Headlines

BJP Win Prediction: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕೇಂದ್ರ ಸಚಿವ ವಿ.ಸೋಮಣ್ಣ ವಿಶ್ವಾಸ | Bjp Will Win Byelections Says V Somanna Karnataka Politics News Gvd

BJP Win Prediction: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕೇಂದ್ರ ಸಚಿವ ವಿ.ಸೋಮಣ್ಣ ವಿಶ್ವಾಸ | Bjp Will Win Byelections Says V Somanna Karnataka Politics News Gvd



BJP Win Prediction: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕೇಂದ್ರ ಸಚಿವ ವಿ.ಸೋಮಣ್ಣ ವಿಶ್ವಾಸ | Bjp Will Win Byelections Says V Somanna Karnataka Politics News Gvd

ರಾಜ್ಯದಲ್ಲಿ ನಡೆಯಲಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತುಮಕೂರು (ಮಾ.22): ರಾಜ್ಯದಲ್ಲಿ ನಡೆಯಲಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಸಂಸದರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಈ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಉಂಟಾಗಿರುವ ಅರಾಜಕತೆ, ನೋವನ್ನು ಚುನಾವಣೆ ಮೂಲಕ ತೋರಿಸುವ ಸದಾವಕಾಶ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಮತದಾರರಿಗೆ ದೊರೆತಿದೆ. ಈ ಉಪಚುನಾವಣೆಯಲ್ಲಿ ಈ ಎರಡೂ ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ಬಿಜೆಪಿಗೆ ಮತ ಚಲಾಯಿಸುವ ಮೂಲಕ ಕಾಂಗ್ರೆಸ್ ದುರಾಡಳಿತವನ್ನು ಅನಾವರಣ ಮಾಡುವ ಸದಾವಕಾಶವನ್ನು ಉಪಯೋಗಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.

ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿಯ ಚಿಂತನೆಯೇ ಕಾರಣ. ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಸಮಸ್ಯೆ ಉಂಟಾಗದಂತೆ ಈಗಾಗಲೇ ಆಹಾರ ಸಚಿವರು ಗ್ಯಾಸ್ ವಿತರಕರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ಅಧಿಕಾರಿಗಳು ಸಹ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಅವರು ಸಲಹೆ ಹೇಳಿದರು.

ಆತಂಕ ಪಡುವ ಅಗತ್ಯವಿಲ್ಲ

ಇನ್ನೆರಡು ದಿನಗಳಲ್ಲಿ ಇನ್ನೂ 2 ಹಡಗುಗಳಲ್ಲಿ ದೇಶಕ್ಕೆ ಗ್ಯಾಸ್ ಬರುತ್ತಿದೆ. ಜನತೆ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಪ್ರಪಂಚದ ಬೇರೆ, ಬೇರೆ ಭಾಗಗಳಲ್ಲಿ ಆಗುವ ಅನಾಹುತಗಳಿಂದ ನಮ್ಮ ದೇಶವನ್ನು ಯಾವ ರೀತಿ ಸಂರಕ್ಷಣೆ ಮಾಡಬೇಕು ಎಂಬ ದೂರದೃಷ್ಠಿಯನ್ನು ಪ್ರಧಾನಿಯವರು ಹೊಂದಿದ್ದಾರೆ. ಮುಂದಿನ 3-4 ದಿನಗಳಲ್ಲಿ ಯುದ್ಧದ ವಾತಾವರಣ ತಿಳಿಯಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ ಎಂದು ಅವರು ಹೇಳಿದರು.



Source link

Leave a Reply

Your email address will not be published. Required fields are marked *