Headlines

Karnataka Budget: 15,000 ಶಿಕ್ಷಕರ ನೇಮಕ, ಪಿಯು ಮಕ್ಕಳಿಗೂ ಉಚಿತ ಪಠ್ಯಪುಸ್ತಕ; 800 ಪಬ್ಲಿಕ್ ಶಾಲೆ ಸ್ಥಾಪನೆ! | Karnataka Budget 2026 School Education Highlights Teacher Recruitment 800 Kps Schools Sat

Karnataka Budget: 15,000 ಶಿಕ್ಷಕರ ನೇಮಕ, ಪಿಯು ಮಕ್ಕಳಿಗೂ ಉಚಿತ ಪಠ್ಯಪುಸ್ತಕ; 800 ಪಬ್ಲಿಕ್ ಶಾಲೆ ಸ್ಥಾಪನೆ! | Karnataka Budget 2026 School Education Highlights Teacher Recruitment 800 Kps Schools Sat



Karnataka Budget: 15,000 ಶಿಕ್ಷಕರ ನೇಮಕ, ಪಿಯು ಮಕ್ಕಳಿಗೂ ಉಚಿತ ಪಠ್ಯಪುಸ್ತಕ; 800 ಪಬ್ಲಿಕ್ ಶಾಲೆ ಸ್ಥಾಪನೆ! | Karnataka Budget 2026 School Education Highlights Teacher Recruitment 800 Kps Schools Sat

ಮುಖ್ಯಮಂತ್ರಿ ಸಿದ್ದರಾಮಯ್ಯನವರು 2026-27ರೊಳಗೆ 15,000 ಶಿಕ್ಷಕರ ನೇಮಕಾತಿ ಮತ್ತು 3,900 ಕೋಟಿ ರೂ. ವೆಚ್ಚದಲ್ಲಿ 800 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣವನ್ನು ಘೋಷಿಸಿದ್ದಾರೆ.  ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಡಿಜಿಟಲ್ ಕಲಿಕೆಗಾಗಿ AI ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತದೆ.

ಬೆಂಗಳೂರು (ಮಾ.06): 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮುಂದಿನ 3 ವರ್ಷಗಳಲ್ಲಿ 3,900 ಕೋಟಿ ರೂ. ವೆಚ್ಚದಲ್ಲಿ 800 ಪಬ್ಲಿಕ್ ಶಾಲೆಗಳ ನಿರ್ಮಾಣ. ಅಂಗನವಾಡಿ ಮಕ್ಕಳಿಗೆ ಚಟುವಟಿಕೆ ಪುಸ್ತಕ, 1-10ನೇ ತರಗತಿ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಮೌಲ್ಯ ಶಿಕ್ಷಣ ಪುಸ್ತಕ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ. ಶಾಲೆಗಳ ಮಾನ್ಯತೆ ಪಡೆಯುವ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣಗೊಳಿಸಲಾಗಿದೆ. 2025-26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಿಸಲಾಗಿದೆ.

800 ಪಬ್ಲಿಕ್ ಶಾಲೆಗಳ ನಿರ್ಮಾಣ

‘ಉತ್ತಮ ಕಲಿಕೆ ಉಜ್ವಲ ಭವಿಷ್ಯ’ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ 200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡಲಾಗುವುದು.

ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುವುದು.

ಪಿಯುಸಿ ಮಕ್ಕಳಿಗೂ ಉಚಿತ ಪಠ್ಯಪುಸ್ತಕ

ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. 2026-27ನೇ ಸಾಲಿನಿಂದ ಯೋಜನೆಯಡಿ ವಿದ್ಯಾವಿಕಾಸ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು.

ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾಯಿಸಲಾಗುವುದು.

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. IIT ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು.

ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಆರೋಗ್ಯ ಸಲಹೆಗಾರರನ್ನು ಮಾನಸಿಕ ನೇಮಿಸಲಾಗುವುದು. ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು.



Source link

Leave a Reply

Your email address will not be published. Required fields are marked *