Headlines

ಜಿಯೋ ಹಾಟ್‌ಸ್ಟಾರ್ ಬಿಡಿ, ಈ ಚಾನೆಲ್‌ನಲ್ಲಿ ಭಾರತ-ಇಂಗ್ಲೆಂಡ್ ಟಿ20 ವಿಶ್ವಕಪ್ ಸೆಮಿಫೈನಲ್ ಮ್ಯಾಚ್ ಫ್ರೀ ಆಗಿ ನೋಡಿ! | India Vs England T20 World Cup 2026 Semi Final Free Live Telecast Details Match Time And Venue Kvn

ಜಿಯೋ ಹಾಟ್‌ಸ್ಟಾರ್ ಬಿಡಿ, ಈ ಚಾನೆಲ್‌ನಲ್ಲಿ ಭಾರತ-ಇಂಗ್ಲೆಂಡ್ ಟಿ20 ವಿಶ್ವಕಪ್ ಸೆಮಿಫೈನಲ್ ಮ್ಯಾಚ್ ಫ್ರೀ ಆಗಿ ನೋಡಿ! | India Vs England T20 World Cup 2026 Semi Final Free Live Telecast Details Match Time And Venue Kvn



ಜಿಯೋ ಹಾಟ್‌ಸ್ಟಾರ್ ಬಿಡಿ, ಈ ಚಾನೆಲ್‌ನಲ್ಲಿ ಭಾರತ-ಇಂಗ್ಲೆಂಡ್ ಟಿ20 ವಿಶ್ವಕಪ್ ಸೆಮಿಫೈನಲ್ ಮ್ಯಾಚ್ ಫ್ರೀ ಆಗಿ ನೋಡಿ! | India Vs England T20 World Cup 2026 Semi Final Free Live Telecast Details Match Time And Venue Kvn

2026ರ ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ತಂಡವು ಇಂಗ್ಲೆಂಡ್ ಅನ್ನು ಎದುರಿಸಲಿದೆ. ಮಾರ್ಚ್ 05 ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯವನ್ನು ಯಾವುದೇ ಸಬ್‌ಸ್ಕ್ರಿಪ್ಷನ್ ಇಲ್ಲದೆ ಡಿಡಿ ಸ್ಪೋರ್ಟ್ಸ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಟೀಂ ಇಂಡಿಯಾ ಸೆಮಿಫೈನಲ್‌ಗೆ ಅಧಿಕೃತವಾಗಿ ಎಂಟ್ರಿಕೊಟ್ಟಿದೆ. ಇದೀಗ ಮಾರ್ಚ್ 05ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಸೆಮಿಫೈನಲ್‌ನಲ್ಲಿ ಎರಡು ಬಾರಿಯ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಲು ಇನ್ನೆರಡೇ ಹೆಜ್ಜೆ ದೂರವಿದೆ. ಈಗಾಗಲೇ ಭಾರತ-ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ. ಇನ್ನು ಟೀಂ ಇಂಡಿಯಾ ಫ್ಯಾನ್ಸ್, ಮೈದಾನಕ್ಕೆ ಹೋಗಿ ಪಂದ್ಯ ವೀಕ್ಷಿಸಲು ಸಾಧ್ಯವಾಗದಿದ್ದವರು ಮನೆಯಲ್ಲೇ ಉಚಿತವಾಗಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಇದಕ್ಕಾಗಿ ಯಾವುದೇ ಸಬ್‌ಸ್ಕ್ರಿಪ್ಷನ್ ಅಗತ್ಯವಿಲ್ಲ ಎನ್ನುವ ವಿಚಾರ ಬಹುತೇಕ ಮಂದಿಗೆ ಗೊತ್ತಿಲ್ಲ.

ಭಾರತ-ಇಂಗ್ಲೆಂಡ್ ನಡುವಿನ ಮ್ಯಾಚ್ ಫ್ರೀ ಟೆಲಿಕಾಸ್ಟ್ ಎಲ್ಲಿ ವೀಕ್ಷಿಸಬಹುದು?

