ಬೆದರಿಕೆ ಹಾಕಿದ ಆರೋಪ: ಹೆಚ್‌ಡಿ ಕುಮಾರಸ್ವಾಮಿ-ಚಂದ್ರಶೇಖರ್ ಸಂಘರ್ಷಕ್ಕೆ ಕೋರ್ಟ್‌ನಿಂದಲೇ ಮಧ್ಯಸ್ಥಿಕೆದಾರ | Karnataka High Court To Appoint Mediator In Hd Kumaraswamy Lokayukta Adgp Chandrashekar Case Gdp

ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣವನ್ನು ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಮಧ್ಯಸ್ಥಿಕೆದಾರರನ್ನು ನೇಮಿಸುವುದಾಗಿ ತಿಳಿಸಿದೆ.

 ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಹಾಗೂ ಎಸ್‌ಐಟಿ ಮುಖ್ಯಸ್ಥ ಎಂ. ಚಂದ್ರಶೇಖರ್ ಮತ್ತು ಅವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಬೆದರಿಕೆ ಹಾಕಿರುವ ಆರೋಪ ಸಂಬಂಧಿಸಿದ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಪ್ರಕರಣವನ್ನು ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಹೈಕೋರ್ಟ್ ಮಧ್ಯಸ್ಥಿಕೆದಾರರನ್ನು ನೇಮಕ ಮಾಡುವುದಾಗಿ ತಿಳಿಸಿದೆ.

ಕುಮಾರಸ್ವಾಮಿ ಹಾಗೂ ಇತರರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಪೀಠ ಗುರುವಾರ ವಿಚಾರಣೆ ನಡೆಸಿತು.

ಸಂಧಾನಕ್ಕೆ ಇಬ್ಬರ ಸಹಮತಿ

ವಿಚಾರಣೆ ವೇಳೆ ನ್ಯಾಯಪೀಠ ಹೇಳುವಂತೆ, ಈ ಹಿಂದೆ ನೀಡಿದ ಸಲಹೆಯಂತೆ ಪ್ರಕರಣವನ್ನು ಸಂಧಾನದ ಮೂಲಕ ಬಗೆಹರಿಸಲು ಕುಮಾರಸ್ವಾಮಿ ಮತ್ತು ಚಂದ್ರಶೇಖರ್ ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ. ಇದರ ಹಿನ್ನೆಲೆಯಲ್ಲಿ ನ್ಯಾಯಾಲಯವೇ ಸೂಕ್ತ ಮಧ್ಯಸ್ಥಿಕೆದಾರರನ್ನು ನೇಮಕ ಮಾಡಲಿದೆ ಎಂದು ತಿಳಿಸಿತು.

ಮಧ್ಯಸ್ಥಿಕೆದಾರ ನೇಮಕ

ಪ್ರಕರಣವನ್ನು ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲು, ಅನುಭವ ಹೊಂದಿದ ಮಧ್ಯಸ್ಥಿಕೆದಾರರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ. ಮಧ್ಯಸ್ಥಿಕೆಯ ದಿನಾಂಕ ಮತ್ತು ಸ್ಥಳವನ್ನು ಶೀಘ್ರದಲ್ಲೇ ನಿಗದಿಪಡಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 30ಕ್ಕೆ ಮುಂದೂಡಲಾಗಿದೆ.

ಪ್ರಕರಣದ ಹಿನ್ನೆಲೆ

ಎಚ್.ಡಿ.‌ಕುಮಾರಸ್ವಾಮಿ ಅವರು‌ ತಮ್ಮ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಚಂದ್ರಶೇಖರ್‌, ಸಂಜಯನಗರ ಪೊಲೀಸ್‌ ಠಾಣೆಯಲ್ಲಿ 2024ರಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಭಾರತೀಯ ನ್ಯಾಯ ಸಂಹಿತಾ–2023ರ (ಬಿಎನ್‌ಎಸ್‌) ಕಲಂ 224 (ಸರ್ಕಾರಿ ನೌಕರರಿಗೆ ಅವರ ಅಧಿಕೃತ ಕರ್ತವ್ಯಗಳ ಮೇಲೆ ಪ್ರಭಾವ ಬೀರಲು ಬೆದರಿಕೆ ಹಾಕಿದ) ಆರೋಪದಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಅದನ್ನು ರದ್ದುಪಡಿಸುವಂತೆ ಕೋರಿ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

Source link

Leave a Reply

Your email address will not be published. Required fields are marked *