
ಪಾಕಿಸ್ತಾನದ ಬಲೋಚ್ ಪ್ರಾಂತ್ಯದಲ್ಲಿ ಭೀಕರವಾದ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಈ ದುರಂತದಲ್ಲಿ ಕನಿಷ್ಠ 10 ಜನ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಬಲೋಚ್ ಪ್ರಾಂತ್ಯದಲ್ಲಿ ಭೀಕರವಾದ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಈ ದುರಂತದಲ್ಲಿ ಕನಿಷ್ಠ 10 ಜನ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಪಾಕಿಸ್ತಾನದ ಕ್ವೆಟಾದಲ್ಲಿರುವ ಪಾಕಿಸ್ತಾನದ ಪ್ಯಾರಾ ಮಿಲಿಟರಿ ಪ್ರಧಾನ ಕಚೇರಿ ಮುಂದೆಯೇ ಪ್ರಬಲವಾದ ಕಾರು ಬಾಂಬ್ ಸ್ಫೊಟ ಸಂಭವಿಸಿದ್ದು 10 ಜನ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಪ್ರಮುಖ ಮಾಧ್ಯಮ ಡಾನ್ ನ್ಯೂಸ್ ವರದಿ ಮಾಡಿದೆ.