2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ನೇರಪ್ರಸಾರದ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಪಡೆದುಕೊಂಡಿದೆ. ಹೀಗಾಗಿ ಈ ಬಾರಿಯ ಚುಟುಕು ವಿಶ್ವಕಪ್‌ನ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿವೆ. ಆದರೆ ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಟಿ20 ವಿಶ್ವಕಪ್ ಮ್ಯಾಚ್ ನೋಡಲು ರೀಚಾರ್ಜ್ ಮಾಡಿಸಿಕೊಳ್ಳಬೇಕು. ಇನ್ನು ಓಟಿಟಿ ಫ್ಲಾಟ್‌ಫಾರಂನಲ್ಲಿ ಜಿಯೋ ಹಾಟ್‌ಸ್ಟಾರ್‌ನಲ್ಲಿ ಮ್ಯಾಚ್‌ನ ನೇರ ಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ. ಆದರೆ ಇದಕ್ಕೂ ರೀಚಾರ್ಜ್ ಮಾಡಿಸಿಕೊಳ್ಳಬೇಕು. ಇದೆಲ್ಲದರ ಹೊರತಾಗಿಯೂ ನೀವು ಉಚಿತವಾಗಿ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್ ಮ್ಯಾಚ್ ವೀಕ್ಷಿಸಬಹುದು. ಇದು ಡಿಡಿ ಸ್ಪೋರ್ಟ್ಸ್‌ನಲ್ಲಿ ಉಚಿತವಾಗಿ ನೇರಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ. ಇದಕ್ಕಾಗಿ ನೀವು ಡಿಡಿ ಫ್ರೀ ಡಿಶ್ ಹೊಂದಿರಬೇಕಾಗುತ್ತದೆ.

ಎಷ್ಟು ಗಂಟೆಗೆ ಸೆಮಿಫೈನಲ್ ಮ್ಯಾಚ್ ಆರಂಭ?

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐಸಿಸಿ ಟಿ20 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯವು ಮಾರ್ಚ್ 05ರಂದು ಭಾರತೀಯ ಕಾಲಮಾನ ಸಂಜೆ 6.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇದಾದ ಬಳಿಕ ಸಂಜೆ ಏಳು ಗಂಟೆಗೆ ಪಂದ್ಯವು ಅಧಿಕೃತವಾಗಿ ಆರಂಭವಾಗಲಿದೆ. ಎರಡು ತಂಡಗಳು ಸತತ ಮೂರನೇ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದು, ಹೈವೋಲ್ಟೇಜ್‌ ಮ್ಯಾಚ್‌ಗೆ ಅಭಿಮಾನಿಗಳು ಸಾಕ್ಷಿಯಾಗಲು ತುದಿಗಾಲಿನಲ್ಲಿ ನಿಂತಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಆರನೇ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಭಾರತ:

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಟೀಂ ಇಂಡಿಯಾ ಆರನೇ ಬಾರಿಗೆ ಸೆಮಿಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎಂ ಎಸ್ ಧೋನಿ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2014ರಲ್ಲಿ ಭಾರತ ಮತ್ತೊಮ್ಮೆ ಫೈನಲ್ ಪ್ರವೇಶಿಸಿತ್ತಾದರೂ, ಲಂಕಾ ಎದುರು ಮುಗ್ಗರಿಸಿತ್ತು. ಇನ್ನು 2016 ಹಾಗೂ 2022ರಲ್ಲಿ ಭಾರತ ತಂಡದ ಅಭಿಯಾನ ಸೆಮಿಫೈನಲ್‌ನಲ್ಲೇ ಕೊನೆಗೊಂಡಿತ್ತು. ಇನ್ನು 2024ರಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಇದೀಗ ಮತ್ತೊಮ್ಮೆ ಸೆಮೀಸ್ ಹಂತ ಪ್ರವೇಶಿಸಿದೆ.



Source link

Leave a Reply

Your email address will not be published. Required fields are marked *