Asia Cup 2025 Final | India vs Pakistan ಏಷ್ಯಾಕಪ್ ಫೈನಲ್: ಪಾಕ್ ವಿರುದ್ಧ ಭಾರತದ ಹೈವೋಲ್ಟೇಜ್ ಮ್ಯಾಚ್! | Asia Cup 2025 Final India Vs Pakistan High Voltage Clash Hardik Pandya Doubtful

Asia Cup 2025 Final | India vs Pakistan ಏಷ್ಯಾಕಪ್ ಫೈನಲ್: ಪಾಕ್ ವಿರುದ್ಧ ಭಾರತದ ಹೈವೋಲ್ಟೇಜ್ ಮ್ಯಾಚ್! | Asia Cup 2025 Final India Vs Pakistan High Voltage Clash Hardik Pandya Doubtful



Asia Cup 2025 Final | India vs Pakistan ಏಷ್ಯಾಕಪ್ ಫೈನಲ್: ಪಾಕ್ ವಿರುದ್ಧ ಭಾರತದ ಹೈವೋಲ್ಟೇಜ್ ಮ್ಯಾಚ್! | Asia Cup 2025 Final India Vs Pakistan High Voltage Clash Hardik Pandya Doubtful

ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ಬದ್ಧವೈರಿ ಪಾಕಿಸ್ತಾನವನ್ನು ಎದುರಿಸಲಿದ್ದು, ಟೂರ್ನಿಯಲ್ಲಿ ಅಜೇಯವಾಗಿ ಉಳಿದು ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಹಾರ್ದಿಕ್ ಪಾಂಡ್ಯರ ಅಲಭ್ಯತೆಯ ಆತಂಕ ಹಾಗೂ ಕಳಪೆ ಫೀಲ್ಡಿಂಗ್‌ನಂತಹ ಸಮಸ್ಯೆ ಭಾರತ ಕಾಡುವ ಸಾಧ್ಯತೆ

ದುಬೈ: ಕ್ರೀಡೆಯಲ್ಲಿ ಗೆಲ್ಲುವುದೇ ಎಲ್ಲಾ ಅಲ್ಲ, ಆದರೆ ಭಾನುವಾರ ಮೈದಾನಕ್ಕಿಳಿಯಲಿರುವ 11 ಮಂದಿ ಭಾರತೀಯ ಕ್ರಿಕೆಟಿಗರ ಮನಸಲ್ಲಿ ಗೆಲ್ಲುವುದನ್ನು ಹೊರತುಪಡಿಸಿ ಇನ್ಯಾವ ಯೋಚನೆಯೂ ಇರಲು ಸಾಧ್ಯವಿಲ್ಲ. ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಇಷ್ಟು ದಿನದ್ದು ಒಂದು ಲೆಕ್ಕವಾದರೆ, ಇವತ್ತಿನದ್ದು ಬೇರೆಯದ್ದೇ ಲೆಕ್ಕ. ಟೂರ್ನಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಫೈನಲ್ ನಲ್ಲಿ ಬದ್ಧವೈರಿ ಪಾಕಿಸ್ತಾನವನ್ನು ಎದುರಿಸಲಿರುವ ಭಾರತ, ಕಳೆದ 2 ವಾರಗಳಲ್ಲಿ ಸಾಧಿಸಿರುವ 2 ಗೆಲುವುಗಳಂತೆಯೇ ಮತ್ತೊಂದು ಜಯ ಸಾಧಿಸಿ ಟೂರ್ನಿಯಲ್ಲಿ ಪಾಕ್ ವಿರುದ್ಧದ ತನ್ನೆಲ್ಲಾ ನಡೆಗಳನ್ನು ಸಮರ್ಥಿಸಿಕೊಳ್ಳಲು ಕಾತರಿಸುತ್ತಿದೆ.

