Chakravarthy sulibele Father Devadas Subraya Shetty Passes Away ಚಕ್ರವರ್ತಿ ಸೂಲಿಬೆಲೆ ಪಿತೃವಿಯೋಗ: ಗಣ್ಯರಿಂದ ಸಂತಾಪ | Chakravarthy Sulibele Father Devadas Subraya Shetty Passes Away Gow

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವದಾಸ್ ಸುಬ್ರಾಯ ಶೇಟ್ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರ ಮறைವಿಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಖ್ಯಾತ ವಾಗ್ಮಿ, ಚಿಂತಕ, ಅಂಕಣಕಾರ, ಬರಹಹಾರ ಮತ್ತು ಸಾಮಾಜಿಕ ಕಾರ್ಯಕರ್ತ ಜೊತೆಗೆ ಯುವ ಬ್ರಿಗೇಡ್ ಸಂಘಟನೆಯ ಸಂಸ್ಥಾಪಕರಾದ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪಿತೃವಿಯೋಗವಾಗಿದೆ. ತಂದೆ ದೇವದಾಸ್ ಸುಬ್ರಾಯ ಶೇಟ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವೀಟ್‌ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ದೇವದಾಸ್ ಸುಬ್ರಾಯ ಶೇಟ್ ಅವರು ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಯನ್ನು ಸಲ್ಲಿಸಿದ್ದಾರೆ

 ಆತ್ಮೀಯರಾದ ಶ್ರೀ ಚಕ್ರವರ್ತಿ ಸೂಲಿಬೆಲೆ ಅವರ ಪೂಜ್ಯ ತಂದೆಯವರಾದ ಶ್ರೀ ದೇವಿದಾಸ್ ಸುಬ್ರಾಯ ಶೇಟ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . ಓಂ ಶಾಂತಿ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಂತಾಪ ರಾಷ್ಟ್ರವಾದಿ ಚಿಂತಕ ಶ್ರೀ ಚಕ್ರವರ್ತಿ ಸೂಲಿಬೆಲೆ ಅವರ ತಂದೆಯವರಾದ ಶ್ರೀ ದೇವಿದಾಸ್ ಸುಬ್ರಾಯ ಶೇಟ್ ಅವರ ನಿಧನಕ್ಕೆ ಸಂತಾಪ ಕೋರುವೆ. ಮಾನ್ಯ ಚಕ್ರವರ್ತಿ ಸೂಲಿಬೆಲೆ ಅವರ ಕುಟುಂಬ ವರ್ಗದವರಿಗೆ ಈ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್, ಮಾಜಿ ಸಂಸದ ರಾಷ್ಟ್ರ, ಧರ್ಮದ ಸೇವೆಗಾಗಿಯೇ ಜೀವನವನ್ನು ಮುಡಿಪಾಗಿಟ್ಟಿರುವ ಭಾರತಾಂಬೆಯ ಹೆಮ್ಮೆಯ ಕುವರನನ್ನು ಸಮಾಜಕ್ಕೆ ನೀಡಿದ, ಆತ್ಮೀಯರಾದ ಶ್ರೀ ಚಕ್ರವರ್ತಿ ಸೂಲಿಬೆಲೆಯವರ ತೀರ್ಥರೂಪರಾದ ಶ್ರೀ ದೇವಿದಾಸ್ ಶೇಟ್ ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಕುಟುಂಬಕ್ಕೆ, ಬಂಧು ಮಿತ್ರರಿಗೆ, ಅಪಾರ ಸಂಖ್ಯೆಯ ಶಿಷ್ಯವರ್ಗಕ್ಕೆ ಈ ದು:ಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Source link

Leave a Reply

Your email address will not be published. Required fields are marked *