Headlines

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ, ಟನ್ ಕಬ್ಬಿಗೆ 3300 ನಿಗದಿ: ಎಚ್‌.ಕೆ. ಪಾಟೀಲ್ ಹೇಳಿದ್ದೇನು? | Karnataka Govt Announces 3300 Sugarcane Price Hk Patil Statement Gvd

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ, ಟನ್ ಕಬ್ಬಿಗೆ 3300 ನಿಗದಿ: ಎಚ್‌.ಕೆ. ಪಾಟೀಲ್ ಹೇಳಿದ್ದೇನು? | Karnataka Govt Announces 3300 Sugarcane Price Hk Patil Statement Gvd



ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ, ಟನ್ ಕಬ್ಬಿಗೆ 3300 ನಿಗದಿ: ಎಚ್‌.ಕೆ. ಪಾಟೀಲ್ ಹೇಳಿದ್ದೇನು? | Karnataka Govt Announces 3300 Sugarcane Price Hk Patil Statement Gvd

ಕಬ್ಬಿಗೆ 3500 ರೂಪಾಯಿ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿದ ರೈತರ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಚ್‌.ಕೆ. ಪಾಟೀಲ್ 1 ಟನ್ ಕಬ್ಬಿಗೆ 3300 ನಿಗದಿ ಮಾಡಲಾಗಿದೆ.

ಬೆಂಗಳೂರು (ನ.07): ಕಬ್ಬಿಗೆ 3500 ರೂಪಾಯಿ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿದ ರೈತರ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಚ್‌.ಕೆ. ಪಾಟೀಲ್ 1 ಟನ್ ಕಬ್ಬಿಗೆ 3300 ನಿಗದಿ ಮಾಡಲಾಗಿದೆ. ಅಲ್ಲದೇ ರಾಜ್ಯ ಸರ್ಕಾರದಿಂದ 1 ಟನ್ ಕಬ್ಬಿಗೆ 50 ರೂ ಸಬ್ಸಿಡಿ ನೀಡಲು ಒಪ್ಪಿಗೆ ನೀಡಿದೆ. ಸಕ್ಕರೆ ಕಾರ್ಖಾನೆ ಮಾಲೀಕರಿಂದ 3,250 ನಿಗದಿ ಮಾಡಲಾಗಿದೆ ಎಂದರು.

ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು:

* ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ, ಸಕ್ಕರೆ ಎಂಎಸ್ಪಿ ಹೆಚ್ಚಳ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಕೋರಿ ಪ್ರಧಾನಿಯವರಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ಅವರು ಸಮಯ ನೀಡಿದರೆ ನಾಳೆಯೇ ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಲು ಸಿದ್ಧರಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ರೈತರ ಹಿತದೃಷ್ಟಿಯಿಂದ ಕೈಗೊಳ್ಳುವ ತೀರ್ಮಾನಗಳನ್ನು ಎಲ್ಲರೂ ಒಪ್ಪಿಕೊಳ್ಳಬೇಕು.

* ಸಕ್ಕರೆಗೆ ಎಮ್ಎಸ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ.

* ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಸರ್ಕಾರ ದಿನಾಂಕ 6-05-2025ರಂದು ಕಬ್ಬಿಗೆ ಎಫ್ಆರ್ಪಿ ನಿಗದಿಪಡಿಸಿದೆ. ಈ ಎಫ್ಆರ್ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಎಂಎಸ್ಪಿ ಹೆಚ್ಚಳ ಮಾಡಿಲ್ಲ.

* ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.

* ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲಾಗುವುದು ಎಂದು ರೈತ ಮುಖಂಡರಿಗೆ ತಿಳಿಸಿದ್ದೇವೆ.

* ಕಬ್ಬಿನ11.25 ರಿಕವರಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ.

* ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕು ಎಂದು ಕಾರ್ಖಾನೆ ಮಾಲೀಕರು ಮನವಿ ಮಾಡಿದ್ದು, ಇದರ ಮರು ಪರಿಶೀಲನೆ ನಡೆಸಲಾಗುವುದು.

* ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು.



Source link

Leave a Reply

Your email address will not be published. Required fields are marked *