ಗುಂಪು ಹಂತದಲ್ಲಿ ‘ನೋ ಹ್ಯಾಂಡ್ ಶೇಕ್’ನಿಂದ ಆರಂಭಗೊಂಡ ಪಾಕ್ ವಿರುದ್ಧದ ಸಮರ, ಬಹಿರಂಗವಾಗಿ ಆ ದೇಶದ ಉಗ್ರವಾದವನ್ನು ಖಂಡಿಸುವುದು, ಪಾಕ್ ನಮಗೆ ಪ್ರತಿಸ್ಪರ್ಧಿಯೇ ಅಲ್ಲ ಎನ್ನುವ ದಿಟ್ಟ ಹೇಳಿಕೆ ಹೀಗೆ ಹಲವು ಮಜಲುಗಳನ್ನು ಕಂಡಿದೆ. ಆದರೆ ಫೈನಲ್‌ನಲ್ಲಿ ಗೆಲ್ಲದಿದ್ದರೆ ಇದ್ಯಾವುದೂ ಲೆಕ್ಕಕ್ಕೆ ಬರಲ್ಲ ಎನ್ನುವ ಸತ್ಯ ಭಾರತೀಯ ಆಟಗಾರರಿಗೆ ಗೊತ್ತಿದೆ. ಹೀಗಾಗಿ, ತಮ್ಮೆಲ್ಲಾ ಕೌಶಲ್ಯ, ಸಾಮರ್ಥ್ಯವನ್ನು ಬಳಸಿ ಪಾಕಿಸ್ತಾನವನ್ನು ಮತ್ತೊಮ್ಮೆ ಹೊಸಕಿ ಹಾಕಲು ಸೂರ್ಯಕುಮಾರ್ ಪಡೆ ಕಾತರಿಸುತ್ತಿದೆ.

ಮತ್ತೊಂದೆಡೆ ಪಾಕಿಸ್ತಾನ ಕೂಡ ಭಾರತಕ್ಕೆ ದಿಟ್ಟ ಉತ್ತರ ನೀಡಲು ಕಾತರಿಸುತ್ತಿದೆ. ಬಾಂಗ್ಲಾದೇಶ ಹಾಗೂ ಶ್ರೀಲಂಕಾ ವಿರುದ್ಧ ಸುಧಾರಿತ ಆಟವಾಡಿದೆ. ಹೀಗಾಗಿ ಫೈನಲ್‌ನಲ್ಲಿ ತಂಡದಿಂದ ಕಠಿಣ ಪೈಪೋಟಿ ಎದುರಾದರೆ ಸೂರ್ಯಕುಮಾರ್ ಪಡೆ ಅಚ್ಚರಿಗೊಳ್ಳಬೇಕಿಲ್ಲ.

ಪಾಂಡ್ಯ ಅಲಭ್ಯ?: 

ದುಬೈನ ಧಗೆಯಿಂದ ಸ್ನಾಯು ಸೆಳೆತಕ್ಕೆ ಒಳಗಾಗಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಫೈನಲ್‌ಗೆ ಅಲಭ್ಯರಾಗುವ ಆತಂಕವಿದೆ. ಅವರ ಲಭ್ಯತೆ ಬಗ್ಗೆ ಪಂದ್ಯದ ದಿನ ಬೆಳಗ್ಗೆ ನಿರ್ಧರಿಸುವುದಾಗಿ ಬೌಲಿಂಗ್ ಮಾರ್ಕೆಲ್ ಹೇಳಿದ್ದಾರೆ. ಒಂದು ವೇಳೆ ಪಾಂಡ್ಯ ಹೊರಬಿದ್ದರೆ ಅರ್ಶ್‌ದೀಪ್ ಹೆಗಲಿಗೆ ಬೌಲಿಂಗ್ ಜವಾಬ್ದಾರಿ ಬೀಳಲಿದೆ. ಆದರೆ ಬ್ಯಾಟಿಂಗ್ ವಿಭಾಗದಲ್ಲಿ ಭಾರತಕ್ಕೆ ತುಸು ಹಿನ್ನಡೆ ಆಗಬಹುದು. ಕುಲ್ದೀಪ್ ಹಾಗೂ ವರುಣ್ ಚಕ್ರವರ್ತಿ ರನ್ ನೀಡುವುದರಲ್ಲಿ ಎಷ್ಟು ಕಂಜೂಸುತನ ಮಾಡುತ್ತಾರೋ ಭಾರತಕ್ಕೆ ಅಷ್ಟು ಲಾಭ, ಜಸ್‌ಪ್ರೀತ್ ಬುಮ್ರಾ ಪವರ್-ಪ್ಲೇನಲ್ಲಿ ಎಸೆಯುವ 3, ಡೆತ್ ಓವಸ್ ನಲ್ಲಿ ಎಸೆಯುವ 1 ಓವರ್ ಪಂದ್ಯದ ಫಲಿತಾಂಶದ ಮೇಲೆ ಸಹಜವಾಗಿಯೇ ಪರಿಣಾಮ ಬೀರಲಿದೆ.

