಟಿ ಹಾಗೂ ಈ ವರ್ಷ ₹350 ಕೋಟಿ ವೆಚ್ಚದಲ್ಲಿ ಪೊಲೀಸ್ ವಸತಿ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದು ಹೇಳಿದರು.

Source link

Leave a Reply

Your email address will not be published. Required fields are marked *