
ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು: ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡ ಅಧ್ಯಕ್ಷ
ಡಾ. ಬಿ.ಡಿ.ಭೂಕಾಂತ್ ಅಧ್ಯಕ್ಷರಾಗಿರುವ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳ ಸೇರಿ 54 ನಿಗಮ-ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಕಳೆದ ವಾರ ಆದೇಶಿಸಿತ್ತು.
ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ
ಆದರೆ, ಭೂಕಾಂತ್ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಮೂಡಿತ್ತು. ಅಲ್ಲದೆ, ಈ ಕೂಡಲೇ ಅವರಿಗೆ ನೀಡಲಾದ ಸ್ಥಾನಮಾನವನ್ನು ಹಿಂಪಡೆಯುವಂತೆಯೂ ಸರ್ಕಾರವನ್ನು ಒತ್ತಾಯಿಸಿದ್ದರು. ಕಾರ್ಯಕರ್ತರ ಒತ್ತಡಕ್ಕೆ ಮಣಿದಿರುವ ಸರ್ಕಾರ ಭೂಕಾಂತ್ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನವನ್ನು ಹಿಂಪಡೆದಿದೆ.