
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯವು ಶೇ.86.48ರಷ್ಟು ದಾಖಲೆಯ ಫಲಿತಾಂಶವನ್ನು ಕಂಡಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಮತ್ತು ಅಂಕಪಟ್ಟಿಯನ್ನು ವೆಬ್‌ಸೈಟ್, ಮೊಬೈಲ್ ಆ್ಯಪ್ ಹಾಗೂ ಡಿಜಿಲಾಕರ್ ಮೂಲಕ ಪಡೆಯಬಹುದು.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ 3 ಗಂಟೆಗೆ ಪ್ರಕಟಣೆಯಾಗಿದ್ದು ರಾಜ್ಯಕ್ಕೆ ದಾಖಲೆಯ ಶೇ.86.48 ರಿಸಲ್ಟ್ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 13.03% ಏರಿಕೆ ಕಂಡಿದೆ. ಈ ಬಗ್ಗೆ ಸಂಜೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ ಪತ್ರಿಕಾಗೋಷ್ಠಿ ನಡೆಸಿ ಸಂತಸ ವ್ಯಕ್ತಪಡಿಸಿದ್ದಾರೆ. ಇದು ಐತಿಹಾಸಿಕ ಸಾಧನೆ ಖುಷಿ ವ್ಯಕ್ತಪಡಿಸಿದ್ದು, ಈ ಬಾರಿ ಡಿಜಿಟಲ್ ಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಅದರಂತೆ ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್, ಮೊಬೈಲ್ ಆ್ಯಪ್‌ನಲ್ಲಿ ಫಲಿತಾಂಶ ಪ್ರಕಟವಾಗಿತ್ತು.
ಉಡುಪಿ ಫಸ್ಟ್, ದಕ್ಷಿಣ ಕನ್ನಡ ಸೆಕೆಂಡ್
ಈ ಬಾರಿ ರಾಜ್ಯದಲ್ಲಿ ಉಡುಪಿ ಮೊದಲ ಸ್ಥಾನ 96.39%, ಎರಡನೇ ಸ್ಥಾನ ದಕ್ಷಿಣ ಕನ್ನಡ 96.35% ಮತ್ತು ಯಾದಗಿರಿ ಕೊನೆಯ ಸ್ಥಾನ – 71.21% ಫಲಿತಾಂಶ ಬಂದಿದೆ.
ಬಾಲಕಿಯರೇ ಮೇಲುಗೈ
ಒಟ್ಟು 6,48,853 ಪರೀಕ್ಷೆಗೆ ನೋಂದಾವಣೆ ಮಾಡಿಕೊಂಡಿದ್ದರು. 16,653 ಮಂದಿ ಪರೀಕ್ಷೆಗೆ ಹಾಜರಾಗಿಲ್ಲ. ಎಂದಿನಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದು, ಶೇಕಾಡ 88.70% ಬಾಲಕಿಯರು ಉತ್ತೀರ್ಣರಾಗಿದ್ದು, ಶೇಕಾಡ 83.65% ಬಾಲಕರು ಉತ್ತೀರ್ಣರಾಗಿದ್ದಾರೆ. ನಗರ ಭಾಗದಲ್ಲಿ ಶೇಕಾಡ 85% ವಿಧ್ಯಾರ್ಥಿಗಳು ಉತ್ತೀರ್ಣರಾದರೆ ಗ್ರಾಮೀಣ ಪ್ರದೇಶದಲ್ಲಿ ಶೇಕಾಡ 87.62% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in ವೆಬ್‌ಸೈಟ್ ಮತ್ತು ‘ಕರ್ನಾಟಕ ಒನ್’ ಮೊಬೈಲ್ ಆ್ಯಪ್ , ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಪ್/ಎಸ್‌ಎಂಎಸ್ ಮೂಲಕ ಅಷ್ಟೇ ಅಲ್ಲ, ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆಯ ಸಮಯದಲ್ಲೇ ಅವರ ಅಂಕಪಟ್ಟಿಗಳನ್ನೂ ಡಿಜಿಲಾಕರ್ ನಲ್ಲಿ ಅಪ್‌ಲೋಡ್ ಮಾಡಲಾಗಿದೆ. https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ.