Headlines

ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕ ಪ್ರಯೋಗಶಾಲೆ: ಆರ್‌.ಅಶೋಕ್

ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕ ಪ್ರಯೋಗಶಾಲೆ: ಆರ್‌.ಅಶೋಕ್

ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕ ಪ್ರಯೋಗಶಾಲೆ: ಆರ್‌.ಅಶೋಕ್

ಬೆಂಗಳೂರು (ಸೆ.22): ಕಾಂಗ್ರೆಸ್ ಹೈಕಮಾಂಡ್‌ ಕರ್ನಾಟಕವನ್ನು ಪ್ರಯೋಗಶಾಲೆ ಮಾಡಿಕೊಂಡಿದ್ದು, ಅದರ ಹೆಡ್‌ಮಾಸ್ಟರ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಆಪಾದಿಸಿದ್ದಾರೆ. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಈ ಪ್ರಯೋಗಶಾಲೆಯಲ್ಲಿ ಗಣತಿ ಮೂಲಕ ಹಿಂದು ಧರ್ಮವನ್ನು ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ಹಿಂದುಗಳನ್ನು ಒಡೆಯುತ್ತಿದ್ದಾರೆ ಎಂದು ಹರಿಹಾಯ್ದರು.

ದಸರಾದಲ್ಲಿ ಅನ್ಯ ಧರ್ಮೀಯರಿಗೆ ಅವಕಾಶ, ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಹೀಗೆ ಅನೇಕ ಕೆಲಸಗಳನ್ನು ಮಾಡಲಾಗುತ್ತಿದೆ. ಈ ಹಿಂದೆ ಮಾಡಿದ ಸಮೀಕ್ಷೆಯಲ್ಲಿ 150 ಕೋಟಿ ರು. ನುಂಗಲಾಗಿದೆ. ಈಗ ಮತ್ತೆ ಕೋಟ್ಯಂತರ ರುಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ದೂರಿದರು. ಕಾಂಗ್ರೆಸ್‌ ಸರ್ಕಾರ ಜಾತಿ ಸಮೀಕ್ಷೆ ಹೆಸರಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ. ಎಲ್ಲ ಜಾತಿಗಳ ಜನರು ಮತಾಂತರವನ್ನು ವಿರೋಧಿಸಿದ್ದಾರೆ. ಕುರುಬ, ಬ್ರಾಹ್ಮಣ, ವಿಶ್ವಕರ್ಮ ಹೀಗೆ ಎಲ್ಲ ಜಾತಿಗಳ ಮುಂದೆ ಕ್ರಿಶ್ಚಿಯನ್‌ ಎಂಬ ಹೆಸರು ತರಲಾಗಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಕ್ರೈಸ್ತರಾಗಿದ್ದು, ಅವರನ್ನು ಮೆಚ್ಚಿಸಲು ಈ ರೀತಿ ಮಾಡಲಾಗಿದೆ ಎಂದರು.

ನಾಟಕವಾಡುವುದು ಬೇಡ

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಶೋಕ್‌, ಇದನ್ನು ವಿರೋಧ ಮಾಡುತ್ತಿರುವ ಸಚಿವರು ರಾಜೀನಾಮೆ ಕೊಟ್ಟು ಬರಲಿ. ಕೇವಲ ಹೇಳಿಕೆ ಕೊಟ್ಟು ನಾಟಕವಾಡುವುದು ಬೇಡ. ಹೀಗೆ ಮಾಡಿದರೆ ಜಾತಿ ಸಮುದಾಯದವರು ಸಚಿವರನ್ನು ಕ್ಷಮಿಸುವುದಿಲ್ಲ. ಮತಾಂತರವನ್ನು ತಡೆಯುವುದು ಸರ್ಕಾರದ ಕೆಲಸ. ಆದರೆ ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪ್ರಾಯೋಜಿತವಾಗಿ ಈ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಎಲ್ಲರನ್ನೂ ಸೋನಿಯಾ ಗಾಂಧಿ ಸಮುದಾಯಕ್ಕೆ ಸೇರಿಸುತ್ತಿದ್ದಾರೆ. ನೂರು ಸಿದ್ದರಾಮಯ್ಯ ಬಂದರೂ ಹಿಂದೂ ಧರ್ಮವನ್ನು ಮಲಿನ ಮಾಡಲು ಸಾಧ್ಯವಿಲ್ಲ ಎಂದು ಗುಡುಗಿದರು.

Source link

Leave a Reply

Your email address will not be published. Required fields are marked *