ಭಾರತಕ್ಕೆ 9ನೇ, ಪಾಕ್‌ಗೆ 3ನೇ ಟ್ರೋಫಿ ಜಯದ ಗುರಿ

1984ರಲ್ಲಿ ಆರಂಭಗೊಂಡ ಏಷ್ಯಾಕಪ್‌ನಲ್ಲಿ ಇದು 17ನೇ ಆವೃತ್ತಿ. ಹಿಂದಿನ 16 ಆವೃತ್ತಿಗಳಲ್ಲಿ ಭಾರತ 8 ಬಾರಿ, ಪಾಕಿಸ್ತಾನ 2 ಬಾರಿ ಚಾಂಪಿಯನ್ ಆಗಿವೆ. ಎರಡೂ ತಂಡಗಳು ಮತ್ತೊಮ್ಮೆ ಪ್ರಶಸ್ತಿ ಗೆಲ್ಲಲು ಎದುರು ನೋಡುತ್ತಿವೆ.

ಅಭಿಷೇಕ್ ಶಾಹೀನ್ ರೌಂಡ್ 3 ಜಿದ್ದಾಜಿದ್ದಿ!

ಭಾರತ ತನ್ನ ಆರಂಭಿಕ ಅಭಿಷೇಕ್ ಶರ್ಮಾ ಮೇಲೆ ಹೆಚ್ಚು ಅವಲಂಬಿತಗೊಂಡಿದೆ. 6 ಇನ್ನಿಂಗ್ನಲ್ಲಿ ಅಭಿಷೇಕ್ 309 ರನ್ ಕಲೆಹಾಕಿದ್ದಾರೆ. ತಂಡದ ಪರ 2ನೇ ಗರಿಷ್ಠ ರನ್ ಸರದಾರ ತಿಲಕ್ ಗಳಿಸಿರುವುದು 144 ರನ್. ಈ ಅಂತರವೇ ಅಭಿಷೇಕ್‌ರ ಕೊಡುಗೆ ಎಷ್ಟು ಮುಖ್ಯ ಎನ್ನುವುದನ್ನು ತಿಳಿಸುತ್ತದೆ. ಪಾಕ್‌ನ ಮುಂಚೂಣಿ ವೇಗಿ ಶಾಹೀನ್ ಅಫ್ರಿದಿ ವಿರುದ್ಧ ಅಭಿಷೇಕ್ ಶರ್ಮಾ ಕಳೆದೆರಡು ಪಂದ್ಯದಲ್ಲಿ ಮೇಲುಗೈ ಸಾಧಿಸಿದ್ದಾರೆ. ಶಾಹೀನ್‌ರಿಂದ ಎದುರಿಸಿದ 14 ಎಸೆತದಲ್ಲಿ 31 ರನ್ ಚಚ್ಚಿದ್ದಾರೆ. ಇಬ್ಬರ ನಡುವಿನ ಜಿದ್ದಾಜಿದ್ದಿಯ 3ನೇ ಸುತ್ತು ಎರಡೂ ತಂಡಗಳಿಗೆ ನಿರ್ಣಾಯಕ.

ಭಾರತ ತಂಡಕ್ಕೆ ಕ್ಯಾಚಿಂಗ್, ನಾಯಕ ಸೂರ್ಯಕುಮಾರ್ ಲಯದ್ದೇ ಚಿಂತೆ!

