Headlines

Bihar first BJP Chief Minister: ಬಿಹಾರ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ | Nitish Kumar Era End Samrat Chaudhary Takes Oath As First Bjp Cm Of Bihar

Bihars First BJP CM: ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ನೂತನ ಸಿಎಂಗೆ ಪ್ರಮಾಣವಚನ ಬೋಧಿಸಿದರು.

ಪಾಟ್ನಾ: ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಇಂದು ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಕೇಸರಿ ಪಕ್ಷದಿಂದ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಗೌರವಕ್ಕೆ ಸಾಮ್ರಾಟ್ ಚೌಧರಿ ಪಾತ್ರರಾಗಿದ್ದಾರೆ.

ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ ಹಸ್ನೈನ್ ಅವರು ಇಲ್ಲಿನ ಲೋಕಭವನದಲ್ಲಿ ಸಾಮ್ರಾಟ್‌ ಚೌಧರಿ ಅವರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಜೆಡಿ (ಯು) ನ ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಅವರು ಕೂಡ ಸಚಿವ ಸಂಪುಟದ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿ, ಜೆಡಿ (ಯು) ಮತ್ತು ಇತರ ಮೂರು ಪಕ್ಷಗಳನ್ನು ಒಳಗೊಂಡಿರುವ ಬಿಹಾರದ ಆಡಳಿತಾರೂಢ ಎನ್‌ಡಿಎಯ ಉನ್ನತ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಚಿರಾಗ್ ಪಾಸ್ವಾನ್, ನಿತೀಶ್ ಕುಮಾರ್ ಮತ್ತು ಎಲ್ಲಾ ಎನ್‌ಡಿಎ ಶಾಸಕರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈಗ ರಾಜ್ಯಸಭಾ ಸಂಸದರಾಗಿರುವ ನಿತೀಶ್ ಕುಮಾರ್ ಮಂಗಳವಾರ ಬಿಹಾರದ ಮುಖ್ಯಮಂತ್ರಿ ಹುದ್ದೆಯನ್ನು ತ್ಯಜಿಸಿದರು, ನಿತೀಶ್ ಕುಮಾರ್ ಸಂಪುಟದಲ್ಲಿ ಈಗ ಮುಕ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಉಪಮುಖ್ಯಮಂತ್ರಿಯಾಗಿದ್ದರು ಮತ್ತು ನಿರ್ಣಾಯಕ ಗೃಹ ಖಾತೆಯನ್ನು ಹೊಂದಿದ್ದರು.

2017 ರಲ್ಲಿ ಬಿಜೆಪಿಗೆ ಸೇರಿದ ಸಾಮ್ರಾಟ್ ಚೌಧರಿ ಅವರನ್ನು ಮಂಗಳವಾರ ನಡೆದ ಸಭೆಯಲ್ಲಿ ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್ ಮತ್ತು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಉನ್ನತ ನಾಯಕರ ಸಮ್ಮುಖದಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿತ್ತು. ಶಿವರಾಜ್ ಸಿಂಗ್ ಅವರನ್ನು ಸಂಸದೀಯ ಮಂಡಳಿಯು ಪರಿವರ್ತನೆಗಾಗಿ ಕೇಂದ್ರ ವೀಕ್ಷಕ ಎಂದು ಹೆಸರಿಸಿತ್ತು.

Source link

Leave a Reply

Your email address will not be published. Required fields are marked *