
ವಿಧಾನಸಭೆ ಉಪ ಚುನಾವಣೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹಾಗೂ ಮಂಗಳವಾರ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ಪ್ರಚಾರ ಕಣಕ್ಕೆ ಇಳಿಯುತ್ತಿರುವುದರಿಂದ ಕಣ ರಂಗೇರುವುದು ನಿಶ್ಚಿತವಾಗಿದೆ.
ಬೆಂಗಳೂರು : ವಿಧಾನಸಭೆ ಉಪ ಚುನಾವಣೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹಾಗೂ ಮಂಗಳವಾರ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ಪ್ರಚಾರ ಕಣಕ್ಕೆ ಇಳಿಯುತ್ತಿರುವುದರಿಂದ ಕಣ ರಂಗೇರುವುದು ನಿಶ್ಚಿತವಾಗಿದೆ.
ವಿಶೇಷ ವಿಮಾನ ಮೂಲಕ ಬಳ್ಳಾರಿಗೆ ತೆರಳಲಿರುವ ಸಿದ್ದರಾಮಯ್ಯ
ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಬಳ್ಳಾರಿಗೆ ತೆರಳಲಿರುವ ಸಿದ್ದರಾಮಯ್ಯ ಅವರು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ತೆರಳಲಿದ್ದಾರೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಉಮೇಶ್ ಮೇಟಿ ಪರ ಮತಯಾಚನೆ
ಬೆಳಗ್ಗೆ 11 ಗಂಟೆಗೆ ಸುತಗುಂಡಾರ ಗ್ರಾಮದಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್‌ನಿಂದ ಆಯೋಜಿಸಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಯಾಚನೆ ಮಾಡಲಿದ್ದಾರೆ. ಬಳಿಕ ನಾಯನೇಗಲಿ, ರಾಂಪುರ, ಬೇವೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಆಲಮಟ್ಟಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಬಳಿಕ ಮಂಗಳವಾರ ಬೆಳಗ್ಗೆ 10.50ಕ್ಕೆ ಬಾಗಲಕೋಟೆಯ ಮುಗೊಳ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನೀಲಾನಗರ ಗ್ರಾಮ, ಸಂಜೆ 4 ಗಂಟೆಗೆ ಐಹೊಳೆ, 6 ಗಂಟೆಗೆ ಅಮೀನಗಡ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಂಗಳವಾರ ರಾತ್ರಿ ಬಾಗಲಕೋಟೆಯಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.