ಅಭಿಷೇಕ್‌ ಅಬ್ಬರ, ಕುಲೀಪ್‌ ಅಮೋಘ ಬೌಲಿಂಗ್ (13 ವಿಕೆಟ್) ಟೂರ್ನಿ ಯಲ್ಲಿ ಭಾರತವನ್ನು ಅಜೇಯವಾಗಿರಿಸಿದೆ. ಭಾರತ ಆಡಿರುವ ಆರೂ ಪಂದ್ಯ ಗೆದ್ದಿದೆ ಎಂದ ಮಾತ್ರಕ್ಕೆ ತಂಡದಲ್ಲಿ ಸಮಸ್ಯೆ ಇಲ್ಲ ಅಂತೇನೂ ಇಲ್ಲ. ಟೂರ್ನಿ ಯಲ್ಲಿ ಭಾರತ 20 ಕ್ಯಾಚ್ ಕೈಚೆಲ್ಲಿದೆ. ನಾಯಕ ಸೂರ್ಯ 6 ಇನ್ನಿಂಗ್ಸ್‌ನಲ್ಲಿ ಗಳಿಸಿ ರುವುದು 71 ರನ್. ಎರಡೂ ಸಮಸ್ಯೆಗೆ ಭಾರತ ಪರಿಹಾರ ಕಂಡುಕೊಳ್ಳಬೇಕಿದೆ.

ಪಂದ್ಯ ಆರಂಭ: ರಾತ್ರಿ 8ಕ್ಕೆ,

ಪ್ರಸಾರ: ಸೋನಿ ಸ್ಪೋರ್ಟ್ಸ್/ಸೋನಿ ಲಿವ್

ಗೆದ್ದರೆ ಪಾಕ್‌ನ ನಖಿಯಿಂದ ಟ್ರೋಫಿ ಸ್ವೀಕರಿಸುತ್ತಾ ಭಾರತ?

ಭಾರತ ತಂಡ ಫೈನಲ್‌ನಲ್ಲಿ ಗೆದ್ದರೆ ಏಷ್ಯಾ ಕ್ರಿಕೆಟ್ ಮಂಡಳಿ (ಎಸಿಸಿ) ಮುಖ್ಯಸ್ಥರೂ ಆಗಿರುವ ಪಾಕಿಸ್ತಾನದ ಆಂತರಿಕ ವ್ಯವಹಾರಗಳ ಸಚಿವ ಮೊಹ್ಸಿನ್ ನಖ್ವಿ ಅವ ರಿಂದ ಟ್ರೋಫಿ ಸ್ವೀಕರಿಸುತ್ತಾ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಪಾಕ್ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಸಹ ಆಗಿರುವ ನಖ್ವಿ ಎಸಿಸಿ ಮುಖ್ಯಸ್ಥರಾಗಿ ರುವ ಕಾರಣ ಪ್ರಶಸ್ತಿ ವಿತರಣಾ ಸಮಾ ರಂಭದಲ್ಲಿ ಪಾಲ್ಗೊಳ್ಳುವುದು ಕಡ್ಡಾಯ. ಹೀಗಾಗಿ, ಅವರೊಂದಿಗೆ ಭಾರತ ಹ್ಯಾಂಡ್ ಶೇಕ್ ಮಾಡುತ್ತಾ?, ಅವರಿಂದ ಪ್ರಶಸ್ತಿ ಸ್ವೀಕರಿಸುತ್ತಾ ಎನ್ನುವ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಮೈದಾನದಲ್ಲಿ ಭಾರತೀಯ ಅಭಿಮಾನಿಗಳು ವಿಮಾನ ಬೀಳುವಂತೆ ಕೈ ಸನ್ನೆ ಮಾಡುವಂತೆ ಹ್ಯಾರಿಸ್ ರೌಫ್‌ಗೆ ಕುಮ್ಮಕ್ಕು ನೀಡಿದ್ದೇ ನಖ್ವಿ ಎಂದು ಹೇಳಲಾಗುತ್ತಿದೆ. ಅಲ್ಲದೇ, ಭಾರತದ ನಾಯಕ ಸೂರ್ಯಕುಮಾರ್ ಹಾಗೂ ಮ್ಯಾಚ್ ರೆಫ್ರಿ ಆ್ಯಂಡಿ ಪೈಕ್ರಾಫ್ಟ್ ವಿರುದ್ಧ ಐಸಿಸಿಗೆ ದೂರು ನೀಡಿದ್ದೇ ನಖ್ವಿ.



Source link

Leave a Reply

Your email address will not be published. Required fields are marked *