
ಟುಕ್ಡೆ ಟುಕ್ಡೆ ಗ್ಯಾಂಗ್‌ಗೆ ಜೈಲೇ ಗತಿ, ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ ಜಾಮೀನು ಅರ್ಜಿ ವಜಾ, ದೆಹಲಿ ಗಲಭೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್, ಉಮರ್ ಹಾಗೂ ಶಾರ್ಜಿಲ್‌ಗೆ ಬೇಲ್ ನಿರಾಕರಿಸಿದೆ.
ನವದೆಹಲಿ (ಜ.05) ದೆಹಲಿ ಗಲಭೆ ಪ್ರಕರಣದಲ್ಲಿ ಕಳೆದ ಐದು ವರ್ಷಗಳಿಂದ ಜೈಲಿನಲ್ಲಿರುವ ಆರೋಪಿಗಳಾದ ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಇಮಾಮ್‌ಗೆ ಮತ್ತೆ ಹಿನ್ನಡೆಯಾಗಿದೆ. ಈ ಇಬ್ಬರು ಆರೋಪಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಿಸ್ಕರಿಸಿದೆ. ಒಟ್ಟು 7 ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಐವರಿಗೆ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್ ಉಮರ್ ಖಾಲೀದ್ ಹಾಗೂ ಶಾರ್ಜಿಲ್ ಇಮಾಮ್‌ಗೆ ಜಾಮೀನು ನೀಡಲು ನಿರಾಕರಿಸಿದೆ. ಎನ್‌ಆರ್‌ಸಿ ಪ್ರತಿಭಟೆಯನ್ನು ದೆಹಲಿ ಗಲಭೆಯಾಗಿ ಪರಿವರ್ತಿಸುವಲ್ಲಿ ಉಮರ್ ಖಾಲೀದ್ ಹಾಗೂ ಶಾರ್ಜೀಲ್ ಯಶಸ್ವಿಯಾಗಿದ್ದರು. ಹೀಗಾಗಿ ಇಬ್ಬರು ಆರೋಪಿಗಳು ದೆಹಲಿ ಗಲಭೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಕಾರಣ ಜಾಮೀನು ನೀಡಲು ನಿರಾಕರಿಸಿದೆ.
ನ್ಯೂಯಾರ್ಕ್ ಮೇಯರ್ ಮಮ್ದಾನಿ ಬೆಂಬಲದಿಂದ ಈ ಬಾರಿ ಜಾಮೀನು ಅರ್ಜಿ ಕುತೂಹಲ
ಉಮರ್ ಖಾಲೀದ್ ಹಾಗೂ ಶಾರ್ಜಿಲ್ ಇಮಾಮ್ ಕಳೆದ ಐದು ವರ್ಷದಿಂದ ಜೈಲಿನಲ್ಲಿದ್ದಾರೆ. ಹಲವು ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು. ಆದರೆ ಈ ಬಾರಿ ಜಾಮೀನು ಅರ್ಜಿ ಭಾರಿ ಕುತೂಹಲ ಕೆರಳಿಸಿತ್ತು. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ನ್ಯೂಯಾರ್ಕ್ ಮೇಯರ್ ಆಗಿ ಅಧಿಕಾರವಹಿಸಿರುವ ಜೋಹರಾನ್ ಮಮ್ದಾನಿ, ಜೈಲಿನಲ್ಲಿರುವ ಉಮರ್ ಖಾಲಿದ್‌ಗೆ ಬೆಂಬಲ ಸೂಚಿಸಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ವಿರೋಧಿ ನಿಲುವ ಬಲಪಡಿಸಲು ಮಮ್ದಾನಿ ಪ್ರಯತ್ನಿಸಿದ್ದರು. ಆದರೆ ಇದ್ಯಾವ ಬೆಂಬಲವನ್ನು ಸುಪ್ರೀಂ ಕೋರ್ಟ್ ಪರಿಣಾಮ ಬೀರಲಿಲ್ಲ.