
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿಯಲ್ಲಿ ಪತನಗೊಂಡಿದೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ವೇಳೆ ಲ್ಯಾಂಡಿಂಗ್ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.
ಮುಂಬೈ (ಜ.28): ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಆರು ಪ್ರಯಾಣಿಕರು ಸಾವು ಕಂಡಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ. ಅಜಿತ್ ಪರವಾರ್ ಸೇರಿದಂತೆ 6 ಸಿಬ್ಬಂದಿಗಳನ್ನು ವಿಮಾನ ಹೊತ್ತೊಯ್ಯುತ್ತಿತ್ತುಎಂದು ತಿಳಿಸಲಾಗಿದೆ. ಮುಂಬೈನಿಂದ ಬಾರಾಮತಿಗೆ ವಿಮಾನ ತೆರಳುತ್ತಿದ್ದ. ಏರ್‌ಕ್ರಾಫ್ಟ್ ಲ್ಯಾಂಡಿಂಗ್ ಆಗುವ ವೇಳೆ ಬಾರಾಮತಿಯ ಹೊಲದಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ಡಿಜಿಸಿಎ ತಿಳಿಸಿದೆ.