Headlines

Rain Alert ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ, ಆರೇಂಜ್ ಅಲರ್ಟ್ | Md Issues Alert For Karnataka Rain And Gusty Winds Forecast For Bengaluru And Districts

Rain Alert ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ, ಆರೇಂಜ್ ಅಲರ್ಟ್ | Md Issues Alert For Karnataka Rain And Gusty Winds Forecast For Bengaluru And Districts



Rain Alert ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ, ಆರೇಂಜ್ ಅಲರ್ಟ್ | Md Issues Alert For Karnataka Rain And Gusty Winds Forecast For Bengaluru And Districts

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಆರೇಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದೆ. ಇದರ ನಡುವೆ ಮಳೆ ಅಲರ್ಟ್ ಕೂಡ ನೀಡಲಾಗಿದ್ದು, ರೈತರು ಮತ್ತೆ ಆತಂಕಗೊಂಡಿದ್ದಾರೆ. 

ಬೆಂಗಳೂರು (ಮಾ.19) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು ರೈತರ ಆತಂಕ ಹೆಚ್ಚಿಸಿದೆ. ಇದೀಗ ಹವಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೂಡು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಯುಗಾದಿ ಹಬ್ಬದ ತಯಾರಿ, ಖರೀದಿ ನಡುವೆ ನಿನ್ನೆ (ಮಾ.18) ಸಂಜೆ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಇದೀಗ ವ್ಯಾಪಾರಕ್ಕೂ ಸಮಸ್ಯೆಯಾಗಿತ್ತು. ಇಂದು ಯುಗಾದಿ ಹಬ್ಬದ ಸಂಭ್ರಕ್ಕೆ ಮಳೆಯಾರ ತಂಪೆರೆಯಲಿದ್ದಾರೆ. ಆದರೆ ಕರ್ನಾಟಕದ 9 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಇಂದು (ಮಾ.19) ಗುಡುಗು ಸಹಿತ ಮಳಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚಿಸಿದೆ. ಬಂಗಾಳ ಕೊಲ್ಲಿಯಲ್ಲಿ ಆಗಿರುವ ವಾಯುಭಾರ ಕುಸಿತದಿಂದ ಇಂದು ಗುಡುಗು ಸಹಿತ ಮಳೆ ಸಂಭವ ಹೆಚ್ಚಿದೆ ಎಂದಿದೆ. ಯುಗಾದಿ ಹಬ್ಬದ ಪ್ರಯುಕ್ತ ಇಂದು ರಜಾ ದಿನವಾಗಿರುವ ಕಾರಣ ಬೆಂಗಳೂರಿಗರ ಸಂಜೆಯ ಸುತ್ತಾಟ, ಶಾಪಿಂಗ್, ಆಹಾರ ಖಾದ್ಯಗಳನ್ನು ಸವಿಯುವ ಪ್ಲಾನ್‌ಗೆ ಮಳೆರಾಯ ಅಡ್ಡಿಯಾಗುವ ಸಾಧ್ಯತೆ ಇದೆ.

9 ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ

ಕರ್ನಾಟಕದ ಹಲವು ಜಿಲ್ಲೆಗಳು ಈಗಾಗಲೇ ಆಲಿಕಲ್ಲು ಮಳೆಯಿಂದ ತತ್ತರಿಸಿದೆ. ಧಾರವಾಡ, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಸುರಿದಿದ್ದು, ರಸ್ತೆಗಳು, ಜಮೀನುಗಳು ಆಲಿಕಲ್ಲಿನಿಂದ ತುಂಬಿ ಹೋಗಿದೆ. ಇದೀಗ ಇಂದು ಮತ್ತೆ ನಾಳೆ 9 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಂಭವ ಹೆಚ್ಚಿದ ಎಂದಿದೆ. ದಾವಣಗೆರೆ, ಯಾದಗಿರಿ, ಬೀದರ್, ಕಲಬುರಗಿ, ಬಳ್ಳಾರಿ, ವಿಜಯಪುರ, ರಾಯಚೂರು, ಶಿವಮೊಗ್ಗ, ವಿಜಯನಗರ ಸೇರಿದಂತೆ 9 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ 9 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ.

ಮೈಸೂರು, ರಾಮನಗರ, ಕೊಡಗು, ಚಿಕ್ಕಮಗಳೂರು, ಕೋಲಾರ ಜಿಲ್ಲೆಗಳಲ್ಲಿ ಉತ್ತಮ ಮಲೆಯಾಗಲಿದೆ ಎಂದು ಸೂಚನೆ ನೀಡಲಾಗಿದ್ದರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಮಾನ ಇಲಾಖೆ ಎಚ್ಚರಿಕೆ ನೀಡಿದೆ.



Source link

Leave a Reply

Your email address will not be published. Required fields are marked *