ಮಹಿಳಾ ವಿಶ್ವಕಪ್ ಸೆಮಿಫೈನಲ್‌: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ; ಭಾರತ ತಂಡದಲ್ಲಿ 3 ಮೇಜರ್ ಚೇಂಜ್ | Womens World Cup Semi Final Australia Opt To Bat First India Make 3 Changes Kvn

2025ರ ಮಹಿಳಾ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಗಾಯಾಳುವಿನ ಬದಲಾಗಿ ಶಫಾಲಿ ವರ್ಮಾ ಸೇರಿದಂತೆ ಭಾರತ ತಂಡದಲ್ಲಿ 3 ಬದಲಾವಣೆಗಳನ್ನು ಮಾಡಲಾಗಿದ್ದು, ಗೆದ್ದ ತಂಡ ಫೈನಲ್ ಪ್ರವೇಶಿಸಲಿದೆ.

ನವಿ ಮುಂಬೈ: 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿಂದು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕಿ ಅಲಿಸಾ ಹೀಲಿ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯ ವಹಿಸಿದೆ.

ಭಾರತ ತಂಡದಲ್ಲಿ ಮೇಜರ್ ಚೇಂಜ್:

ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಆರಂಭಿಕ ಬ್ಯಾಟರ್ ಪ್ರತಿಕಾ ರಾವಲ್, ಬಾಂಗ್ಲಾದೇಶ ಎದುರಿನ ಪಂದ್ಯದ ವೇಳೆ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ಮತ್ತೋರ್ವ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ತಂಡ ಕೂಡಿಕೊಂಡಿದ್ದಾರೆ. ಇದಷ್ಟೇ ಅಲ್ಲದೇ ರಿಚಾ ಘೋಷ್ ಹಾಗೂ ಕ್ರಾಂತಿ ಗೌಡ್ ಕೂಡಾ ಹಾಗೂ ತಂಡ ಕೂಡಿಕೊಂಡಿದ್ದಾರೆ. ಹೀಗಾಗಿ ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ

ಟೂರ್ನಿಯಲ್ಲಿ ಅಜೇಯ ನಾಗಾಲೋಟ ಮುಂದುವರೆಸಿರುವ ಕಾಂಗರೂ ಪಡೆ

ಆಸ್ಟ್ರೆಲಿಯಾ ತಂಡವು ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಅಜೇಯವಾಗಿಯೇ ಫೈನಲ್ ಪ್ರವೇಶಿಸಿದೆ. ಆಡಿದ 7 ಪಂದ್ಯಗಳ ಪೈಕಿ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. 13 ಅಂಕಗಳೊಂದಿಗೆ ಅಗ್ರಸ್ಥಾನಿಯಾಗಿ ಕಾಂಗರೂ ಪಡೆ ಸೆಮೀಸ್ ಪ್ರವೇಶಿಸಿದೆ.

ಇನ್ನೊಂದೆಡೆ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ 3 ಗೆಲುವು ಹಾಗೂ ಮೂರು ಸೋಲು ಹಾಗೂ ಒಂದು ರದ್ದಾದ ಪಂದ್ಯ ಸೇರಿದಂತೆ 7 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಿಯಾಗಿ ಸೆಮೀಸ್ ಪ್ರವೇಶಿಸಿದೆ. ಇಂದು ಗೆಲ್ಲುವ ತಂಡವು ನವೆಂಬರ್ 02ರಂದು ನಡೆಯಲಿರುವ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಎದುರು ಪ್ರಶಸ್ತಿಗಾಗಿ ಕಾದಾಡಲಿದೆ.

Source link

Leave a Reply

Your email address will not be published. Required fields are marked *