Headlines

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ಪಶುವೈದ್ಯೆ ಬಲಿ | Tragedy At Tyavarekoppa Zoo In Shivamogga Veterinarian Killed In Hippopotamus Attack

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ಪಶುವೈದ್ಯೆ ಬಲಿ | Tragedy At Tyavarekoppa Zoo In Shivamogga Veterinarian Killed In Hippopotamus Attack



ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ಪಶುವೈದ್ಯೆ ಬಲಿ | Tragedy At Tyavarekoppa Zoo In Shivamogga Veterinarian Killed In Hippopotamus Attack

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ, ನೀರಾನೆಗೆ ಚಿಕಿತ್ಸೆ ನೀಡಲು ತೆರಳಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಮೇಲೆ ಪ್ರಾಣಿ ದಾಳಿ ಮಾಡಿದ್ದು, ಈ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದೆ.

ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವನ್ಯಜೀವಿಯೊಂದಕ್ಕೆ ಚಿಕಿತ್ಸೆ ನೀಡಲು ಹೋಗಿದ್ದ ಪಶುವೈದ್ಯೆಯೊಬ್ಬರ ಮೇಲೆ ಪ್ರಾಣಿ ದಾಳಿ ಮಾಡಿದ್ದು, ಈ ದುರಂತದಲ್ಲಿ ಗಂಭೀರ ಗಾಯಗೊಂಡ ಅವರು ಪ್ರಾಣ ಕಳೆದುಕೊಂಡಿದ್ದಾರೆ. ಹಿಪೋಪೋಟೋಮಸ್ ಅಥವಾ ನೀರಾನೆ ದಾಳಿಗೆ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಪ್ರಾಣ ಕಳೆದುಕೊಂಡಿದ್ದಾರೆ. ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಈ ದುರಂತ ನಡೆದಿದೆ.

ಕರ್ತವ್ಯದ ವೇಳೆ ಮೃತರಾದ ಪಶುವೈದ್ಯೆ ಡಾ ಸಮೀಕ್ಷಾ ರೆಡ್ಡಿ ಇತ್ತೀಚೆಗಷ್ಟೇ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದರು. ನಿನ್ನೆ ರಾತ್ರಿ 11.30ರ ಸಮಯದಲ್ಲಿ ವನ್ಯಜೀವಿ ನೀರಾನೆಗೆ ಚಿಕಿತ್ಸೆ ನೀಡಲು ತೆರಳಿದ್ದರು. ಈ ವೇಳೆ ನೀರಾನೆ, ವೈದ್ಯೆ ಸಮೀಕ್ಷಾ ಮೇಲೆ ಹಠಾತ್ ದಾಳಿ ಮಾಡಿದೆ. ಇದರಿಂದ ಗಂಭೀರ ಗಾಯಗೊಂಡ ವೈದ್ಯೆ ಸಮೀಕ್ಷಾ ಅವರನ್ನು ಕೂಡಲೇ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 6.30ರ ಸುಮಾರಿನಲ್ಲಿ ಅವರು ಸಾವನ್ನಪ್ಪಿದ್ದಾರೆ.

ಘಟನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದು, ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.

ಇದೊಂದು ದುರದೃಷ್ಟಕರ ಘಟನೆ ಈ ದುಃಖದ ಸಂದರ್ಭದಲ್ಲಿ ಮೃತ ವೈದ್ಯರ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ. ತಿಯೊಂದು ಜೀವವೂ ಅಮೂಲ್ಯ. ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಸಚಿವ ಖಂಡ್ರೆ ಹೇಳಿದ್ದಾರೆ.

ಮೃತ ಯುವ ವೈದ್ಯೆಯ ಕುಟುಂಬದವರಿಗೆ ನಿಯಮಾನುಸಾರ ಕೂಡಲೇ ಪರಿಹಾರ ನೀಡಲು ಸಚಿವರು ಸೂಚಿಸಿದ್ದು, ರಾಜ್ಯದ ಎಲ್ಲಾ ಮೃಗಾಲಯಗಳ ಪಶುವೈದ್ಯರು ಯಾವುದೇ ವನ್ಯಜೀವಿಗೆ ಚಿಕಿತ್ಸೆ ನೀಡುವಾಗ ಎಸ್.ಓ.ಪಿ. ಪಾಲಿಸಬೇಕು ಎಂಬ ಸ್ಪಷ್ಟ ಸೂಚನೆ ಇದೆ. ಈ ದುರಂತದ ಬಗ್ಗೆ ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ಒಳಗೊಂಡ ತಂಡದಿಂದ ತನಿಖೆ ಮಾಡಲಾಗುವುದು ಈ ತಂಡಕ್ಕೆ 7 ದಿನಗಳ ಒಳಗಾಗಿ ವರದಿ ನೀಡುವಂತೆಯೂ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮೃಗಾಲಯ ಪ್ರಾಧಿಕಾರದ ನಿರ್ದೇಶಕ ಅಮರಾಕ್ಷರ ಹೇಳಿಕೆ ನೀಡಿದ್ದು, ಡಾ. ಸಮೀಕ್ಷಾ ರೆಡ್ಡಿ ಫೆಬ್ರವರಿಯಲ್ಲಿ ಹುದ್ದೆಗೆ ಸೇರಿದ್ದರು. ಅವರು ತ್ಯಾವರೆಕೊಪ್ಪ ಮೃಗಾಲಯಕ್ಕೆ ಫಾಲೋ ಅಪ್ ಟ್ರೀಟ್ಮೆಂಟ್‌ಗೆ ಹೋಗಿದ್ದರು. ಎರಡು ಮೂರು ದಿನಗಳಲ್ಲಿ ಮರಿ ಹಾಕಲಿರುವ ನೀರಾನೆಯ ತಪಾಸಣೆ ಮಾಡಲು ತೆರಳಿದ್ದರು. ಆದರೆ ನೀರಾನೆ ಇದಕ್ಕಿದ್ದಂತೆ ಸಮೀಕ್ಷಾ ರೆಡ್ಡಿ ಮೇಲೆ ದಾಳಿ ನಡೆಸಿದೆ. ತಕ್ಷಣವೇ ಸಮೀಕ್ಷಾ ಅವರನ್ನುಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದೆವು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಮೀಕ್ಷಾ ರೆಡ್ಡಿ ಸಾವನ್ನಪ್ಪಿದ್ದಾರೆ ಎಂದು ಶಿವಮೊಗ್ಗ ಮೃಗಾಲಯ ಪ್ರಾಧಿಕಾರದ ನಿರ್ದೇಶಕ ಅಮರಾಕ್ಷರ ಮಾಹಿತಿ ನೀಡಿದ್ದಾರೆ.



Source link

Leave a Reply

Your email address will not be published. Required fields are marked *