ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯಿತಿಯಲ್ಲಿ, ಮನೆ ನಿರ್ಮಾಣಕ್ಕೆ ಇ-ಸ್ವತ್ತು ಹಾಗೂ ಪರವಾನಗಿ ನೀಡದ ಪಿಡಿಒ ಕ್ರಮಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಕಚೇರಿಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮ೧ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಹರಪನಹಳ್ಳಿ (ಫೆ.18) : ಪಿಡಿಒ ಮನೆ ಕಟ್ಟಲು ಪರವಾನಗಿ ನೀಡದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಆತ್ಮ೧ಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯಿತಿಯಲ್ಲಿ ತಡವಾಗಿ ಬೆಳೆಕಿಗೆ ಬಂದಿದೆ.
ಕಡಬಗೆರೆ ಪಂಚಾಯತ್ ವ್ಯಾಪ್ತಿಯ ಪವನಪುರ ಗ್ರಾಮದ ನಿವಾಸಿ ಕೆ.ಬಸವರಾಜ್ ಎಂಬುವವರು ಗ್ರಾಮ ಪಂಚಾಯತ್ ಕಚೇರಿಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆ ಹೇಗಾಯ್ತು?
ಮನೆ ನಿರ್ಮಾಣಕ್ಕೆ ಇ-ಸ್ವತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದರೂ ಅನುಮತಿ ನೀಡಿಲ್ಲ. ಪರವಾನಗಿ ಇಲ್ಲದೇ ಬ್ಯಾಂಕ್ ಸಾಲ ಸಿಗುತ್ತಿಲ್ಲ. ಕಳೆದ ಆರು ತಿಂಗಳಿನಿಂದ ಕಚೇರಿಗೆ ಸುತ್ತಾಡುತ್ತಿದ್ದೇನೆ ಎಂದು ಪಿಡಿಒ ಕೃಷ್ಣಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲೇ ಅರ್ಧ ಲೀಟರ್ ಪೆಟ್ರೋಲ್ ಸುರಿದುಕೊಂಡು ಆತ್ಮ೧ಹತ್ಯೆಗೆ ಯತ್ನಿಸಿದ್ದಾರೆ. ಘಟನೆಯನ್ನು ಗಮನಿಸಿದ ಪಿಡಿಒ ಕೃಷ್ಣಪ್ಪ ಹಾಗೂ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಕಾಪಾಡಿದ್ದಾರೆ. ಜ. 31ರಂದು ಈ ಘಟನೆ ಜರುಗಿದೆ.
ಗಮನಿಸಿ:
ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ದುಡುಕಿನಿಂದ ಆ8ಹತ್ಯೆಯ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆಗೆ ಯಾವುದೇ ಪರಿಹಾರ ಸಿಗಲ್ಲ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಸ್ವಯಂಹಾನಿ ಮಾಡಿಕೊಳ್ಳುವ ಯೋಚನೆ/ಮನೋವ್ಯಥೆ ಅನುಭವಿಸುತ್ತಿದ್ದರೆ ಅಥವಾ ಸಂಕಷ್ಟದ ಸ್ಥಿತಿಯಲ್ಲಿದ್ದರೆ, ದಯವಿಟ್ಟು ಯಾರೊಂದಿಗಾದರೂ ಮಾತನಾಡಿ, ಅದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ಕರ್ನಾಟಕದಲ್ಲಿ ಸಹಾಯ ಮತ್ತು ಸಮಾಲೋಚನೆಗಾಗಿ ಕೆಳಗಿನ ಸೇವೆಗಳು ಲಭ್ಯವಿವೆ: 24×7 ಮಾನಸಿಕ ಆರೋಗ್ಯ ಸಹಾಯವಾಣಿ ಟೆಲಿ-ಮಾನಸ್ (Tele-MANAS): 14416 ಅಥವಾ 1800-89-14416 (ರಾಷ್ಟ್ರೀಯ ಟೆಲಿ-ಮಾನಸಿಕ ಆರೋಗ್ಯ ಸೇವೆ). ಇದೆ ಸಂಪರ್ಕಿಸಿ.
